ಪತ್ರಕರ್ತರು, ಶ್ರೀಸಾಮಾನ್ಯರ ಖಾಸಗೀತನಕ್ಕೆ ಗೌರವವಿಲ್ಲವೇ: ಎಚ್ಕೆ ಪಾಟೀಲ್ ಪ್ರಶ್ನೆ
ಬೆಂಗಳೂರು, ಆಗಸ್ಟ್ 21: ಕರ್ನಾಟಕದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರ ಆಡಳಿತ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದಾರೆ.
"ಪತ್ರಕರ್ತರು, ಶ್ರೀಸಾಮಾನ್ಯರ ದೂರವಾಣಿಗಳು ಕದ್ದಾಲಿಕೆಯಾಗಿದ್ದರೆ ಅವರ ಖಾಸಗಿತನಕ್ಕೆ ಧಕ್ಕೆಯಾಗಿದ್ದರೆ ಅದಕ್ಕೆ ಗೌರವವಿಲ್ಲವೇ" ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎಚ್ ಕೆ ಪಾಟೀಲ್ ಪ್ರಶ್ನಿಸಿದ್ದಾರೆ.
ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಪತ್ರಕರ್ತರು ಮತ್ತು ಶ್ರೀಸಾಮಾನ್ಯರ ದೂರವಾಣಿಗಳು ಕದ್ದಾಲಿಕೆಯಾಗಿದ್ದರೆ ಅದನ್ನೂ ಸಹ ತನಿಖೆಯ ವ್ಯಾಪ್ತಿಗೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಎಡಿಯೂರಪ್ಪನವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ತನಿಖೆಯ ಸಂದರ್ಭದಲ್ಲಿ ಎಲ್ಲಾ ಸತ್ಯಗಳು ಹೊರಬರಬೇಕು. ನೀತಿಗೆಟ್ಟ ಅಕ್ರಮಗಳು, ಲಂಚ ಕೊಡಕೊಳ್ಳುವ ವ್ಯವಹಾರಗಳು, ರಾಜ್ಯದ್ರೋಹದ ಕೆಲಸಗಳು, ಕಾನೂನು ಬಾಹಿರ ಕೆಲಸಗಳು ಈ ಕದ್ದಾಲಿಕೆಯಿಂದ ಲಭ್ಯವಾಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಬಹಿರಂಗಗೊಂಡ ಗಂಭೀರವಾದ ಕ್ರಿಮಿನಲ್ ಪ್ರಕರಣಗಳು ಮತ್ತು ಅದರ ಭಾಗಿಯಾದ ಮತ್ತು ಅಂಥ ಅಪರಾಧಿಕ ಪ್ರಕರಣಗಳಿಗೆ ನೆರವು ನೀಡಿದ ವ್ಯಕ್ತಿಗಳ ವಿರುದ್ದ ಕಾನೂನು ಪ್ರಕಾರ ಕ್ರಮಗಳಾಗಬೇಕು.

ಕದ್ದಾಲಿಕೆಯಿಂದ ಬಹಿರಂಗಗೊಂಡ ಮಾಹಿತಿಯ ಗಂಭೀರತೆ
ರಾಜ್ಯದಲ್ಲಿ ಕದ್ದಾಲಿಕೆ ನಡೆಯಿತೋ ಇಲ್ಲವೋ ಎಂಬುದನ್ನು ತಿಳಿಯಲು ಮಾತ್ರ ಆಸಕ್ತಿಯಲ್ಲ. ಕದ್ದಾಲಿಕೆ ಮಾಡಿದವರ ತಪ್ಪು ಮಾತ್ರ ಎತ್ತಿ ತೋರುವುದು ಸರ್ಕಾರದ ಉದ್ದೇಶವಾಗಬಾರದು. ಕದ್ದಾಲಿಕೆಯಿಂದ ಬಹಿರಂಗಗೊಂಡ ಮಾಹಿತಿಯ ಗಂಭೀರತೆಯ ಆಧಾರದ ಮೇಲೆ ಅದೂ ಸಹ ತನಿಖೆಯ ವ್ಯಾಪ್ತಿಗೆ ಒಳಪಡಬೇಕು.

ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುವ ನೇರವಾದ ಪ್ರಯತ್ನ
ದೂರವಾಣಿ ಕದ್ದಾಲಿಕೆಯಂತಹ ಆರೋಪಗಳು ಬಹು ಗಂಭೀರವಾದ ದೂರಗಾಮಿ ಪರಿಣಾಮಗಳನ್ನುಂಟು ಮಾಡುವುದರಿಂದ ಇಂಥ ಆರೋಪಗಳ ಎಲ್ಲ ಆಯಾಮಗಳು ತನಿಖೆಯ ವ್ಯಾಪ್ತಿಗೊಳಪಡಬೇಕು. ವ್ಯಕ್ತಿಯೊಬ್ಬರ ಖಾಸಗಿತನದಲ್ಲಿ ನೇರವಾದ ಮಧ್ಯಪ್ರವೇಶ ಶ್ರೀಸಾಮಾನ್ಯನ ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುವ ನೇರವಾದ ಪ್ರಯತ್ನ ಇದಾಗುತ್ತದೆ.

ಸತ್ಯ ಸಾರ್ವಜನಿಕರಿಗೆ ಲಭ್ಯವಾಗಬೇಕು
ಇಂತಹ ಕದ್ದಾಲಿಕೆ ನಡೆದಿದ್ದರೆ ಅಂಥ ಸಂದರ್ಭದಲ್ಲಿ ದೊರಕಿದ ಮಾಹಿತಿಯ ಹಿನ್ನೆಲೆಯಲ್ಲಿ ಸಂಭವಿಸಿರುವ ಅಪರಾಧ ಪ್ರಕರಣಗಳು ತನಿಖೆಗೆ ಒಳಪಡಬೇಕು. ಸತ್ಯ ಸಾರ್ವಜನಿಕರಿಗೆ ಲಭ್ಯವಾಗಬೇಕು. ತನ್ಮೂಲಕ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮಗಳಿಗೆ ಇಂಬು ಕೊಡಬೇಕು. ಇಂಥ ತನಿಖೆಗಳು ಕೇವಲ ಸಂಕುಚಿತ ಉದ್ದೇಶವನ್ನಿಟ್ಟುಕೊಂಡು ರಾಜಕೀಯ ಪ್ರತಿಕಾರದ ಕ್ರಮಗಳಾಗಿ ಬಳಕೆಯಾಗಬಾರದು.
|
ಕಾರಣೀಕರ್ತರಾದ ಅಧಿಕಾರಿಗಳಿಗೆ ಸೂಕ್ತವಾದ ಶಿಕ್ಷೆ
ಬದಲಿಗೆ ನಿಜವಾಗಿ ನಡೆದಿರುವ ಅಪರಾಧಗಳು ನೀತಿಗೆಟ್ಟ ಕ್ರಮಗಳು ಮುಂತಾದವುಗಳು ತನಿಖೆಯಾಗಿ ಇವುಗಳಲ್ಲಿ ಭಾಗಿಯಾದವರಿಗೆ ಮತ್ತು ಕಾರಣೀಕರ್ತರಾದ ಅಧಿಕಾರಿಗಳಿಗೆ ಸೂಕ್ತವಾದ ಶಿಕ್ಷೆಯಾಗುವಲ್ಲಿ ಗಂಭೀರವಾದ ಪಾತ್ರವಹಿಸಬೇಕು. ಅದಕ್ಕಾಗಿ ಪರಿಣಾಮಕಾರಿಯಾದ ತನಿಖೆಯಾಗುವಂತೆ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಿ ಎಲ್ಲ ಅಂಶಗಳನ್ನು ಒಳಗೊಂಡ ಆದೇಶ ಹೊರಡಿಸಬೇಕೆಂದು ಆಗ್ರಹಿಸುವೆ ಎಂದು ತಮ್ಮ ಎರಡು ಪುಟದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications