ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿವಾದಾತ್ಮಕ ಕಪಾಲಬೆಟ್ಟದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20: ತೀವ್ರ ವಿವಾದ ಸೃಷ್ಟಿಸಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಪಾಲಬೆಟ್ಟದಲ್ಲಿನ ನಿರ್ಮಾಣ ಕಾರ್ಯಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕಪಾಲ ಬೆಟ್ಟದಲ್ಲಿ ಚರ್ಚ್ ನಿರ್ಮಿಸಲು ಸರ್ಕಾರ ಹತ್ತು ಎಕರೆ ಭೂಮಿಯನ್ನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಹಾರೋಬೆಲೆ ಗ್ರಾಮದ ನಿವಾಸಿಗಳಾದ ಆಂಥೋಣಿ ಸ್ವಾಮಿ ಹಾಗೂ ಇತರೆ ಏಳು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ನ್ಯಾಯಾಲಯದ ಅನುಮತಿ ಇಲ್ಲದೆ ಈ ಜಾಗದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು ಎಂದು ಹಾರೋಬೆಲೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ ಸೂಚನೆ ನೀಡಿದೆ.

"ಫಾದರ್ ಮುಲ್ಲಾ ಆಸ್ಪತ್ರೆಗೆ ಸೇರ್ತಾರೆ, ಟ್ರಂಪ್ ಹತ್ತಿರ ಕೆಲಸ ಮಾಡ್ತಾರೆ, ಇವರು ನಮ್ಮ ಸಂಸ್ಕೃತಿ ಬಗ್ಗೆ ಹೇಳ್ತಾರೆ"

'ಭೂ ಮಂಜೂರಾತಿ ನಿಯಮಗಳನ್ನು ಉಲ್ಲಂಘಿಸಿ 10 ಎಕರೆ ಗೋಮಾಳವನ್ನು ಮಂಜೂರು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವದ ಸಹೋದರ, ಸಂಸದ ಡಿಕೆ ಸುರೇಶ್ ಮುಂದಾಳತ್ವ ವಹಿಸಿ ಜಮೀನು ಮಂಜೂರು ಮಾಡಿಸಿದ್ದಾರೆ. ಟ್ರಸ್ಟ್‌ನಿಂದ ಮನವಿ ಸಲ್ಲಿಕೆಯಾಗುವ ಮೊದಲೇ ಭೂಮಂಜೂರಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು' ಎಂದು ಆರೋಪಿಸಲಾಗಿದೆ.

 High Court Stays Construction Works At Kapalabetta, Ramanagara

'ಭೂ ಮಂಜೂರಾತಿ ಸಂಬಂಧ 2017ರ ಫೆಬ್ರವರಿ 15ರಂದು ಡಿಕೆ ಶಿವಕುಮಾರ್ ಮತ್ತು ಅದೇ ತಿಂಗಳ 20ರಂದು ಡಿಕೆ ಸುರೇಶ್ ಅವರು ರಾಮನಗರ ಜಿಲ್ಲಾಧಿಕಾರಿಗೆ ಅಧಿಕೃತ ಟಿಪ್ಪಣಿ ಕಳುಹಿಸಿದ್ದರು. ಇದೆಲ್ಲ ಆದ ನಂತರ ಮಾರ್ಚ್ 18ರಂದು ಟ್ರಸ್ಟ್‌ನಿಂದ ಔಪಚಾರಿಕವಾಗಿ ಮನವಿ ಪತ್ರ ಪಡೆದಿದ್ದಾರೆ. 2018ರ ಫೆಬ್ರವರಿ 26ರಂದು ಭೂಮಿ ಮಂಜೂರು ಮಾಡಲಾಗಿದೆ' ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಯಾವುದೇ ಕ್ರೈಸ್ತ ಧರ್ಮೀಯರು ಜಾಗ ಮಂಜೂರಿಗಾಗಿ ಮನವಿ ಮಾಡಿಲ್ಲ. ಡಿಕೆ ಸಹೋದರರು ತಮ್ಮ ಸ್ವಹಿತಾಸಕ್ತಿ, ರಾಜಕೀಯ ಸ್ವಾರ್ಥಕ್ಕಾಗಿ ಜಮೀನು ಮಂಜೂರು ಮಾಡಿಸಿದ್ದಾರೆ. ಜಾತಿ, ಮತ ಮತ್ತು ಧರ್ಮದ ಆಧಾರದಲ್ಲಿ ಭೂಮಿ ಮಂಜೂರು ಮಾಡುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ ಎಂದಿರುವ ಅರ್ಜಿದಾರರು, ಭೂ ಮಂಜೂರಾತಿ ಮತ್ತು ಭೂಪರಿವರ್ತನೆಯ ಶುಲ್ಕ ಮನ್ನಾ ಮಾಡಿರುವುದನ್ನು ಸಹ ಪ್ರಶ್ನಿಸಿದ್ದಾರೆ.

ಕಲ್ಲಡ್ಕ ಭಟ್ರೇ, ಮಂಗಳೂರು ಹಾಳು ಮಾಡಿದ್ದಾಯಿತು, ಬೆಂಗಳೂರಿನವರನ್ನಾದರೂ ನೆಮ್ಮದಿಯಿಂದ ಇರಲು ಬಿಡಿಕಲ್ಲಡ್ಕ ಭಟ್ರೇ, ಮಂಗಳೂರು ಹಾಳು ಮಾಡಿದ್ದಾಯಿತು, ಬೆಂಗಳೂರಿನವರನ್ನಾದರೂ ನೆಮ್ಮದಿಯಿಂದ ಇರಲು ಬಿಡಿ

Recommended Video

ಹುಷಾರು!! ಇನ್ನು 3 ದಿನ ಮಳೆರಾಯನ ತಡಿಯೋಕ್ ಆಗಲ್ಲ | Oneindia Kannada

ಅರ್ಜಿಯನ್ನು ಪರಿಗಣಿಸಿದ ನ್ಯಾಯಪೀಠ, ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ನಿರ್ಮಾಣ ಕಾರ್ಯ ನಡೆಸದಂತೆ ಟ್ರಸ್ಟ್‌ಗೆ ಸೂಚನೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಮನಗರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

English summary
Karnataka High Court has stayed the construction works in controversial Kapalabetta and directed authorities that no works can be done without its permission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X