NHAI: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ ಇಲ್ಲ: ಯಥಾ ಸ್ಥಿತಿ

ಬೆಂಗಳೂರು, ಏಪ್ರಿಲ್ 01: ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಇದೇ ಏಪ್ರಿಲ್ 1ರಿಂದ ಹೆಚ್ಚಾಗಬಹುದು ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ನಿರ್ಧಾರ ಹಿಂತೆಗೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೌದು, ಇಂದಿನಿಂದ (ಏಪ್ರಿಲ್ 1) ದೇಶದ ಹೆದ್ದಾರಿಗಳಲ್ಲಿ ಓಡಾಡುವ ವಾಹನಗಳ ಟೋಲ್ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಈ ಕುರಿತು ನಿರ್ಧರಿಸಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹಿಂದೆ ಸರಿದಿದೆ. ಸದ್ಯಕ್ಕೆ ಟೋಲ್ ಶುಲ್ಕ ಏರಿಕೆ ಇಲ್ಲ ಎನ್ನಲಾಗಿದೆ.

Highways Authority NHAI Cancels Plan to Increase Toll Fees from April 1st

ಈ ಕುರಿತು ರೋಲ್‌ಬ್ಯಾಕ್‌ಗೆ ಸಂಬಂಧಿಸಿದ ಆದೇಶವನ್ನು ಪ್ರಾಧಿಕಾರದ ಎಲ್ಲ ಯೋಜನಾ ನಿರ್ದೇಶಕರಿಗೆ ರವಾನಿಸಲಾಗಿದೆ. ಆದಸರೆ ಹಾಲಿ ಇರುವ ಟೋಲ್ ದರವನ್ನು ಯಥಾ ಸ್ಥಿತಿಯಲ್ಲಿ ಮುಂದುವರಿಯಲಿವೆ. ವಾಹನಗಳು ಹಾಲಿ ದರವನ್ನು ಪಾವತಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದರು.

ದರ ಪರಿಷ್ಕರಣೆ ಇಲ್ಲ:ಪ್ರಾಧಿಕಾರದ ಲಿಖಿತ ಮಾಹಿತಿ

ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ದರಗಳನ್ನು ಹೆಚ್ಚಿಸಲು ನಿರ್ಧರಿಸಿತ್ತು. ಅದನ್ನು ಆರ್ಥಿಕ ವರ್ಷ 2024-25ರಂದು ಜಾರಿಗೆ ತರುವ ಕುರಿತು ಪ್ರಕಟಿಸಿತ್ತು. ಅದಾದ ಕೆಲವೇ ದಿನಗಳಲ್ಲಿ ಅಂದರೆ ಭಾನುವಾರ ರಾತ್ರಿ ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಆದೇಶದವರೆಗೆ ಟೋಲ್ ದರಗಳನ್ನು ಪರಿಷ್ಕರಿಸಲಾಗುವುದಿಲ್ಲ ಎಂದು ಲಿಖಿತವಾಗಿ ಅಧಿಕೃತ ಮಾಹಿತಿ ತಿಳಿಸಿದ್ದಾರೆ.

ಉತ್ತರ ಭಾರತದ ಆಗ್ರಾ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಹ ಆರ್ಥಿಕ ಹೊಸ ವರ್ಷದಿಂದ ಟೋಲ್ ದರಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ. ಯಾವುದೇ ಬದಲಾವಣೆ ಆಗುವುದಿಲ್ಲ.

Highways Authority NHAI Cancels Plan to Increase Toll Fees from April 1st

ಬಸ್ ಸಂಚಾರ ದರದಲ್ಲಿ ಬದಲಾವಣೆ ಇಲ್ಲ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (UPSRTC) ಸಾರ್ವಜನಿಕ ಸಂಪರ್ಕ ಅಧಿಕಾರಿ ಅಜಿತ್ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಹೆದ್ದಾರಿ ಟೋಲ್ ದರಗಳನ್ನು ಪರಿಷ್ಕರಿಸಲು ಹೆದ್ದಾರಿ ಪ್ರಾಧಿಕಾರದಿಂದ ಯಾವುದೇ ಆದೇಶ ಸ್ವೀಕರಿಸಿಲ್ಲ. ಹೀಗಾಗಿ ಬಸ್‌ ಸಂಚಾರ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ವಿವರಿಸಿದರು.

ಲೋಕಸಭಾ ಚುನಾವಣೆ ಪ್ರಯುಕ್ತ ದೇಶದಲ್ಲಿ ಚುನಾವಣಾ ನೀತಿ ಸಂಹಿತ ಜಾರಿಯಲ್ಲಿದೆ. ಹೀಗಾಗಿ ಟೋಲ್ ಶುಲ್ಕವನ್ನು ಹೆಚ್ಚಿಸುವ ಆದೇಶವಾಗಲಿ, ನಿರ್ಧಾರವಾಗಲಿ ಸದ್ಯಕ್ಕೆ ಮಾಡಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+