ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಪಿಯು ಕಾಲೇಜುಗಳ ಶುಲ್ಕ ನಿಗದಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

|
Google Oneindia Kannada News

ಬೆಂಗಳೂರು, ಮೇ 17: ಖಾಸಗಿ ಪಿಯು ಕಾಲೇಜುಗಳ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹ ಹಾಗೂ ನ್ಯಾ.ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ರಜಾಕಾಲದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾಲೇಜು ಶಿಕ್ಷಣ ಆಯುಕ್ತರು ಮತ್ತು ಪ.ಪೂ. ಶಿಕ್ಷಣ ಇಲಾಖೆ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತು.

ಪಿಯು ಫಲಿತಾಂಶದಲ್ಲಿ ಚಿತ್ರದುರ್ಗಕ್ಕೆ ಕೊನೇ ಸ್ಥಾನ ಬರಲು ಕಾರಣವೇನು?ಪಿಯು ಫಲಿತಾಂಶದಲ್ಲಿ ಚಿತ್ರದುರ್ಗಕ್ಕೆ ಕೊನೇ ಸ್ಥಾನ ಬರಲು ಕಾರಣವೇನು?

ರಾಜ್ಯದ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ಶುಲ್ಕ ನಿಗದಿಪಡಿಸುವಂತೆ ಹಾಗೂ ಕಾಲೇಜುಗಳು ದುಬಾರಿ ಶುಲ್ಕ ವಸೂಲಿಗೆ ಕಡಿವಾಣ ಹಾಕುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪೀಠ ವಿಚಾರಣೆ ನಡೆಸಿತು.

High Court issues notice to PU colleges for demanding higher donations

ವಿದ್ಯಾರ್ಥಿಗಳ ಪ್ರವೇಶಕ್ಕೆ ಶೇ.90 ಕಟ್ ಆಫ್ ಅಂಕಗಳ ಸ್ವಯಂಘೋಷಿತ ಮಾನದಂಡಗಳನ್ನು ರೂಪಿಸಿಕೊಂಡಿರುವ ಖಾಸಗಿ ಕಾಲೇಜುಗಳು, ಅದಕ್ಕಿಂತ ಕಡಿಮೆ ಅಂಕ ಪಡೆದ ಮಕ್ಕಳಿಗೆ ಪ್ರವೇಶ ನೀಡಲು ದೊಡ್ಡ ಮೊತ್ತದ ಶುಲ್ಕ ಸಂಗ್ರಹಿಸುತ್ತಿವೆ. ಇದರಿಂದ ಪಾಲಕರಿಗೆ ಹೆಚ್ಚಿನ ಹೊರೆಯಾಗುತ್ತಿದೆ. ಕಟ್ ಆಫ್ ಮಾರ್ಕ್ಸ್ ನಿಗದಿಪಡಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಎನ್‌ಪಿ ಅಮೃತೇಶ್ ವಾದ ಮಂಡಿಸಿದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಇತ್ತೀಚೆಗಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬಂದಿದ್ದು, ಪಿಯುಸಿ ಕೋರ್ಸ್​ಗಳ ಪ್ರವೇಶಾತಿ ಚುರುಕಾಗಿ ನಡೆಯುತ್ತಿವೆ. ಸರ್ಕಾರಿ ಹಾಗೂ ಅನುದಾನಿತ ಪಿಯು ಕಾಲೇಜುಗಳಿಗೆ ಶುಲ್ಕ ನಿಗದಿಪಡಿಸಿರುವ ಸರ್ಕಾರ, ಖಾಸಗಿ ಪಿಯು ಕಾಲೇಜುಗಳಿಗೆ ಶುಲ್ಕ ನಿಗದಿಪಡಿಸಿಲ್ಲ. ಇದರಿಂದ ಖಾಸಗಿ ಕಾಲೇಜುಗಳು, ಪಾಲಕರಿಂದ ಮನ ಬಂದಂತೆ ಶುಲ್ಕ ಸಂಗ್ರಹಿಸಿ ಹಗಲು ದರೋಡೆಗಿಳಿದಿವೆ ಎಂದು ದೂರಿದರು.

English summary
The state High Court issued notice to the state government, Office of Collegiate Education and Pre-University Education Department over the practice of private PU colleges demanding huge sums of money as donations during admissions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X