ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಉತ್ತರದಿಂದ ಎಚ್.ಎಂ.ರೇವಣ್ಣ ಕಾಂಗ್ರೆಸ್ ಅಭ್ಯರ್ಥಿ?

|
Google Oneindia Kannada News

Recommended Video

Lok Sabha Elections 2019 : ಬೆಂಗಳೂರು ಉತ್ತರದಿಂದ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲುತ್ತಾರಾ?

ಬೆಂಗಳೂರು, ಡಿಸೆಂಬರ್ 26 : 2019ರ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿದೆ?. ಬಿಜೆಪಿ ವಶದಲ್ಲಿರುವ ಕ್ಷೇತ್ರವಿದಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಲಿ ಸಂಸದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಪಕ್ಷದ ಮುಖಂಡರು, ಕಾರ್ಯಕರ್ತರು ರೇವಣ್ಣ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ.

ಲೋಕಸಭೆ ಚುನಾವಣೆ : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆ : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ವಿಧಾನ ಪರಿಷತ್ ಸದಸ್ಯರಾಗಿರುವ ಎಚ್.ಎಂ.ರೇವಣ್ಣ ಅವರು ಶೀಘ್ರದಲ್ಲಿಯೇ ಬಿಬಿಎಂಪಿ ಸದಸ್ಯರು, ಶಾಸಕರು, ಪಕ್ಷದ ನಾಯಕರ ಜೊತೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ಬಳಿಕ ಅವರು ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಡಿ.ವಿ.ಸದಾನಂದ ಗೌಡ ಅವರು ಈ ಬಾರಿ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 'ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ' ಎಂದು ಹೇಳಿದ್ದಾರೆ....

ಲೋಕಸಭೆ ಚುನಾವಣೆ : 9 ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳಿಲ್ಲ!ಲೋಕಸಭೆ ಚುನಾವಣೆ : 9 ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳಿಲ್ಲ!

ಬೆಂಗಳೂರು ಉತ್ತರ ಕ್ಷೇತ್ರ

ಬೆಂಗಳೂರು ಉತ್ತರ ಕ್ಷೇತ್ರ

ಬೆಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಅವರು ಪರಮಾಪ್ತರಾದ ರೇವಣ್ಣ ಅವರು ಹೈ ಮಾಂಡ್ ಒಪ್ಪಿಗೆ ನೀಡಿದರೆ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಚನ್ನಪಟ್ಟಣದಲ್ಲಿ ಸೋಲು

ಚನ್ನಪಟ್ಟಣದಲ್ಲಿ ಸೋಲು

ಸಿದ್ದರಾಮಯ್ಯ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದ ಎಚ್.ಎಂ.ರೇವಣ್ಣ ಅವರು 2018ರ ವಿಧಾನಸಭೆ ಚುನಾವಣೆಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಿಂದ ಕಣಕ್ಕಿಳಿದಿದ್ದರು. ಆದರೆ, 30,208 ಮತಗಳನ್ನು ಪಡೆದು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 3ನೇ ಸ್ಥಾನಕ್ಕೆ ಕುಸಿದಿದ್ದರು.

ಸಿ.ನಾರಾಯಣಸ್ವಾಮಿ ಸ್ಪರ್ಧೆ

ಸಿ.ನಾರಾಯಣಸ್ವಾಮಿ ಸ್ಪರ್ಧೆ

ಮೊದಲು ಬೆಂಗಳೂರು ಉತ್ತರ ಕ್ಷೇತ್ರದಿಂದ ದಿ.ಸಿ.ಕೆ.ಜಾಫರ್ ಷರೀಫ್ ಸ್ಪರ್ಧೆ ಮಾಡುತ್ತಿದ್ದರು. 2014ರ ಚುನಾವಣೆಯಲ್ಲಿ ಸಿ.ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 4,88,562 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಆದ್ದರಿಂದ, ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡಿ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಶಾಸಕರೇ ಹೆಚ್ಚು

ಕಾಂಗ್ರೆಸ್ ಶಾಸಕರೇ ಹೆಚ್ಚು

ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬ್ಯಾಟರಾಯನಪುರ, ದಾಸರಹಳ್ಳಿ, ಹೆಬ್ಬಾಳ, ಪುಲಿಕೇಶಿ ನಗರ, ಮಹಾಲಕ್ಷ್ಮೀಪುರಂ, ಮಲ್ಲೇಶ್ವರಂ, ಯಶವಂತಪುರ, ಕೆ.ಆರ್.ಪುರಂ ಸೇರಿ 8 ವಿಧಾನಸಭಾ ಕ್ಷೇತ್ರಗಳಿವೆ. ಮಲ್ಲೇಶ್ವರಂಮ ಹೊರತು ಪಡಿಸಿ ಉಳಿದ ಕಡೆ ಕಾಂಗ್ರೆಸ್‌-ಜೆಡಿಎಸ್ ಶಾಸಕರು ಇದ್ದಾರೆ. ಆದ್ದರಿಂದ, ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.

ಡಿ.ವಿ.ಸದಾನಂದ ಗೆಲುವು

ಡಿ.ವಿ.ಸದಾನಂದ ಗೆಲುವು

2014ರ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿಜೆಪಿಯ ಡಿ.ವಿ.ಸದಾನಂದ ಗೌಡ ಅವರು ಗೆದ್ದಿದ್ದರು. 718326 ಮತಗಳನ್ನು ಪಡೆದ ಅವರು ಜಯಗಳಿಸಿ, ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರು ಸಹ ಆದರು. ಈ ಬಾರಿಯೂ ಬಿಜೆಪಿಯಿಂದ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

English summary
Former minister and legislative council member H.M.Revanna may contest for 2019 Lok Sabha Election from Bengaluru North constituency as Congress candidate. Union Minister D.V. Sadananda Gowda sitting MP of the constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X