ನಾನು ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ಎಚ್‌.ಎಂ.ರೇವಣ್ಣ

ಬೆಂಗಳೂರು, ಜನವರಿ 26: ನಾನು ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಅವರು ಲೋಕಸಭೆ ಟಿಕೆಟ್‌ಗಾಗಿ ಕಾಂಗ್ರೆಸ್‌ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆಯಲ್ಲಿದ್ದಾರೆ.

'ನಾನು ಬಹು ವರ್ಷಗಳಿಂದ ಕಾಂಗ್ರೆಸ್‌ನ ಕಾರ್ಯಕರ್ತನಾಗಿದ್ದು, ಯೂತ್ ಕಾಂಗ್ರೆಸ್‌ ನಿಂದ ರಾಜಕೀಯ ಪ್ರಾರಂಭಿಸಿ, 12 ವರ್ಷಗಳ ಕಾಲ ಜಿಲ್ಲಾ ಅಧ್ಯಕ್ಷನಾಗಿ ದುಡಿದಿದ್ದೇನೆ ಎಂದು ಅವರು ಹೇಳಿದ್ದಾರೆ.

HM revanna aspirant of Lok Sabha election ticket from Bengaluru north constituency

ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಬೇಕು ಎಂಬುದು ನನ್ನ ಅಭಿಲಾಷೆ ಆದರೆ ಪಕ್ಷ ಎಲ್ಲಿಂದ ಟಿಕೆಟ್ ನೀಡಿದರೂ ಅಲ್ಲಿ ಸ್ಪರ್ಧಿಸುತ್ತೇನೆ ಎಂದರು.

ದಾವಣಗೆರೆಯಿಂದ ಟಿಕೆಟ್ ನೀಡಬೇಕು ಎಂಬ ಚರ್ಚೆ ಆಗಿದೆಯೆಂದು ಗೊತ್ತಾಗಿದೆ. ನಾನು ಎಲ್ಲದಕ್ಕೂ ತಯಾರಾಗಿದ್ದೇನೆ. ಪಕ್ಷದ ಆಜ್ಞೆಯನ್ನು ಪಾಲಿಸುತ್ತೇನೆ. ಟಿಕೆಟ್ ಹಂಚಲು ಇನ್ನೂ ಸಮಯ ಇದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರಸ್ತುತ ಸದಾನಂದ ಗೌಡ ಅವರು ಸಂಸದರಾಗಿದ್ದಾರೆ. ಅದೇ ಕ್ಷೇತ್ರದಿಂದ ನಟಿ ರಮ್ಯಾ ಅವರು ಟಿಕೆಟ್ ಕೇಳಿದ್ದು, ಯಾರಿಗೆ ಟಿಕೆಟ್ ದೊರಕುತ್ತದೆ ಎಂಬುದು ಅನುಮಾನ. ದಾವಣಗೆರೆಯಿಂದ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಕೆಲವು ಶಾಸಕರು ಕೆ.ಸಿ.ವೇಣುಗೋಪಾಲ್ ಅವರಿಗೆ ಮನವಿ ಸಹ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+