ದೇವಾಲಯಗಳಿಗೆ ಟ್ರೇಡ್ ಲೈಸೆನ್ಸ್ ಬೇಕಿಲ್ಲ: ಹೈಕೋರ್ಟ್
ಬೆಂಗಳೂರು, ಫೆಬ್ರವರಿ 21: ಮದುವೆ ಮತ್ತಿತರ ಕಾರ್ಯಗಳಿಗೆ ಮಂಟಪ ಅಥವಾ ಸಭಾಭವನಗಳನ್ನು ಬಾಡಿಗೆ ಕೊಡುವ ದೇವಸ್ಥಾನಗಳಿಗೆ ಟ್ರೇಡ್ ಲೈಸೆನ್ಸ್ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯಪಟ್ಟಿದೆ.
ದೇವಸ್ಥಾನಗಳು ಮದುವೆ ಕಾರ್ಯಕ್ರಮವನ್ನು ನಡೆಸುತ್ತಿದ್ದರೂ ಸಹ ವ್ಯಾಪಾರ ಪರವಾನಗಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ವಿವಾಹ ಕಾರ್ಯಕ್ರಮ ಸೇರಿ ಇತರೆ ಚಟುವಟಿಕೆಗಳನ್ನು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ವ್ಯಾಪಾರ ಪರವಾನಗಿ ಪಡೆಯುವಂತೆ ಸೂಚಿಸಿ ಗಿರಿನಗರದ ಮುನೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು.

ನೋಟೀಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿ ಲೇರಿದ್ದ ಗಿರಿನಗರದ ಮುನೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ಗೆ, ದೇವಸ್ಥಾನ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.












Click it and Unblock the Notifications