ಬೆಂಗಳೂರು : ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಹೈಕೋರ್ಟ್ನಿಂದ ತಡೆ
ಬೆಂಗಳೂರು, ಜನವರಿ 09 : ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಜೂನ್ ತಿಂಗಳ ತನಕ ಯೋಜನೆ ಜಾರಿಗೊಳಿಸಲು ತಡೆ ನೀಡಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ.
ನಮ್ಮ ಬೆಂಗಳೂರು ಕರ್ನಾಟಕ ಸರ್ಕಾರ ಸ್ಟೀಲ್ ಬ್ರೀಡ್ಜ್ ನಿರ್ಮಾಣ ಮಾಡುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ.

ಹಿರಿಯ ವಕೀಲ ವಿಜಯ ಶಂಕರ್ ಅವರು ನಮ್ಮ ಬೆಂಗಳೂರು ಪ್ರತಿಷ್ಠಾನದ ಪರವಾಗಿ ವಾದ ಮಂಡನೆ ಮಾಡಿದರು. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವುದರಿಂದ ಹಸಿರು ನ್ಯಾಯಾಧೀಕರಣದ ತೀರ್ಪಿನ ಉಲ್ಲಂಘನೆ ಆಗುತ್ತದೆ ಎಂದು ವಾದ ಮಂಡಿಸಿದರು.
ಬೆಂಗಳೂರಿನ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೂಲಕ ಈ ಯೋಜನೆಯನ್ನು ಕೈಗೊಳ್ಳಲಾಗುತ್ತದೆ.
ಆದರೆ, ಹಸಿರು ನ್ಯಾಯಾಧೀಕರಣ ಪರಿಸರ ಇಲಾಖೆಯ ಒಪ್ಪಿಗೆ ಪಡೆಯದೇ ಉಕ್ಕಿನ ಸೇತುವೆ ನಿರ್ಮಾಣ ಮಾಡುವಂತಿಲ್ಲ ಎಂದು ಹಿಂದೆ ಆದೇಶ ನೀಡಿತ್ತು. ಈಗ ಯೋಜನೆಯನ್ನು ಬಿಡಿಎ ಪುನಃ ಕೈಗೆತ್ತಿಕೊಳ್ಳಲು ಮುಂದಾಗಿದೆ.
ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಯೋಜನೆ ಈಗ ಯಾವ ಹಂತದಲ್ಲಿದೆ? ಎಂದು ಪ್ರಶ್ನೆ ಮಾಡಿತು. ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ಪರಿಸರ ಇಲಾಖೆಯ ಅನುಮತಿಗೆ ಇನ್ನೂ ಮನವಿ ಮಾಡಿಲ್ಲ ಎಂದು ಹೇಳಿದರು.
ಪರಿಸರ ಇಲಾಖೆಯ ಒಪ್ಪಿಗೆ ಪಡೆಯದೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಯೋಜನೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ಹೇಳಿತು. ಅರ್ಜಿಯ ವಿಚಾರಣೆಯನ್ನು ಜೂನ್ 2019ಕ್ಕೆ ಮುಂದೂಡಿತು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ









Click it and Unblock the Notifications