ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು, ಅ.10 : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ. ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಭದ್ರಾ ಮೇಲ್ದಂಡೆ ಎರಡನೆ ಹಂತದ ಯೋಜನೆಯ ಕಾಮಗಾರಿ ಗುತ್ತಿಗೆ ಅವ್ಯವಹಾರ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಜೆಡಿಎಸ್ ಶಾಸಕ ವೈ.ಎಸ್.ವಿ. ದತ್ತಾ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೇಶವನಾರಾಯಣ ಅವರ ಏಕಸದಸ್ಯ ಪೀಠ, ಖಾಸಗಿ ದೂರು ಹಾಗೂ ಎಫ್ಐಆರ್ ಮತ್ತು ದೂರಿಗೆ ಸಂಬಂಧಿಸಿದ ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ನ್ಯಾಯಮೂರ್ತಿ ರದ್ದುಪಡಿಸಿ ಆದೇಶ ನೀಡಿದ್ದಾರೆ.
ಸಾರ್ವಜನಿಕ ಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯ. ಆದರೆ, ಈ ಪ್ರಕರಣದಲ್ಲಿ ಆರೋಪಿಯಾದ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿರಲಿಲ್ಲ.
ಆದ್ದರಿಂದ ದೂರನ್ನು ರದ್ದುಗೊಳಿಸಿ ತನಿಖೆಗೆ ಆದೇಶಿಸಿದ ಲೋಕಾಯುಕ್ತ ಕೋರ್ಟ್ ಕ್ರಮ ಕಾನೂನು ಬಾಹಿರ ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದರು. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ಪ್ರಕರಣವೇನು : 2008ರಲ್ಲಿ ನೀರಾವರಿ ನಿಗಮದ ಅಧ್ಯಕ್ಷ ಮತ್ತು ಸಿಎಂ ಆಗಿದ್ದ ಯಡಿಯೂರಪ್ಪ, 1,033 ಕೋಟಿ ರೂ.ಮೊತ್ತಕ್ಕೆ ಭದ್ರಾ ಮೇಲ್ದಂಡೆ ಎರಡನೇ ಹಂತದ ಯೋಜನೆಯ ಕಾಮಗಾರಿ ಗುತ್ತಿಗೆಯನ್ನು ಆರ್.ಎನ್.ಶೆಟ್ಟಿ ಮತ್ತು ಜ್ಯೋತಿ ಲಿಮಿಟೆಡ್ ಪಾಲುದಾರಿಕೆ ಕಂಪೆನಿಗೆ ನಿಯಮ ಉಲ್ಲಂಘಿಸಿ ನೀಡಿದ್ದಾರೆ.
ಟೆಂಡರ್ ಪಡೆದ ಆರ್.ಎನ್.ಶೆಟ್ಟಿ ಸಮೂಹ ಯಡಿಯೂರಪ್ಪ ಇಬ್ಬರು ಪುತ್ರರು ಮತ್ತು ಅಳಿಯ ಪಾಲುದಾರರಾಗಿರುವ ಧವಳಗಿರಿ ಡೆವಲಪರ್ಸ್ ಮತ್ತು ಸಹ್ಯಾದ್ರಿ ಹೆಲ್ತ್‌ಕೇರ್ ಲಿ. ಕಂಪೆನಿಗಳಿಗೆ 13 ಕೋಟಿ ರೂ. ಕಿಕ್‌ಬ್ಯಾಕ್ ನೀಡಿದೆ ಎಂದು ಆರೋಪಿಸಲಾಗಿತ್ತು.
ಆದ್ದರಿಂದ ಯಡಿಯೂರಪ್ಪ ಟೆಂಡರ್ ಹೆಸರಿನಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ 2011ರ ಜುಲೈ 27ರಂದು ವೈ.ಎಸ್.ವಿ ದತ್ತಾ ಲೋಕಾಯುಕ್ತ ಕೋರ್ಟ್‌ಗೆ ದೂರು ನೀಡಿದ್ದರು. (ಭದ್ರಾ ಮೇಲ್ದಂಡೆ : ಯಡಿಯೂರಪ್ಪ ವಿರುದ್ಧ ತನಿಖೆ)
ನ್ಯಾಯಾಲಯ ದೂರಿನ ತನಿಖೆಗೆ ಆದೇಶ ನೀಡಿತ್ತು. ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ 2012ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ದೂರನ್ನು ರದ್ದುಗೊಳಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications