ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 14: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಉಪಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಪ್ರದರ್ಶನ ತೋರಿರುವ ಕಾರಣ ನೈತಿಕ ಜವಾಬ್ದಾರಿ ಹೊತ್ತು ಎಚ್‌.ಕೆ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವ ಸಂಭವ ಇದೆ.

ಮಾಜಿ ಸಿಎಂ ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮವೋ ಸಂಭ್ರಮಮಾಜಿ ಸಿಎಂ ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಎಚ್‌.ಡಿ.ದೇವೇಗೌಡ ಅವರಿಗೆ ತಮ್ಮ ನಿರ್ಣಯವನ್ನು ಎಚ್‌.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ ಇದಕ್ಕೆ ಸಹಮತ ವ್ಯಕ್ತಪಡಿಸಿದ ದೇವೇಗೌಡರು, ಸೋಲಿನ ಪರಾಮರ್ಶೆ ನಡೆಸಿ ಮತ್ತೆ ಪಕ್ಷವನ್ನು ಕಟ್ಟು ಕೆಲಸ ಮಾಡೋಣವೆಂದು ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.

HK Kumaraswamy May Resign To JDS President Post

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದಾಗ ಎಚ್.ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು. ಆದರೆ ಪಕ್ಷದ ಮೇಲೆ ದೇವೇಗೌಡ ಕುಟುಂಬದ ಹಿಡಿತದಿಂದ ಬೇಸತ್ತು ಎಚ್‌.ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಿದರು. ಆ ನಂತರ ಪಕ್ಷವನ್ನೂ ತ್ಯಜಿಸಿ ಬಿಜೆಪಿಗೆ ವಲಸೆ ಹೋದರು.

ನಂತರ ಸಕಲೇಶಪುರ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಯಿತು. ಆದರೆ ಅವರೂ ಸಹ ಸೂತ್ರದ ಬೊಂಬೆಯಂತಾದರೂ ಎನ್ನಲಾಗುತ್ತಿದೆ. ಹೀಗಾಗಿ ಕುಮಾರಸ್ವಾಮಿ ಸಹ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗುತ್ತಿದೆ.

English summary
JDS state president HK Kumaraswamy may resign to his post. JDS poorly performed in by elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X