ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆಗೆ ಗೆಲ್ಲಲು ಸಿಎಂ ಯಡಿಯೂರಪ್ಪ ಭರ್ಜರಿ ತಂತ್ರ!

|
Google Oneindia Kannada News

ಬೆಂಗಳೂರು, ಜ. 30: ಬಿಬಿಎಂಪಿ ಚುನಾವಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರ್ಜರಿ ತಯಾರಿ ನಡೆಸಿದ್ದಾರೆ. ವರ್ಷಗಳ ಬಳಿಕ ಮೊದಲಬಾರಿ ಬೆಂಗಳೂರು ನಗರ ಪ್ರದಕ್ಷಿಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿದ್ದಾರೆ. ನಗರ ಪ್ರದಕ್ಷಿಣೆ ಬಳಿಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆಯನ್ನು ಅವರು ಮಾಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಕೊಟ್ಟಿದ್ದಾರೆ.

ನಗರದ ಜನತೆಗೆ ಉನ್ನತ ಮಟ್ಟದ ಸಂಚಾರವನ್ನು ಒದಗಿಸುವ ನಿಟ್ಟಿನಲ್ಲಿ 190 ಕಿಮೀ ಉದ್ದದ 12 ಹೈ-ಡೆನ್ಸಿಟಿ ಕಾರಿಡಾರ್‍ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆಯನ್ನು ರೂ. 477 ಕೋಟಿಗಳ ಮೊತ್ತದಲ್ಲಿ ಕೈಗೊಂಡಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಏಪ್ರಿಲ್-2021ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸುವಂತೆ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಉಳಿದಂತೆ ಇನ್ನಿತರ ಪ್ರಮುಖ ಅಂಶಗಳು ಹೀಗಿವೆ.

ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳ ಪರಿಶೀಲನೆ; ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಯಡಿಯೂರಪ್ಪ!ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳ ಪರಿಶೀಲನೆ; ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಯಡಿಯೂರಪ್ಪ!

ಸ್ಮಾರ್ಟ್ ಸಿಟಿ ರಸ್ತೆಗಳು

ಸ್ಮಾರ್ಟ್ ಸಿಟಿ ರಸ್ತೆಗಳು

ನಗರದ ಹೃದಯ ಭಾಗದಲ್ಲಿರುವ ರಸ್ತೆಗಳನ್ನು ಮೇಲ್ದರ್ಜೆಗೆರಿಸಲು ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ 37 ರಸ್ತೆಗಳ ಅಭಿವೃದ್ಧಿಯನ್ನು ಕೈಗೊಂಡಿದ್ದು, ತ್ವರಿತವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು. ಈ ನಿಟ್ಟಿನಲ್ಲಿ 05 ರಸ್ತೆಗಳು ಪೂರ್ಣಗೊಂಡಿವೆ. ಒಟ್ಟಾರೆ 32 ರಸ್ತೆಗಳನ್ನು ಮೇ-2021ರೊಳಗೆ ಪೂರ್ಣಗೊಳಿಸಲು ಸೂಚಿಸಲಾಯಿತು. ಈ ಕಾಮಗಾರಿಗಳನ್ನು ನಡೆಸುವ ಸಂದರ್ಭದಲ್ಲಿ ಸುಸ್ಥಿತಿಯಲ್ಲಿರುವ ಪಾದಚಾರಿ ಮಾರ್ಗಗಳನ್ನು ಹಾಗೆಯೇ ಉಳಿಸಿಕೊಂಡು ರಸ್ತೆ ಅಭಿವೃದ್ಧಿ ಪಡಿಸಿ. ಅನಗತ್ಯವಾಗಿ ಹಣ ಪೋಲು ಮಾಡದಿರಿ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.

ಮೆಟ್ರೋ ಕಾಮಗಾರಿ

ಮೆಟ್ರೋ ಕಾಮಗಾರಿ

ಮೆಟ್ರೋ ರೈಲು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಪಣ ತೊಟ್ಟಿದ್ದು, ದಿನಾಂಕ: 14 ಜನವರಿ 2021 ರಂದು ಕನಕಪುರ ಲೈನ್‍ನ್ನು ಲೋಕಾರ್ಪಣೆಗೊಳಿಸಲಾಗಿದೆ. ಮುಂದುವರೆದು ಜೂನ್-2021 ಅಂತ್ಯದೊಳಗೆ ಕೆಂಗೇರಿ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವೈಟ್‍ಫೀಲ್ಡ್ ಮಾರ್ಗ ಹಾಗೂ ಇಲೆಕ್ಟ್ರಾನಿಕ್ ಸಿಟಿ ಮಾರ್ಗಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಇದಕ್ಕೆ ಇರುವ ತೊಡಕುಗಳನ್ನು ಶೀಘ್ರವೇ ನಿವಾರಣೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಕೆ-100 ರಾಜಕಾಲುವೆ ಯೋಜನೆ

ಕೆ-100 ರಾಜಕಾಲುವೆ ಯೋಜನೆ

ವಿನೂತನ ರೀತಿಯಲ್ಲಿ ರಾಜಕಾಲುವೆ ಸುಂದರಗೊಳಿಸುವ ಯೋಜನೆಯನ್ನು ರೂಪಿಸಿದ್ದು, ಸುಮಾರು 11 ಕಿಮೀ ಉದ್ದದ ಕೆ-100 ರಾಜಕಾಲುವೆಯನ್ನು ಅಭಿವೃದ್ಧಿಗೊಳಿಸಲು ಈಗಾಗಲೇ ಟೆಂಡರ್ ಆಹ್ವಾನಿಸಲಾಗಿರುತ್ತದೆ. ಇದಕ್ಕೆ ಪೂರಕವಾಗಿ ರಾಜಕಾಲುವೆಯಲ್ಲಿ ಜಲಮಂಡಳಿಯ ತ್ಯಾಜ್ಯ ನೀರು ಒಯ್ಯುವ ಕೊಳವೆಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಫೆಬ್ರವರಿ-2021ರ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂಬ ಭರವಸೆಯನ್ನು ಅಧಿಕಾರಿಗಳು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ.

ಕೆರೆಗಳ ಪುನಶ್ಚೇತನ

ಕೆರೆಗಳ ಪುನಶ್ಚೇತನ

ನಗರದ ಕೆರೆಗಳನ್ನು ಉಳಿಸಲು ಮತ್ತು ಜೀವವೈವಿದ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ 25 ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಯನ್ನು ಕೈಗೊಂಡಿದ್ದು, ಹಂತಹಂತವಾಗಿ ಪೂರ್ಣಗಳಿಸಲಾಗುವುದು. ಇದರ ಜೊತೆಗೆ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಫೆಬ್ರುವರಿ 2022ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಸಿಎಂ ಅವರಿಗೆ ವಿವರಿಸಿದರು.

ಬೃಹತ್ ವೃಕ್ಷೋದ್ಯಾನಗಳು

ಬೃಹತ್ ವೃಕ್ಷೋದ್ಯಾನಗಳು

ಬೆಂಗಳೂರು ನಗರದ ಹಸಿರು ಸಿರಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆಗೆ ಪೂರಕವಾಗುವಂತೆ ಬೃಹತ್ ವೃಕ್ಷೋದ್ಯಾನಗಳನ್ನು ನಿರ್ಮಿಸಲಾಗುತ್ತಿದೆ. ಏಪ್ರಿಲ್-2021ರ ಅಂತ್ಯಕ್ಕೆ ತುರಹಳ್ಳಿ (400 ಎಕರೆ), ಮೇ-2021ರ ಅಂತ್ಯಕ್ಕೆ ಕಾಡುಗೋಡಿ (102 ಎಕರೆ) ಮತ್ತು ಜೂನ್-2021ರ ಅಂತ್ಯಕ್ಕೆ ಮಾಚೋಹಳ್ಳಿ (98 ಎಕರೆ) ವೃಕ್ಷೋದ್ಯಾನಗಳನ್ನು ಲೋಕಾರ್ಪಣೆ ಮಾಡುವ ಗುರಿಯನ್ನು ಮಿಶನ್ 2022 ಹೊಂದಿದೆ.

