ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆಯಿಂದ ಹಾಳಾದ ರಸ್ತೆ ಅಭಿವೃದ್ಧಿಗೆ ಸಾವಿರ ಕೋಟಿ

|
Google Oneindia Kannada News

H.C.Mahadevappa
ಬೆಂಗಳೂರು, ಅ,23 : ಮಳೆಯಿಂದಾಗಿ ಹದಗೆಟ್ಟಿರುವ ರಾಜ್ಯ ಹಾಗೂ ಜಿಲ್ಲಾ ಮಟ್ಟದ ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರ ಒಂದು ಸಾವಿರ ಕೋಟಿ ರೂ. ನೀಡಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಾ.ಎಚ್.ಸಿ.ಮಹದೇವಪ್ಪ, ತೀವ್ರ ಮಳೆಯಿಂದಾಗಿ ರಾಜ್ಯದಲ್ಲಿ 1000 ಕಿ.ಮೀ. ಜಿಲ್ಲಾ ರಸ್ತೆ ಹಾಗೂ 177 ಕಿ.ಮೀ. ರಾಜ್ಯ ಹೆದ್ದಾರಿಗಳಿಗೆ ಹಾನಿಯಾಗಿವೆ. ಈ ರಸ್ತೆಗಳ ಗುಂಡಿ ಮಚ್ಚಿ ದುರಸ್ತಿ ಮಾಡಲು 1 ಸಾವಿರ ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಹಣಕಾಸು ಇಲಾಖೆಯ ಅನುಮೋದನೆ ದೊರಕಿದೆ ಎಂದರು.

ಕರ್ನಾಟಕದ ರಸ್ತೆ ಸಂಪರ್ಕ ಜಾಲವನ್ನು ಉತ್ತಮ ಪಡಿಸಲು ಕೆ-ಶಿಪ್‌ ಯೋಜನೆ ಅಡಿಯಲ್ಲಿ 7 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಯೋಜನೆ ಜಾರಿಯಲ್ಲಿದೆ. ಮೊದಲ ಹಂತದಲ್ಲಿ 3500 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಅನಂತರದ ಹಂತದಲ್ಲಿ ಬಾಕಿ ಉಳಿದ 3500 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಎಚ್.ಸಿ.ಮಹದೇವಪ್ಪ ಮಾಹಿತಿ ನೀಡಿದರು.

ಕೆಲವು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಪರಿವರ್ತಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಈ ಪ್ರಸ್ತಾವನೆ ಒಪ್ಪಿಗೆ ನೀಡಿದರೆ, ರಾಜ್ಯ ಹೆದ್ದಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಗುಣಮಟ್ಟ ನೀಡಲು ಕೇಂದ್ರದಿಂದಲೂ ಅನುದಾನ ದೊರೆಯಲಿದೆ ಎಂದು ಮಹದೇವಪ್ಪ ಹೇಳಿದರು.

ಜಾಗೃತ ದಳ : ಲೋಕೋಪಯೋಗಿ ಇಲಾಖೆಯ ಕಳಪೆ ಕಾಮಗಾರಿಗಳಿಗೆ ತಡೆ ಹಾಕಲು ನಿರ್ಧರಿಸಲಾಗಿದೆ ಎಂದು ಎಚ್.ಸಿ.ಮಹದೇವಪ್ಪ ಹೇಳಿದರು. ಇಲಾಖೆಯ ಕಾಮಗಾರಿಗಳ ಗುಣಮಟ್ಟದ ಮೇಲೆ ನಿಗಾವಹಿಸಲು ಜಾಗೃತ ದಳವೊಂದನ್ನು ಇಲಾಖೆಯಲ್ಲಿ ಸ್ಥಾಪಿಸಲಾಗಿದೆ. ಟೆಂಡರ್‌ ನಿಯಮಗಳ ಉಲ್ಲಂಘನೆಯಾದರೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ಎಂಜಿನಿಯರ್‌ ಹಾಗೂ ಗುತ್ತಿಗೆದಾರರನ್ನು ಹೊಣೆ ಮಾಡಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

English summary
The Karnataka government will soon take up repair of State highways and district roads damaged due to rains at a cost of Rs 1,000 core said, Public Works Department (PWD) Minister H.C.Mahadevappa. On Tuesday. October 22 he addressed media at Bangalore and said, 177 kms of State highway and 1,000 kms of district roads have been damaged due to monsoon rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X