ಹೈಕೋರ್ಟ್ ಆದೇಶ ಉಲ್ಲಂಘನೆ: ಬಿಬಿಎಂಪಿಗೆ ನೋಟಿಸ್ ಜಾರಿ
ಬೆಂಗಳೂರು, ಮಾರ್ಚ್ 14: ನಿರ್ಮಾಣ ಚಟುವಟಿಕೆಗೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಮಲ್ಲತ್ತಹಳ್ಳಿಯ ಕೆರೆ ಪ್ರದೇಶದಲ್ಲಿ ಯಾವುದೇ ತಾತ್ಕಾಲಿಕ ಇಲ್ಲವೇ ಶಾಶ್ವತ ನಿರ್ಮಾಣದ ಕ್ರಮಗಳನ್ನು ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿತ್ತು. ಕೆರೆಯಲ್ಲಿ ಗಣೇಶ ವಿಸರ್ಜನೆ ಸೇರಿದಂತೆ ಯಾವುದೇ ರೀತಿಯು ಉತ್ಸವಗಳಿಗೆ ಅವಕಾಶ ನೀಡಬಾರದು ಎಂದು ನ್ಯಾಯಾಲಯವು ಸರಿಯಾಗಿ ಒಂದು ವರ್ಷದ ಹಿಂದೆ ಅಂದರೆ ಕಳೆದ ವರ್ಷ 2023ರ ಮಾರ್ಚ್ ಎರಡನೇ ವಾರ ಆದೇಶಿಸಿತ್ತು.

ಹೀಗಿದ್ದರೂ ಸಹಿತ ಕೋರ್ಟ್ ಆದೇಶ ಉಲ್ಲಂಘಿಸಿ ರಸ್ತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಅರ್ಜಿ ವಿಚಾರಣೆ: ನೋಟಿಸ್‌ಗೆ ಸೂಚನೆ
ಈ ವಿಚಾರ ಕುರಿತು ವಕೀಲರಾದ ಗೀತಾ ಮಿಶ್ರಾ ಅವರು ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಸುಮಾರು 70 ಎಕರೆ ಪ್ರದೇಶದಲ್ಲಿ ಮಲ್ಲತ್ತಹಳ್ಳಿ ಕೆರೆ ಇದೆ. ಇದರ ಒಂದು ಭಾಗದಲ್ಲಿ ಪ್ರದೇಶ ಸಂಬಂಧಿಸಿದಂತೆ ವ್ಯಾಜ್ಯ ನಡೆಯುತ್ತಿದೆ. ಈ ಕೆರೆ ಅಭಿವೃದ್ಧಿ, ವ್ಯಾಜ್ಯದ ಕುರಿತು ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ವಾದ ವಿವಾದ ಆಲಿಸಿದ ನ್ಯಾಯಪೀಠವು ಪ್ರತಿವಾದಿಗೆ ನೋಟಿಸ್ ಜಾರಿ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿತು.












Click it and Unblock the Notifications