ಏಕೀಕೃತ ಡಿಜಿಟಲ್ ಪೋರ್ಟಲ್

ಏಕೀಕೃತ ಡಿಜಿಟಲ್ ಪೋರ್ಟಲ್

ನಾಗರೀಕರ ಸೇವೆಗಳಾದ ಖಾತಾ, ಆಸ್ತಿ ತೆರಿಗೆ, ಜನನ ಮತ್ತು ಮರಣ ಪ್ರಮಾಣ ಪತ್ರ, ಉದ್ಯಮ ಪರವಾನಗಿ, ಕಟ್ಟಡ ನಕ್ಷೆ ಪರವಾನಗಿ ಇತ್ಯಾದಿ ಸೇವೆಗಳು ಈಗಾಗಲೇ ಲಭ್ಯವಿದ್ದು, ಈ ಎಲ್ಲಾ ಸೇವೆಗಳನ್ನು ಸರಳೀಕೃತಗೊಳಿಸಿ ಏಕೀಕೃತ ಡಿಜಿಟಲ್ ಪೋರ್ಟಲ್ ಅಡಿ ಒದಗಿಸಲು ಕ್ರಮವಹಿಸಿದ್ದು ಏಪ್ರಿಲ್-2021 ಅಂತ್ಯಕ್ಕೆ ಲಭ್ಯವಾಗುವುದು ಎಂದು ಮಾಹಿತಿ ನೀಡಿದರು.

ಎಕ್ಸ್ ಪೀರಿಯೆನ್ಸ್ ಬೆಂಗಳೂರು ಯೋಜನೆಯ ಅನುಷ್ಠಾನಕ್ಕೆ ಶೀಘ್ರವೇ ಬೆಂಗಳೂರು ಪರಿಸರ ಮತ್ತು ಪರಂಪರೆ ಟ್ರಸ್ಟ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಸೂಚಿಸಿದರು.

ಸ್ವಚ್ಛ ಬೆಂಗಳೂರು

ಸ್ವಚ್ಛ ಬೆಂಗಳೂರು

ನಗರದಲ್ಲಿ ಹೆಚ್ಚಿನ ಜನಸಂಖ್ಯೆಯಿಂದ ತ್ಯಾಜ್ಯ ನಿರ್ವಹಣೆ ಪ್ರಮುಖ ಸವಾಲಿನ ಅಂಶವಾಗಿದೆ. ಪ್ರತಿನಿತ್ಯ ನಗರದಲ್ಲಿ ಸುಮಾರು 4500ಕ್ಕೂ ಅಧಿಕ ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ವೈಜ್ಞಾನಿಕ ಮತ್ತು ಸಮರ್ಪಕ ಘನತ್ಯಾಜ್ಯ ನಿರ್ವಹಣೆಗಾಗಿ 15 ದಿನದೊಳಗೆ ಎಸ್‌ಪಿವಿ ಸ್ಥಾಪಿಸುವಂತೆ ಸೂಚಿಸಿದರು. ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರಿಗೆ ಪ್ರತಿ ವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಯಡ೮ಯೂರಪ್ಪ ಅವರು ಸೂಚಿಸಿದರು.

Recommended Video

Union Budget : ನಮ್ಮ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗತ್ತೆ | R Ashok | Oneindia Kannada

English summary
Highlights of the Bengaluru Mission 2022 Progress Review Meeting held on 30-1-2021 chaired by Chief Minister B.S. Yediyurappa. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X