ಅಕ್ರಮ ಗೋ ಸಾಗಣೆ ಮಾಡುತ್ತಿದ್ದ ಟೆಂಪೋ ವಶ: ಚಾಲಕ ಪರಾರಿ

ಬೆಂಗಳೂರು, ಫೆ. 15: ನಿಯಮ ಬಾಹಿರವಾಗಿ ಹಸು ಮತ್ತು ಎಮ್ಮೆಗಳನ್ನು ಸಾಗಣೆ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಗಳು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನೈಸ್ ರಸ್ತೆಯಲ್ಲಿ ವಾಹನವೊಂದರಲ್ಲಿ ಹಸು ಮತ್ತು ಎಮ್ಮೆ ಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಈ ಕುರಿತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಹನ ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಹಸು ಮತ್ತು ಎಮ್ಮೆ ಇರುವುದು ಗೊತ್ತಾಗಿದೆ. ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಹಿಂದೂಪರ ಸಂಘಟನೆ ಕಾರ್ಯಕರ್ತರು ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಾಹನ ಮತ್ತು ಹಸುಗಳನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದು ರಕ್ಷಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಕಂಟೇನರ್ ಮೂಲಕ ಹಸು ಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದರು. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

Bengaluru: Hindu Organizations Handed Over Vehicle Carrying Cow and Buffalo Illegally to Police

ಕುಡಿದ ಅಮಲಿನಲ್ಲಿ ಕೊಲೆ:

ಕುಡಿದ ಅಮಲಿನಲ್ಲಿ ಮೊಬೈಲ್ ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಂಜುನಾಥ್ ಕೊಲೆಯಾದ ವ್ಯಕ್ತಿ. ಸ್ನೇಹಿತ ಶರತ್ ಕೊಲೆ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದಾನೆ.

ಸ್ಮೇಹಿತರ ಜತೆ ಮಂಜುನಾಥ್ ಪಾರ್ಟಿ ಮಾಡಲು ತೆರಳಿದ್ದ. ಕಂಠಪೂರ್ತಿ ಕುಡಿದಿದ್ದ ಶರತ್ ಮತ್ತು ಮಂಜುನಾಥ್ ನಡುವೆ ಮೊಬೈಲ್ ವಿಚಾರವಾಗಿ ಜಗಳ ನಡೆದಿದೆ. ಶರತ್ ಹಲ್ಲೆ ಮಾಡಿದ್ದರಿಂದ ರಕ್ತ ಸಾವ್ರದಿಂದ ಕುಸಿದು ಬಿದ್ದು ಮಂಜುನಾಥ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಕೊಣನಕುಂಟೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recommended Video

      ಕನ್ನಡಿಗರ ಬಗ್ಗೆ ಕರುಣೆ ಇಲ್ಲದ RCB,ಅಭಿಮಾನಿಗಳಿಗೆ ಈ ರೀತಿ ಮೋಸ‌ ಮಾಡ್ಬಾರ್ದಿತ್ತು.. | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+