ಬೆಂಗಳೂರಿನ ಮಲ್ಲೇಶ್ವರದಲ್ಲಿ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ತಪಾಸಣೆ!
ಬೆಂಗಳೂರು,
ಅ. 08: ಬೆಂಗಳೂರು ಮಹಾನಗರದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುವುದು ವೆಚ್ಚದ ಜೊತೆಗೆ ಕಷ್ಟವೂ ಕೂಡ. ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ರಿಯಾಯಾತಿ ದರದಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದಕ್ಕಾಗಿ ಮಲ್ಲೇಶ್ವರದಲ್ಲಿ ಹೈಟೆಕ್ ಡಯಾಗ್ನಾಸ್ಟಿಕ್ ಕೇಂದ್ರ ಸ್ಥಾಪಿಸಲು ಬಿಬಿಎಂಪಿ ಮತ್ತು ಮಣಿಪಾಲ್ ಆಸ್ಪತ್ರೆ ನಡುವೆ ಗುರುವಾರ ಒಡಂಬಡಿಕೆಗೆ (ಎಂಒಯು) ಸಹಿ ಹಾಕಲಾಗಿದೆ. id="toptextpromo"> id='are-slot-1' class='oiad oi-axt oiadv'>ಉನ್ನತ
ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಸಮ್ಮುಖದಲ್ಲಿ ಗುರುವಾರ ಒಡಂಬಡಿಕೆಗೆ (ಎಂಒಯು) ಸಹಿ ಹಾಕಲಾಯಿತು. ಈ ಒಡಂಬಡಿಕೆ ಪ್ರಕಾರ, ಮಲ್ಲೇಶ್ವರದ ಚಂದ್ರಶೇಖರ್ ಆಜಾದ್ ಮೈದಾನದ ಬಳಿಯ ಬೆಂಗಳೂರು ಒನ್ ಕಟ್ಟಡದ ಮೊದಲ ಮಹಡಿಯಲ್ಲಿ 45 ದಿನಗಳಲ್ಲಿ ಸ್ಥಾಪನೆಯಾಗಲಿರುವ ಈ ಲ್ಯಾಬ್ 140 ವಿವಿಧ ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಹೊಂದಿದೆ. id='are-slot-2' class='oiad oi-axt oiadv'>
ಎಪಿಎಲ್, ಬಿಪಿಎಲ್ ಕಾರ್ಡ್‌ದಾರರಿಗೆ ಅನುಕೂಲ!
ದರವು ಬೇರೆ ಕಡೆಗಳಿಗಿಂತ ಶೇ 30ರಷ್ಟು ಕಡಿಮೆ ಇರುತ್ತದೆ. ಇದರ ಜೊತೆಗೆ, ಬಿಪಿಎಲ್ ಕಾರ್ಡುದಾರರಿಗೆ ಶೇ. 50ರಷ್ಟು ರಿಯಾಯಿತಿ ದರದಲ್ಲಿ ಹಾಗೂ ಎಪಿಎಲ್ ಕಾರ್ಡುದಾರರಿಗೆ ಶೇ 40ರಷ್ಟು ರಿಯಾಯಿತಿ ದರದಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಥವಾ ಸರ್ಕಾರಿ ಆಸ್ಪತ್ರೆಯ ಅಧಿಕೃತ ಸಲಹೆ ಪಡೆದು ಬರುವವರಿಗೂ ಈ ರಿಯಾಯಿತಿ ಸಿಗಲಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಬಿಬಿಎಂಪಿ ಸಹಯೋಗದಲ್ಲಿ ಹೈಟೆಕ್ ಲ್ಯಾಬ್!
ಸರ್ಕಾರಿ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಈ ಲ್ಯಾಬ್‌ನಲ್ಲಿ ಎಕ್ಸ್ ರೇ, ಅಲ್ಟ್ರಾಸೌಂಡ್, ಇಸಿಜಿ, ಪಿ.ಎಫ್.ಟಿ ಸೇರಿದಂತೆ 140 ಬೇರೆ ಬೇರೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಈ ಲ್ಯಾಬ್‌ಗೆ ಕಟ್ಟಡದ ಜಾಗವನ್ನು ಬಿಬಿಎಂಪಿ ಒದಗಿಸಲಿದ್ದು, ಉಳಿದ ವ್ಯವಸ್ಥೆಗಳನ್ನೆಲ್ಲಾ ಮಣಿಪಾಲ್ ಹೆಲ್ತ್ ಮಾಡಿಕೊಳ್ಳಲಿದೆ. ಈ ಲ್ಯಾಬ್‌ನ ಯಶಸ್ಸನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ನಗರದ ಬೇರೆ ಕಡೆಗಳಲ್ಲೂ ಇಂತಹ ಹೈಟೆಕ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು ಎಂದು ಇದೇ ವೇಳೆ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಕೋವಿಡ್ ಸಂಕಷ್ಟದಲ್ಲಿ ಜನರ ಸಂಕಷ್ಟ!
ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಬೆಂಗಳೂರಿಗರು ಸಾಕಷ್ಟು ತೊಂದರೆ ಅನುಭವಿಸಿದ್ದರು. ನಂತರ ಆರೋಗ್ಯ ಕ್ಷೇತ್ರದತ್ತ ರಾಜ್ಯ ಸರ್ಕಾರ ಸೇರಿದಂತೆ ಖಾಸಗಿ ಸಹಭಾಗಿತ್ವದಲ್ಲಿ ಸೌಲಭ್ಯ ಒದಗಿಸಲು ಮುಂದಾಗಿವೆ. ಈ ಮಾದರಿ ಮುಂದುವರೆಯಲಿದೆ.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಣದೀಪ್, ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಮಣಿಪಾಲ್ ಹೆಲ್ತ್‌ನ ಪ್ರಾದೇಶಿಕ ಮುಖ್ಯ ನಿರ್ವಹಣಾಧಿಕಾರಿ ದೀಪಕ್ ವೇಣುಗೋಪಾಲನ್, ಕ್ಲಿನಿಕಲ್ ಆಪರೇಷನ್ ಮುಖ್ಯಸ್ಥರಾದ ಡಾ. ಮುರಳಿ ಅವರು ಇದ್ದರು.

ಬೆಂಗಳೂರು ಉಸ್ತುವಾರಿ ಯಾರು?
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಅಪ್ತ ಉಮೇಶ್ ಮನೆ ಮೇಲೆ ನಡೆದ ಐಟಿ ರೇಡ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, "ಬೆಂಗಳೂರು ಉಸ್ತುವಾರಿ ಯಾರಿಗೆ ಕೊಡಬೇಕು ಎಂಬುದು ಸಿಎಂ ಬೊಮ್ಮಾಯಿ ವಿವೇಚನೆಗೆ ಬಿಟ್ಟಿದ್ದು. ಬೆಂಗಳೂರು ಉಸ್ತುವಾರಿ ಮುಖ್ಯಮಂತ್ರಿಗಳ ಬಳಿಯೇ ಇದ್ದರೆ ಅನುಕೂಲ ಹೆಚ್ಚು. ಸಧ್ಯಕ್ಕೆ ಯಾರಿಗೂ ಬೆಂಗಳೂರು ಉಸ್ತುವಾರಿ ಕೊಟ್ಟಿಲ್ಲ. ಕೋವಿಡ್ ಹಾಗೂ ಅಮೃತ ಯೋಜನೆ ಸಂಬಂಧ ಅವರಿಗೆ ಉಸ್ತುವಾರಿ ನೀಡಲಾಗಿದೆ ಅಷ್ಟೇ. ಸಧ್ಯಕ್ಕೆ ಮುಖ್ಯಮಂತ್ರಿಗಳೇ ಬೆಂಗಳೂರಿನ ಉಸ್ತುವಾರಿ ಸಚಿವರು" ಎಂದು ಹೇಳಿದ್ದಾರೆ.












Click it and Unblock the Notifications