ಹಿಂದಿ ಬಗ್ಗೆ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ, ದ್ವಿಭಾಷಾ ನೀತಿ ಗೊಂದಲ: ಕನ್ನಡಿಗರು ಹೇಳಿದ್ದೇನು
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರು ಹಿಂದಿ ಭಾಷಾ ವಿಚಾರದಲ್ಲಿ ನೀಡಿರುವ ಅಚ್ಚರಿಯ ಹೇಳಿಕೆಯು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರು ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತಪಡಿಸುವುದಕ್ಕೆ ಪ್ರಾರಂಭಿಸಿದ್ದಾರೆ. ಇಷ್ಟಕ್ಕೂ ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದೇನು, ಕನ್ನಡಿಗರ ವಿರೋಧವೇನು ಎನ್ನುವ ವಿವರ ಇಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕನ್ನಡ ಚಳವಳಿಗಾರರ ಸಮಿತಿ ಆಯೋಜಿಸಿದ್ದ ಜನರಾಜ್ಯೋತ್ಸವ -2025 ಅನ್ನು ಉದ್ಘಾಟಿಸಿ ಮಾತನಾಡಿರುವ ಕೆಲವು ಮಾತುಗಳು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿ ನೆಟ್ಟಿಗರು ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷವೊಂದು ಅಧಿಕಾರಕ್ಕೆ ಬರಬೇಕು ಎನ್ನುತ್ತಿದ್ದಾರೆ. ಇದಕ್ಕೆ ಮತ್ತೊಂದು ಕಾರಣ ಸಿ.ಎಂ ಸಿದ್ದರಾಮಯ್ಯ ಅವರು ಹಿಂದಿ ವಿಚಾರದಲ್ಲಿ ಮೃದು ಧೋರಣೆ ಅನುಭವಿಸುತ್ತಿದ್ದಾರೆ ಎನ್ನುವುದು ಒಂದು, ಮತ್ತೊಂದು ಬೆಂಗಳೂರಲ್ಲಿ ನಡೆದ ಅಕ್ರಮ ಒತ್ತುವರಿ ತೆರುವ ಪ್ರಕರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ.

ರಾಜ್ಯ ಸರ್ಕಾರ ಹಿಂದಿ ವಿರೋಧಿಸುವುದಿಲ್ಲ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಹಿಂದಿ ವಿರೋಧಿಸುವುದಿಲ್ಲ ಎಂದು ಹೇಳಿರುವುದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಬರಹಗಾರ ಸುನೀಲ್ ಜೆ ಎನ್ನುವವರು, ಈ ಕಾಂಗ್ರೆಸ್ ಪಕ್ಷದಿಂದಾಗಲಿ, ಸಿದ್ದರಾಮಯ್ಯಅವರಿಂದಾಗಲಿ ಇದಕ್ಕಿಂತ ಹೆಚ್ಚೇನೂ ನಿರೀಕ್ಷಿಸೋದಕ್ಕಾಗಲ್ಲ. ನಾನು ನೋಡಿದಂತೆ ಬಹಳ ಕಡೆ ಸಿದ್ದರಾಮಯ್ಯನಿಗೆ ದ್ವಿಭಾಷಾ ನೀತಿಯ ಬಗ್ಗೆ ಕೇಳಿದಾರೆ. ಪ್ರತಿ ಸಲವೂ ಈ ವ್ಯಕ್ತಿ ಉತ್ತರಿಸಿದ್ದು ಅಸಡ್ಡೆಯಿಂದಲೇ. ನಾನಾ ಕಾರಣಗಳಿಂದ ಕೆಲವು ಕನ್ನಡಪರ ಸಂಘಟನೆಗಳು, ಹೋರಾಟಗಾರರು ಕಾಂಗ್ರೆಸ್ ಪಕ್ಷದ ಜೊತೆಯಿರಬಹುದು. ಆದರೆ ಆದಷ್ಟೂ ಬೇಗ ಅಂತಹ ಮೈತ್ರಿಗಳಿಂದ ಹೊರಬನ್ನಿ. ಇಲ್ಲವಾದರೆ ನಿಮಗೆ ಮೂರು ಕಾಸಿನ ಬೆಲೆಯಿರಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಹಲವರು ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.
ಹಿಂದಿ ಭಾಷೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು ?
ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. 1956 ರಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಎಂದು ನಾಮಕರಣವಾಯಿತು. ಇದಾಗಿ 50 ವರ್ಷಗಳಾದರೂ ಬಿಜೆಪಿ ಸರ್ಕಾರ ಇದರ ಆಚರಣೆ ಮಾಡಲಿಲ್ಲ. ನಮ್ಮ ಸರ್ಕಾರ ಇದನ್ನು ಇಡೀ ರಾಜ್ಯದಲ್ಲಿ ಆಚರಣೆ ಮಾಡಿತು. ಇದರ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.
ದ್ವಿಭಾಷಾ ನೀತಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಿಭಾಷಾ ನೀತಿ ವಿಚಾರದಲ್ಲಿ ಅದೇ ಹಳೆಯ ಹೇಳಿಕೆಯನ್ನೇ ಪುನರಾವರ್ತಿಸಿದ್ದಾರೆ. ವೈಯಕ್ತಿಕವಾಗಿ ನಾನು ದ್ವಿಭಾಷಾ ನೀತಿಯ ಪರವಾಗಿದ್ದು, ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ಹಿಂದಿ ವಿರೋಧಿ ಎಂದಿರುವುದು ಹಾಗೂ ದ್ವಿಭಾಷಾ ನೀತಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಳ್ಳದೆ ಇರುವುದು ಕನ್ನಡಿಗರ ವಿರೋಧಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು
1. ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ.
2. ಕನ್ನಡದ ವಿಷಯದಲ್ಲಿ ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ಕನ್ನಡದ ಪರಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇನೆ.
3. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು.
4. ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ.
5. ಪೋಷಕರ ಸಹಾಯವಿಲ್ಲದೆ ಹೋದರೆ ಕನ್ನಡ ಶಾಲೆಗಳು ಉಳಿದು, ಬೆಳೆಯುವುದು ಕಷ್ಟ.
6. ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
ಕರ್ನಾಟಕದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ -
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications