ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ನಗರದಲ್ಲಿ ಎರಡು ದಿನ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮಾರ್ಚ್ 05 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಾರ್ಚ್ 5 ಮತ್ತು 6ರಂದು ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ

ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ. ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಇರಲಿದೆ. ಬುಧವಾರ ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಚೆನ್ನೈನಲ್ಲಿ ಧಾರಾಕಾರ ಮಳೆ: ಕರ್ನಾಟಕದಲ್ಲೂ ಸಾಧ್ಯತೆ ಚೆನ್ನೈನಲ್ಲಿ ಧಾರಾಕಾರ ಮಳೆ: ಕರ್ನಾಟಕದಲ್ಲೂ ಸಾಧ್ಯತೆ

Rain

ಮಂಗಳವಾರ ರಾತ್ರಿ ಮತ್ತು ಬುಧವಾರ ಮುಂಜಾನೆ ಬೆಂಗಳೂರು ನಗರದ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿತ್ತು. ಗುರುವಾರ ಮತ್ತು ಶುಕ್ರವಾರ ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನ ಕೆಲವಡೆ ತುಂತುರು ಮಳೆ:2 ದಿನ ಮಳೆ ಸಾಧ್ಯತೆಬೆಂಗಳೂರಿನ ಕೆಲವಡೆ ತುಂತುರು ಮಳೆ:2 ದಿನ ಮಳೆ ಸಾಧ್ಯತೆ

ಕಳೆದ ಒಂದು ವಾರದಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರ ಹಾಸನ, ಚನ್ನರಾಯಪಟ್ಟಣ ಮತ್ತು ನೆಲಮಂಗಲದಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

English summary
The India Meteorological Department (IMD) predicted rain in Bengaluru city on March 5 and 6, 2020 due to high temperature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X