ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿ, ಗುರುವಾರ ತೀರ್ಪು

By Gururaj
|
Google Oneindia Kannada News

ಬೆಂಗಳೂರು, ಜೂನ್ 13 : ಕರ್ನಾಟಕ ಹೈಕೋರ್ಟ್ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿದೆ. ಮೊಹಮ್ಮದ್ ನಲಪಾಡ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾಮೀನು ನೀಡುವಂತೆ ಕೋರಿ ಜೂನ್ 1ರಂದು ಕರ್ನಾಟಕ ಹೈಕೋರ್ಟ್‌ಗೆ ಮೊಹಮ್ಮದ್ ನಲಪಾಡ್‌ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಪೂರ್ಣಗೊಳಿಸಿದೆ. ಗುರುವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ.

ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು ಕಾರಣಗಳು!ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು ಕಾರಣಗಳು!

ಮೇ 30ರಂದು ಸೆಷನ್ಸ್ ಕೋರ್ಟ್ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ಮೊಹಮ್ಮದ್ ನಲಪಾಡ್‌ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು ಮೊಹಮ್ಮದ್ ನಲಪಾಡ್‌ ಪರವಾಗಿ ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ್ದಾರೆ.

ಮೊಹಮ್ಮದ್ ನಲಪಾಡ್‌ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರಮೊಹಮ್ಮದ್ ನಲಪಾಡ್‌ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರ

2018ರ ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ 2 ಬಾರಿ ಸೆಷನ್ಸ್ ಕೋರ್ಟ್, 1 ಬಾರಿ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿವೆ. ಗುರುವಾರ ಜಾಮೀನು ಸಿಗಲಿದೆಯೇ? ಕಾದು ನೋಡಬೇಕು.

ಬಿ.ವಿ.ಆಚಾರ್ಯ ವಾದ ಮಂಡನೆ

ಬಿ.ವಿ.ಆಚಾರ್ಯ ವಾದ ಮಂಡನೆ

ಮೊಹಮ್ಮದ್ ನಲಪಾಡ್‌ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಬಾರಿ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು ವಾದ ಮಂಡನೆ ಮಾಡಿದ್ದಾರೆ. ಮೊಹಮ್ಮದ್ ನಲಪಾಡ್‌ಗೆ ಕೊಲೆ ಮಾಡುವ ಉದ್ದೇಶವಿರಲಿಲ್ಲ. ಸಾಕ್ಷಿಗಳು ಕೊಲೆಯತ್ನಕ್ಕೆ ಪೂರಕವಾಗಿಲ್ಲ. ಆದ್ದರಿಂದ ಜಾಮೀನು ನೀಡಬೇಕು ಎಂದು ವಾದ ಮಂಡನೆ ಮಾಡಿದ್ದಾರೆ.

2018ರ ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಷನ್ಸ್ ಕೋರ್ಟ್‌ 2 ಬಾರಿ, ಕರ್ನಾಟಕ ಹೈಕೋರ್ಟ್ 1 ಬಾರಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಸಾಕ್ಷಿ ನಾಶಮಾಡಬಹುದು

ಸಾಕ್ಷಿ ನಾಶಮಾಡಬಹುದು

ಹಿಂದೆ ಕರ್ನಾಟಕ ಹೈಕೋರ್ಟ್ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ನೀಡಿದಲ್ಲಿ ಆರೋಪಿ ಸಾಕ್ಷಿಗಳನ್ನು ನಾಶ ಮಾಡಬಹುದು ಎಂಬ ಅಂಶವನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿ ಅರ್ಜಿ ತಿರಸ್ಕರಿಸಿತ್ತು.

ಮಾರ್ಚ್ 13ರಂದು ಅರ್ಜಿ ತಿರಸ್ಕಾರ ಮಾಡಿದ್ದ ನ್ಯಾಯಾಲಯ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದರೆ ವಿದ್ವತ್ ಮೇಲೆ ಭಯಾನಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಅನ್ನಿಸುತ್ತದೆ. ಇದೊಂದು ಭಯಾನಕ ಕೃತ್ಯವಾಗಿದೆ ಎಂದು ಅಭಿಪ್ರಾಯಪಟ್ಟು, ಜಾಮೀನು ನೀಡಿರಲಿಲ್ಲ.

600 ಪುಟಗಳ ದೋಷಾರೋಪ ಪಟ್ಟಿ

600 ಪುಟಗಳ ದೋಷಾರೋಪ ಪಟ್ಟಿ

ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 600 ಪುಟಗಳ ಚಾರ್ಜ್ ಶೀಟ್‌ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ವಿರುದ್ಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಕೃಷ್ಣ ಇನ್ನೂ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆದಿದೆ.

ಜಾಮೀನು ಅರ್ಜಿ ತಿರಸ್ಕಾರ

ಜಾಮೀನು ಅರ್ಜಿ ತಿರಸ್ಕಾರ

ಮೇ 30ರಂದು ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿ.ಪರಮೇಶ್ವರ ಪ್ರಸನ್ನ ಅವರು ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾಗೊಳಿಸಿದ್ದರು.

ಪ್ರಕರಣದ ಜಾರ್ಜ್ ಶೀಟ್ ಸಲ್ಲಿಕೆಯಾದರೆ ಜಾಮೀನು ಕೊಡಬೇಕೆಂದಿಲ್ಲ. ಇದೊಂದು ಗಂಭೀರವಾದ ಪ್ರಕರಣವಾಗಿದೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

English summary
The Karnataka High Court reserved its order on bail plea field by MH Nalapad. Court will deliver it's order on June 14, 10.30 am. Mohammed Nalapad accused in attack on Vidwath in U.B. City on Feb 17, 2018
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X