ಬೆಂಗಳೂರು ನಗರದಲ್ಲಿ ಎರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ಮಾರ್ಚ್ 05 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಾರ್ಚ್ 5 ಮತ್ತು 6ರಂದು ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ. ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಇರಲಿದೆ. ಬುಧವಾರ ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಮಂಗಳವಾರ ರಾತ್ರಿ ಮತ್ತು ಬುಧವಾರ ಮುಂಜಾನೆ ಬೆಂಗಳೂರು ನಗರದ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿತ್ತು. ಗುರುವಾರ ಮತ್ತು ಶುಕ್ರವಾರ ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಒಂದು ವಾರದಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರ ಹಾಸನ, ಚನ್ನರಾಯಪಟ್ಟಣ ಮತ್ತು ನೆಲಮಂಗಲದಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.












Click it and Unblock the Notifications