ಸುಮಲತಾ-ಯಡಿಯೂರಪ್ಪ ಸಭೆ: ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ
ಬೆಂಗಳೂರು, ಜೂನ್ 29: ದಿವಂಗತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ, ಮಂಡ್ಯ ಸಂಸದೆ ಸುಮಲತಾ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು.
Recommended Video
ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಖ್ಯಾತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರದಿಂದ 1 ಎಕರೆ 35 ಗುಂಟೆ ಜಾಗ ಗುರುತಿಸಿದ್ದು, ಆದಷ್ಟೂ ಬೇಗ ಸ್ಮಾರಕ ನಿರ್ಮಾಣ ಯೋಜನೆ ಆರಂಭಿಸುವಂತೆ ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ನೀಡುವುದಾಗಿ ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಃ ಸುಮಲತಾ ಮತ್ತು ಸಿಎಂ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಮುಖ್ಯಾಂಶಗಳು.#AmbareshMemorial pic.twitter.com/IDz3f2vkwM
— CM of Karnataka (@CMofKarnataka) June 29, 2020
ಇನ್ನು ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಆದೇಶಿಸಿದ್ದಾರೆ.

ಅಂದ್ಹಾಗೆ, ಈ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಮಹೇಶ್ವರರಾವ್, ಆಯುಕ್ತ ಡಾ ಪಿ ಎಸ್ ಹರ್ಷ ಮತ್ತು ಇತರರು ಭಾಗವಹಿಸಿದ್ದರು.












Click it and Unblock the Notifications