ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಗಣೇಶ್ ಗೆ ಜಾಮೀನು
ಬೆಂಗಳೂರು, ಏಪ್ರಿಲ್ 24: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಜೆ ಎನ್ ಗಣೇಶ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಜನವರಿ 19 ರಂದು ರಾಮನಗರದ ಬಿಡದಿಯ ಈಗಲ್ಟನ್ ದಿ ಗಾಲ್ಫ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಗಣೇಶ್ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದತೆ ಜನವರಿ 21 ರಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಆದರೆ ಘಟನೆ ಗಂಭಿರ ಸ್ವರೂಪ ಪಡೆಯುತ್ತಿದ್ದುದನ್ನು ಅರಿತ ಗಣೇಶ್ ಕೂಡಲೇ ನಾಪತ್ತೆಯಾಗಿದ್ದರು. ನಂತರ ಫೆಬ್ರವರಿ 20 ರಂದು ಅವರು ಗುಜರಾತಿ ಅಹ್ಮದಾಬಾದಿನಲ್ಲಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದರು.

ಕೂಡಲೇ ಅವರನ್ನು ವಿಚಾರಣೆಗೊಳಪಡಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.












Click it and Unblock the Notifications