"ನಿಮಗೆ ಇನ್ನೂ ಅವಕಾಶವಿದೆ...": ಸಿಎಂಗೆ ಹಿಜಾಬ್ ಪರ ವಿದ್ಯಾರ್ಥಿನಿ ಟ್ವೀಟ್
ಬೆಂಗಳೂರು, ಏಪ್ರಿಲ್ 14: ರಾಜ್ಯದಲ್ಲಿ ಹಿಜಾಬ್ ಕಿಚ್ಚು ಬೂದಿ ಮುಚ್ಚಿದ ಕೆಂಡದಂತಿದೆ. ಹಿಜಾಬ್ ಪರ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗಳಿಗೆ ಹಾಜರಾಗದ ಘಟನೆಗಳು ನಡೆದಿವೆ. ಇನ್ನೂ ಇದಕ್ಕೆ ಪುಷ್ಠಿ ಎಂಬಂತೆ ಮತ್ತೊಂದು ಸಂದೇಶವನ್ನು ರಾಜ್ಯದ ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ.
ರಾಜ್ಯದಲ್ಲಿ ಹಿಜಾಬ್ ನಿಷೇಧದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ 17 ವರ್ಷದ ಬಾಲಕಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದ್ದು, "ನಮ್ಮ ಭವಿಷ್ಯವನ್ನು ಹಾಳುಮಾಡುವುದನ್ನು ತಡೆಯಲು ಇನ್ನೂ ಅವಕಾಶವಿದೆ" ಎಂದು ಹೇಳಿದ್ದಾರೆ.
ತನ್ನ ಮನವಿಯಲ್ಲಿ, ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಆಗಿರುವ ಅಲಿಯಾ ಅಸ್ಸಾದಿ, ಹಿಜಾಬ್ ಅಥವಾ ಹೆಡ್ ಸ್ಕಾರ್ಫ್‌ಗಳ ಮೇಲಿನ ನಿಷೇಧವು ಈ ತಿಂಗಳ ಕೊನೆಯಲ್ಲಿ ನಿಗದಿಪಡಿಸಲಾದ ಪ್ರಿ-ಯೂನಿವರ್ಸಿಟಿ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳಲು ಬಯಸುವ ಅನೇಕ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

"ನಮ್ಮ ಭವಿಷ್ಯ ಹಾಳಾಗುವುದನ್ನು ತಡೆಯಲು ನಿಮಗೆ ಇನ್ನೂ ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡುವ ನಿರ್ಧಾರವನ್ನು ನೀವು ಮಾಡಬಹುದು. ದಯವಿಟ್ಟು ಇದನ್ನು ಪರಿಗಣಿಸಿ. ನಾವು ಈ ದೇಶದ ಭವಿಷ್ಯ" ಎಂದು ರಾಜ್ಯ ಮಟ್ಟದ ಕರಾಟೆ ಅಲಿಯಾ ಅಸ್ಸಾದಿ ಟ್ವೀಟ್ ಮಾಡಿದ್ದಾರೆ. ಜೊತೆಗ ಚಾಂಪಿಯನ್ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿದ್ದಾರೆ.
2nd PU exams are going to start from 22nd of this month. Hon'ble CM @BSBommai you still have a chance to stop our future from getting ruined. You can make a decision to allow us to write exams wearing hijab. Please consider this.We are the future of this country.#HijabisOurRight
— Aliya Assadi (@Aliyassadi) April 13, 2022
ರಾಜ್ಯದ ಹಿಜಾಬ್ ನಿಷೇಧದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿರುವ ಅರ್ಜಿದಾರರಲ್ಲಿ ಅಲಿಯಾ ಅಸ್ಸಾದಿ ಕೂಡ ಒಬ್ಬರು. ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟಿನ ತೀರ್ಪಿನಿಂದ ಹತಾಶರಾಗಿರುವ ಅವರು ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಇದರ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು. ಜೊತೆಗೆ ನ್ಯಾಯಾಲಯ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿತ್ತು. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಉಡುಗೆ ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.
ಕಳೆದ ತಿಂಗಳು ಕರಾವಳಿ ಕರ್ನಾಟಕದ ಉಡುಪಿಯ 40 ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟಿನ ತೀರ್ಪಿನಿಂದ ಬೇಸರಗೊಂಡು ಮೊದಲ ಪದವಿ ಪೂರ್ವ ಪರೀಕ್ಷೆಗೆ ಗೈರುಹಾಜರಾಗಿದ್ದರು. ಪರೀಕ್ಷೆಯಿಂದ ದೂರ ಉಳಿದವರು ತರಗತಿಯಲ್ಲಿ ಹಿಜಾಬ್ ಧರಿಸುವ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ. ಈ ಹಿಂದೆ ಪ್ರಾಯೋಗಿಕ ಪರೀಕ್ಷೆಗಳನ್ನೂ ಬಾಲಕಿಯರು ಬಹಿಷ್ಕರಿಸಿದ್ದರು. ಜೊತೆಗೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.












Click it and Unblock the Notifications