ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೊಮ್ಮೆ ಲಾಕ್‌ಡೌನ್‌: ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಜೂನ್ 24: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚು ಹರಡುತ್ತಿದ್ದು, ಮತ್ತೊಮ್ಮೆ ಲಾಕ್‌ಡೌನ್‌ ಮಾಡಬೇಕಾ ಎಂಬ ವಿಷಯ ವ್ಯಾಪಕವಾಗಿ ಚರ್ಚೆಯಾಗ್ತಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಹೊಸ ಕೇಸ್‌ಗಳ ಏರಿಕೆಯಾಗಿದ್ದು, ಸಹಜವಾಗಿ ಆತಂಕ ಹೆಚ್ಚಿಸಿದೆ.

Recommended Video

ಮೋದಿಯನ್ನು ಹೊಗಳಿದ ಚೀನಾ | China Praising Narendra Modi | Oneindia Kannada

ಈ ಬೆನ್ನಲ್ಲೆ ಮತ್ತೊಮ್ಮೆ ಲಾಕ್‌ಡೌನ್‌ ಮಾಡುವುದು ಅನಿವಾರ್ಯ ಎಂಬ ವಾದವೂ ಕೇಳಿ ಬರುತ್ತಿದೆ. ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 20 ದಿನಗಳ ಕಾಲ ಬೆಂಗಳೂರು ಲಾಕ್‌ಡೌನ್‌ ಮಾಡಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌? ಶ್ರೀರಾಮುಲು ಹೇಳಿದ್ದೇನು?ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌? ಶ್ರೀರಾಮುಲು ಹೇಳಿದ್ದೇನು?

ಮತ್ತೊಮ್ಮೆ ಲಾಕ್‌ಡೌನ್‌ ಮಾಡುವ ವಿಷಯದ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ''ಲಾಕ್ ಡೌನ್ ವ್ಯಾಪಕವಾದ ಚರ್ಚೆ ಆಗ್ತಿದೆ. ಸಿಎಂ‌ ಕೂಡ ಎಲ್ಲ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡ್ತಿದ್ದಾರೆ. ಲಾಕ್ ಡೌನ್ ಓಪನ್ ಆದ್ಮೇಲೆ ಏನೆಲ್ಲಾ ನಡೆಯುತ್ತಿದೆ ಅನ್ನೋದನ್ನ ಕೂಡ ಗಮನಿಸಲಾಗ್ತಿದೆ. ಮತ್ತೆ ಲಾಕ್ ಡೌನ್ ಮಾಡಬೇಕಾ ಅಥವಾ ಬೇಡವೇ ಅನ್ನೋದನ್ನ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ'' ಎಂದು ತಿಳಿಸಿದ್ದಾರೆ.

Home Minister Basavaraj Bommai React On Lockdown

''ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಾ? ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಬೇಕಾ ಅಥವಾ ಟಾಸ್ಕ್ ಫೋರ್ಸ್ ಕಮೀಟಿ ಜೊತೆ ಚರ್ಚೆ ಮಾಡಬೇಕಾ ಅನ್ನೋದರ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ. ಕೊರೊನಾ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಬೇಕಾ..? ಬೇಡ್ವಾ.? ಅನ್ನೋ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸುತ್ತೆ ಸರ್ಕಾರ'' ಎಂದು ಹೇಳಿದ್ದಾರೆ.

ಇದಕ್ಕೂ ಮುಂಚೆ ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿದ್ದು ''ಲಾಕ್ ಡೌನ್ ಬೇಕಾ ಬೇಡವೋ ಎಂದು ತೀರ್ಮಾನ ಮಾಡೋಕೆ ತಜ್ಞರ ಸಮಿತಿ ಇದೆ. ಅವರು ಸಲಹೆ ಸೂಚನೆ ಕೊಡ್ತಾರೆ'' ಎಂದಿದ್ದಾರೆ.

English summary
After Sriramulu, Home Minister Basavaraj Bommai React on Lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X