• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಂ ಜೊತೆ ತಜ್ಞರ ಸಭೆ: ಕೊರೊನಾ ನಿಯಂತ್ರಿಸಲು ತಜ್ಞರು ಹೇಳಿದ್ದೇನು?

|

ಬೆಂಗಳೂರು, ಜುಲೈ 1: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆಯಾಗಿದೆ. ಇದರಿಂದ ಕೊರೊನಾ ರೋಗಿ ಮತ್ತು ಸಾಮಾನ್ಯ ರೋಗಿ ಇಬ್ಬರಿಗೂ ದೊಡ್ಡ ಸಮಸ್ಯೆಯಾಗಿದೆ. ಈ ಮಧ್ಯೆ ಲಾಕ್‌ಡೌನ್‌ ಮಾಡುವ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗ್ತಿದೆ.

   Nepal PM KP Sharma Oli , ಪ್ರಧಾನಿಗೆ ಭಾರತದ ವಿರುದ್ಧ ಮಾತನಾಡಿದ್ದಕ್ಕೆ ಕಂಟಕ | Oneindia Kannada

   ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ತಜ್ಞರ ಜೊತೆ ಸಿಎಂ ಸಭೆ ನಡೆಸಿದರು. ಕೊವಿಡ್ ಹರಡುವಿಕೆ ತಡೆಯುವುದು ಹೇಗೆ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಕುರಿತು ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು ತಜ್ಞರೊಂದಿಗೆ ಸಲಹೆಗಳನ್ನ ಪಡೆದುಕೊಳ್ಳಲಾಗಿದೆ. ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಲಿದ್ದೇವೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

   ರೋಗಿಗೆ ಚಿಕಿತ್ಸೆ ನಿರಾಕರಿಸಿದ 18 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್

   ಕೊರೊನಾ ನಿರ್ವಹಣೆ ಕುರಿತು ವೈದ್ಯರೊಂದಿಗೆ ಚರ್ಚೆ ಮಾಡಲಾಗಿದೆ. ನಿಯಂತ್ರಣಕ್ಕೆ ಮಾರ್ಗಸೂಚಿ ಅಳವಡಿಸುವ ಬಗ್ಗೆ ನಿರ್ಧರಿಸಲಾಗಿದೆ. ಕಡಿಮೆ ರೋಗ ಲಕ್ಷಣ ಇದ್ರೆ ಹೋಂ ಕ್ವಾರಂಟೈನ್ ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಸಲಹೆ ನೀಡಿದ್ದಾರೆ. ಹೆಚ್ಚಿನ ಜನ ಸೇರೋಕೆ ಅವಕಾಶ ನೀಡಬಾರದು ಅಂತ ಸಲಹೆ ಕೊಟ್ಟಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಹಾಗಿದ್ರೆ, ತಜ್ಞರ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂದೆ ಓದಿ....

   ಕೊವಿಡ್ ಚಿಕಿತ್ಸೆಗೆ ಮಾರ್ಗಸೂಚಿ

   ಕೊವಿಡ್ ಚಿಕಿತ್ಸೆಗೆ ಮಾರ್ಗಸೂಚಿ

   * ಸಭೆಯಲ್ಲಿ ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸುವ ಕುರಿತು ಚರ್ಚಿಸಲಾಯಿತು.

   * ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

   ಉತ್ತಮ ಚಿಕಿತ್ಸೆ ನೀಡಲು ಆದ್ಯತೆ

   ಉತ್ತಮ ಚಿಕಿತ್ಸೆ ನೀಡಲು ಆದ್ಯತೆ

   * ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು.

   * ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

   ಕೊವಿಡ್ 19 ಜತೆ ಮಹಿಳಾ ವೈದ್ಯರನ್ನು ಕಾಡುತ್ತಿದೆ ಮತ್ತೊಂದು ಸಮಸ್ಯೆ

   ಟೆಲಿ ಮೆಡಿಸಿನ್ ವ್ಯವಸ್ಥೆ

   ಟೆಲಿ ಮೆಡಿಸಿನ್ ವ್ಯವಸ್ಥೆ

   * ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಲಹೆ ನೀಡಿದ್ದಾರೆ.

   * ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿದೆ.

   ತರಬೇತಿ ಅಗತ್ಯ

   ತರಬೇತಿ ಅಗತ್ಯ

   * ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ.

   * ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು.

   * ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ.

   * ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

   ಮೊದಲು ಬೆಡ್‌ಗಳ ಮಾಹಿತಿ ನೀಡಬೇಕು

   ಮೊದಲು ಬೆಡ್‌ಗಳ ಮಾಹಿತಿ ನೀಡಬೇಕು

   ''ಯಾವ ಆಸ್ಪತ್ರೆಯಲ್ಲಿ ಬೆಡ್ ಇದೆ ಅನ್ನೋದು ಮೊದಲು ಗೊತ್ತಾಗಬೇಕು. ಆಗ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಓಡಾಡೋದು ತಪ್ಪುತ್ತೆ. ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡೋದು ಸೂಕ್ತ. ಮೀಡಿಯಾಗಳನ್ನ ನೋಡಿ ಜನ ಬಹಳಷ್ಟು ಗಾಬರಿಗೆ ಒಳಗಾಗ್ತಿದ್ದಾರೆ. ರಿಕವರಿ ಆದೋರು ಆರಾಮಾಗಿ ಮನೆಗೆ ಹೋಗಿದ್ದಾರೆ. ರೋಗ ಲಕ್ಷಣ ಇಲ್ಲದೇ ಪಾಸಿಟಿವ್ ಬಂದೋರು ಆಸ್ಪತ್ರೆಗೆ ಹೋಗೋ ಅವಶ್ಯಕತೆ ಇಲ್ಲ. ಉಸಿರಾಟದ ತೊಂದ್ರೆ ಆದ್ರೆ ಮಾತ್ರ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಕೊಡಬೇಕು. ಸ್ಪರ್ಶ್ ಆಸ್ಪತ್ರೆಯೊಂದರಲ್ಲೇ 60% ಎ ಸಿಂಪ್ಟಮ್ಯಾಟಿಕ್ ರೊಗಿಗಳಿದ್ದಾರೆ. ಈ ಭಯದ ವಾತಾವರಣವನ್ನ ಹೋಗಲಾಡಿಸಬೇಕು' ಎಂದು ಸಭೆಯ ಬಳಿಕ ಸ್ಪರ್ಶ ಆಸ್ಪತ್ರೆಯ ಡಾ. ಶರಣ್ ಪಾಟೀಲ್ ಹೇಳಿದ್ದಾರೆ.

   English summary
   Here are the key highlights from the Chief minister yediyurappa and Expert doctors Meeting about COVID 19. Read on.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more