ಸಾಲು-ಸಾಲು ರಜೆ : ಕೆಎಸ್ಆರ್‌ಟಿಸಿಯಿಂದ 1200 ಹೆಚ್ಚುವರಿ ಬಸ್

ಬೆಂಗಳೂರು, ಆಗಸ್ಟ್ 11 : ಸಾಲು-ಸಾಲು ರಜೆಗಳ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ 1,200 ಹೆಚ್ಚುವರಿ ಬಸ್ಸುಗಳನ್ನು ಓಡಿಸಲಿದೆ. ಆಗಸ್ಟ್ 12 ರಿಂದ 14ರ ತನಕ ಈ ಬಸ್ಸುಗಳು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸಲಿದೆ.

ಬೇರೆ ಪ್ರದೇಗಳಿಂದ ಬೆಂಗಳೂರಿಗೆ ವಾಪಸ್ ಆಗಲು ಆಗಸ್ಟ್ 15ರಂದು ವಿಶೇಷ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಂದ ಬಸ್ಸುಗಳು ಬೆಂಗಳೂರಿಗೆ ಆಗಮಿಸಲಿವೆ. ಮುಂಗಡ ಟಿಕೆಟ್‌ಗಾಗಿ ವೆಬ್‌ಸೈಟ್ ನೋಡಿ.[KSRTC ವೆಬ್ ಸೈಟ್]

ksrtc

ರಜೆಗಳ ಪಟ್ಟಿ : ಆಗಸ್ಟ್ 12 ವರಮಹಾಲಕ್ಷ್ಮೀ ವೃತ, ಆಗಸ್ಟ್ 13 ಶನಿವಾರ (2ನೇ ಶನಿವಾರ), ಆಗಸ್ಟ್ 14 ಭಾನುವಾರ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ.[2016ರ ರಜೆ ಪಟ್ಟಿ ನೋಡಿ]

ಎಲ್ಲಿಂದ ಬಸ್ಸುಗಳು ಹೊರಡಲಿವೆ : ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾಡ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾಗಗಿರಿ, ಬೀದರ್ ಮುಂತಾದ ಸ್ಥಳಗಳಿಗೆ ಬಸ್ಸುಗಳು ಹೊರಡಲಿವೆ.

* ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಸಂಚಾರ ನಡೆಸುವ ಬಸ್ಸುಗಳು ಹೊರಡಲಿವೆ.

* ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಹೊರ ರಾಜ್ಯದ ಬಸ್ಸುಗಳು ಸಂಚಾರ ನಡೆಸಲಿವೆ.

* ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾಡ ಮುಂತಾದ ಕಡೆ ಸಾಗುವ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ ವಿಶೇಷ ಬಸ್ಸುಗಳು ಮೈಸೂರು ರಸ್ತೆಯ ಬಸ್ ನಿಲ್ದಾಣದಿಂದ ಹೊರಡಲಿವೆ. ಮುಂಗಡ ಟಿಕೆಟ್ ಕಾಯ್ದಿರಿಸದ ವಿಶೇಷ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಹೊರಡಲಿವೆ.

* ಕಲಬುರಗಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಕಡೆ ಸಾಗುವ ಮುಂಗಡ ಟಿಕೆಟ್ ಕಾಯ್ದಿರಿಸಿದ ಬಸ್ಸುಗಳು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದಿಂದ ಹೊರಡಲಿವೆ. ಮುಂಗಡ ಟಿಕೆಟ್ ಕಾಯ್ದಿರಿಸದ ವಿಶೇಷ ಬಸ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿವೆ.

* ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರೆ ಜಯನಗರ 4ನೇ ಬ್ಲಾಕ್, 9ನೇ ಬ್ಲಾಕ್, ಜೆ.ಪಿ.ನಗರ, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಕ್ರಾಸ್, ಕೆಂಗೇರಿ ಉಪನಗರದಿಂದ ಶಿವಮೊಗ್ಗ, ಕುಂದಾಪುರ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ ಶೃಂಗೇರಿ, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯಕ್ಕೆ ವಿಶೇಷ ಬಸ್ಸುಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+