ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಹೈಕೋರ್ಟ್‌ನಿಂದ ತಡೆ

|
Google Oneindia Kannada News

ಬೆಂಗಳೂರು, ಜನವರಿ 09 : ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಜೂನ್ ತಿಂಗಳ ತನಕ ಯೋಜನೆ ಜಾರಿಗೊಳಿಸಲು ತಡೆ ನೀಡಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ.

ನಮ್ಮ ಬೆಂಗಳೂರು ಕರ್ನಾಟಕ ಸರ್ಕಾರ ಸ್ಟೀಲ್ ಬ್ರೀಡ್ಜ್ ನಿರ್ಮಾಣ ಮಾಡುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ.

ಸ್ಟೀಲ್ ಬ್ರಿಡ್ಜ್ ಯೋಜನೆಗೆ ಬೆಂಗಳೂರು ಉತ್ತರದ ನಾಗರಿಕರ ಜೈಕಾರಸ್ಟೀಲ್ ಬ್ರಿಡ್ಜ್ ಯೋಜನೆಗೆ ಬೆಂಗಳೂರು ಉತ್ತರದ ನಾಗರಿಕರ ಜೈಕಾರ

High court interim stay for Steel Flyover project

ಹಿರಿಯ ವಕೀಲ ವಿಜಯ ಶಂಕರ್ ಅವರು ನಮ್ಮ ಬೆಂಗಳೂರು ಪ್ರತಿಷ್ಠಾನದ ಪರವಾಗಿ ವಾದ ಮಂಡನೆ ಮಾಡಿದರು. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವುದರಿಂದ ಹಸಿರು ನ್ಯಾಯಾಧೀಕರಣದ ತೀರ್ಪಿನ ಉಲ್ಲಂಘನೆ ಆಗುತ್ತದೆ ಎಂದು ವಾದ ಮಂಡಿಸಿದರು.

ಉಕ್ಕಿನ ಸೇತುವೆ ನಿರ್ಮಾಣದಿಂದ ಜನರಿಗೆ ಹೆಚ್ಚು ಅನುಕೂಲ: ಡಿಕೆಶಿಉಕ್ಕಿನ ಸೇತುವೆ ನಿರ್ಮಾಣದಿಂದ ಜನರಿಗೆ ಹೆಚ್ಚು ಅನುಕೂಲ: ಡಿಕೆಶಿ

ಬೆಂಗಳೂರಿನ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೂಲಕ ಈ ಯೋಜನೆಯನ್ನು ಕೈಗೊಳ್ಳಲಾಗುತ್ತದೆ.

ಬೆಂಗಳೂರಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಖಚಿತಬೆಂಗಳೂರಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಖಚಿತ

ಆದರೆ, ಹಸಿರು ನ್ಯಾಯಾಧೀಕರಣ ಪರಿಸರ ಇಲಾಖೆಯ ಒಪ್ಪಿಗೆ ಪಡೆಯದೇ ಉಕ್ಕಿನ ಸೇತುವೆ ನಿರ್ಮಾಣ ಮಾಡುವಂತಿಲ್ಲ ಎಂದು ಹಿಂದೆ ಆದೇಶ ನೀಡಿತ್ತು. ಈಗ ಯೋಜನೆಯನ್ನು ಬಿಡಿಎ ಪುನಃ ಕೈಗೆತ್ತಿಕೊಳ್ಳಲು ಮುಂದಾಗಿದೆ.

ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಯೋಜನೆ ಈಗ ಯಾವ ಹಂತದಲ್ಲಿದೆ? ಎಂದು ಪ್ರಶ್ನೆ ಮಾಡಿತು. ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ಪರಿಸರ ಇಲಾಖೆಯ ಅನುಮತಿಗೆ ಇನ್ನೂ ಮನವಿ ಮಾಡಿಲ್ಲ ಎಂದು ಹೇಳಿದರು.

ಪರಿಸರ ಇಲಾಖೆಯ ಒಪ್ಪಿಗೆ ಪಡೆಯದೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಯೋಜನೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ಹೇಳಿತು. ಅರ್ಜಿಯ ವಿಚಾರಣೆಯನ್ನು ಜೂನ್ 2019ಕ್ಕೆ ಮುಂದೂಡಿತು.

English summary
Karnataka High Court interim stay for Steel Flyover project. Namma Bengaluru Foundation moved High court against Karnataka government proposed Steel Flyover project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X