ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸಂವಿಧಾನ ಬದ್ಧವಾಗಿದೆ:ಹೈಕೋರ್ಟ್

ಬೆಂಗಳೂರು,ಜನವರಿ 20: ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ 2011 ಸಂವಿಧಾನ ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

'ಬೆಂಗಳೂರು ನಗರದಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಈ ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ರೈತರು ರಾಜಧಾನಿಗೇ ಬರಬೇಕಾದ ಸ್ಥಿತಿ ಇದೆ. ಇದು ಬಡ ರೈತರಿಗೆ ಕಷ್ಟವಾಗಿದೆ.

ಅಲ್ಲದೇ ಈ ಕಾಯ್ದೆಯಡಿ 7,800 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4,400 ಪ್ರಕರಣಗಳು ವಿಚಾರಣೆ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತ' ಎಂದು ಪೀಠ ಅಭಿಪ್ರಾಯಪಟ್ಟಿತು.

High Court Upholds Land Grabbing Prohibition Act

ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸುಮಾರು 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅವರಿಂದ್ ಕುಮಾರ್ ಮತ್ತು ನ್ಯಾ.ಬಿ.ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಕರ್ನಾಟಕ ಭೂ ಕಬಳಿಕೆ ಕಾಯ್ದೆ-2011ರ ಅಡಿ ವಿಶೇಷ ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡುವುದನ್ನು ಕಾನೂನುಬಾಹಿರ ಎಂಬುದಾಗಿ ಘೋಷಿಸಬೇಕೆಂದು ಅರ್ಜಿದಾರರು ಮಾಡಿದ್ದ ಮನವಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.

ಸರಿಯಾದ ಕಾರಣವಿಲ್ಲದೆ ಭೂ ಕಬಳಿಕೆ ವಿಶೇಷ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾಯಿಸಬಾರದು. ಈ ಆದೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ಪ್ರತ್ಯೇಕವಾಗಿ ನಿಭಾಯಿಸುವಂತೆ ವಿಶೇಷ ನ್ಯಾಯಾಲಯಕ್ಕೂ ಪೀಠ ಹೇಳಿದೆ.

Recommended Video

      Mysore ನುಗು ಡ್ಯಾಂ ನೀರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ| Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+