ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಕೇಸ್; ಪೊಲೀಸ್ ಪೇದೆ ಬಲಿ
ಬೆಂಗಳೂರು, ಫೆಬ್ರವರಿ 04 : ಬೆಂಗಳೂರಿನಲ್ಲಿ ಪೊಲೀಸ್ ಪೇದೆಯೊಬ್ಬರು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಪಟ್ಟವರನ್ನು ಭಕ್ತಕುಮಾರ್ ಎಂದು ಗುರುತಿಸಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಭಕ್ತಕುಮಾರ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಸೋಮವಾರ ರಾತ್ರಿ 8.45ರ ಸುಮಾರಿಗೆ ನಗರದ ಎಂಇಎಸ್‌ನ ಪೈಪ್‌ಲೈನ್ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಭಕ್ತಕುಮಾರ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಡಿಕ್ಕಿಯಾದ ಕ್ಯಾಂಟರ್ ನಂಬರ್ ಕೆಎ 50 2826. ಬೈಕ್‌ಗೆ ಡಿಕ್ಕಿಯಾದ ತಕ್ಷಣ ಪೊಲೀಸ್ ಪೇದೆ ಕೆಳಗೆ ಬಿದ್ದಿದ್ದು, ಕಾಲು, ಕೈ ಮತ್ತು ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಕ್ಯಾಂಟರ್ ಚಾಲಕ ಅಪಘಾತದ ಬಳಿಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಯಾಂಟರ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.












Click it and Unblock the Notifications