• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಚ್‌ಡಿಕೆ ವಿರುದ್ಧದ ಮೂರು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

|

ಬೆಂಗಳೂರು, ಡಿಸೆಂಬರ್ 11: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ಮೂರು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.

2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧವಿದ್ದ ಮೂರು ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ.

ಕುಮಾರಸ್ವಾಮಿ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

ಅರ್ಜಿದಾರರ ವಿರುದ್ಧ ವೈಯಕ್ತಿಕ ಹಾಗೂ ನಿರ್ದಿಷ್ಟ ಆರೋಪಗಳಿಲ್ಲ. ಹೀಗಾಗಿ ಅಧೀನ ನ್ಯಾಯಾಲಯ ಅವರ ವಿರುದ್ಧದ ಆರೋಪಗಳನ್ನು ಸಂಜ್ಞೇಯ ಅಪರಾಧ ಎಂದು ವಿಚಾರಣೆಗೆ ಪರಿಗಣಿಸಿರುವುದು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಚುನಾವಣಾ ಅಧಿಕಾರಿಗಳು ದಾಖಲಿಸಿದ್ದ ದೂರು ಗಳನ್ನು ರದ್ದುಗೊಳಿಸಿದೆ.

ನನ್ನ ವಿರುದ್ಧ ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್‌ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ-1860ರ ಕಲಂ 188 ಮತ್ತು 341ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

English summary
The High Court of Karnataka has quashed three criminal cases booked against former Chief Minister H.D. Kumaraswamy regarding violation of election code of conduct.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X