ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ಸಪ್ಲೈಯರ್ ಮೇಲಿನ ಹಲ್ಲೆ ಪ್ರಕರಣ ತನಿಖೆಗೆ ಗೃಹ ಸಚಿವರ ಆದೇಶ

|
Google Oneindia Kannada News

ಬೆಂಗಳೂರು, ಜು. 15: ಮೈಸೂರಿನ ಐಷಾರಾಮಿ ಹೋಟೆಲ್‌ನಲ್ಲಿ ನಟ ದರ್ಶನ್ ಮತ್ತು ಆಪ್ತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಲುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ.

ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೋಟೆಲ್‌ನಲ್ಲಿ ನಟ ದರ್ಶನ್ ಹಾಗೂ ಆಪ್ತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನ್ಯಾಯ ಉಳ್ಳವರ ಪರ ಎಂಬಂತಗಿದೆ. ಸೆಲಬ್ರಿಟಿಯೊಬ್ಬರ ಪ್ರಕರಣದಲ್ಲಿ ಮಹಿಳೆಯನ್ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಜನ ಸಾಮಾನ್ಯರಿಗೆ ಪೊಲೀಸರ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಆಗಿದೆ. ಸಮರ್ಥ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ತನಿಖೆ ನಡೆಸಿ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಮಾಡಿದ ಪ್ರಕರಣದ ತನಿಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಸಮರ್ಥ ತನಿಖೆ ನಡೆಸಿ. ಹಲ್ಲೆ ಮಾಡಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

Home Minister Basavaraj Bommai Order Inquiry against Darshan and his friends in assault case

Recommended Video

Sandesh Prince- ಸಾಕ್ಷ್ಯ ಬೇಕು ಅಂದ್ರೆ CCTV ಫೂಟೇಜ್ ಚೆಕ್ ಮಾಡಿ! | Oneindia Kannada

''ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ದಲಿತ ಸಮುದಾಯದ ಸಪ್ಲೈಯರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಟಿವಿ ನೋಡಿದ ಮೇಲೆಯೇ ಗೊತ್ತಾಗಿದ್ದು, ಹಲ್ಲೆ ಬಗ್ಗೆ ನನಗೆ ಯಾರೂ ಮಾಹಿತಿ ನೀಡಿಲ್ಲ. ಮಾಧ್ಯಮಗಳಲ್ಲಿ ನೋಡಿದಾಗಲೇ ನನಗೆ ಗೊತ್ತಾಗಿದ್ದು,'' ಎಂದು ಉದ್ಯಮಿ ಸಂದೇಶ ನಾಗರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

English summary
Assault on Dalit supplier: Home Minister Basavaraj Bommai Order Inquiry against Darshan and his friends in assault case know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X