ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪಾರ್ಟ್ ಮೆಂಟ್ ನಲ್ಲಿ ಎಸ್ ಟಿ ಪಿ ಕಡ್ಡಾಯ: ಹೈಕೋರ್ಟ್ ತಡೆಯಾಜ್ಞೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 12 : ಐವತ್ತು ಅಥವಾ ಅದಕ್ಕಿಂತಲೂ ಹೆಚ್ಚಿನ ಮನೆಗಳಿರುವ ಅಪಾರ್ಟ್ ಮೆಂಟ್ ಗಳಿಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಅಳವಡಿಕೆ ಕಡ್ಡಾಯಗೊಳಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕೋರಮಂಗಲದ ರಹೇಜಾ ಅಪಾರ್ಟ್ ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸುದರ್ಶನ್ ಭರು, ಜಯನಗರದ ಆದರ್ಶ ಗಾರ್ಡನ್ ಅಪಾರ್ಟ್ ಮೆಂಟ್ ಮಾಲೀಕರ ಸಂಘ ಸೇರಿ ಮತ್ತಿತರೆ ಹದಿಮೂರಕ್ಕೂ ಹೆಚ್ಚು ಅಪಾರ್ಟ್ ಮೆಂಟ್ ಮಾಲೀಕರು ಸಲ್ಲಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾ. ಎ.ಎಸ್. ಬೋಪಣ್ಣ ಅವರದಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

Highcourt stays BWSSB notification on STP

ಬಹುತೇಕ ಕಟ್ಟಡಗಳು 10 ರಿಂದ 30 ವರ್ಷಗಳಷ್ಟು ಹಳೆಯದಾಗಿರುತ್ತದೆ ಅಂತಹ ಸಂದರ್ಭದಲ್ಲಿ ಜಲಮಂಡಳಿ ಕಟ್ಟಡಗಳ ಭೌತಿಕ ಸ್ಥಿತಿಗತಿ ಬಗ್ಗೆ ಯೋಚನೆ ಮಾಡಬಹುದಿತ್ತು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು. ಈ ವರ್ಷದ ಏಪ್ರಿಲ್ ನಲ್ಲಿ ಆದೇಶ ಹೊರಡಿಸಿದ್ದ ಬೆಂಗಲೂರು ಜಲಮಂಡಳಿ, 2017 ರ ಡಿ.21 ರೊಳಗೆ ಎಸ್ ಟಿ ಪಿ ಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲೇ ಬೇಕು, ಇಲ್ಲವಾದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

English summary
High court of karnataka has been issued stay order on notification of BWSSB which made compulsory installation if sewage treatment plant in apartments, which have more than 50 houses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X