ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಎಸ್‌ಐಟಿ' ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!

|
Google Oneindia Kannada News

ಬೆಂಗಳೂರು, ಮಾ. 13: ರಮೇಶ್ ಜಾರಕಿಹೊಳಿ ಅವರ 'ಸಿಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದು, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಈಗಾಗಲೇ 'ಸಿಡಿ' ಕುರಿತು ಎಸ್‌ಐಟಿ ತನಿಖೆ ಆರಂಭಿಸಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿಯಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗದೆ ಸರಿಯಾದ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ ಎಂಬ ಪ್ರಶ್ನೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

'ಸಿಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ? ಎಂಬ ಪ್ರಶ್ನೆಗೆ ಬಸವರಾಜ್ ಬೊಮ್ಮಾಯಿ ಅವರು 'ನೋ ಕಮೆಂಟ್ಸ್‌' ಎಂದಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದಲ್ಲಿ ಮಾತನಾಡಿರುವ ಅವರು, ತನಿಖೆ ಮಾಡಲು ಎಸ್‌ಐಟಿಗೆ ಸಂಪೂರ್ಣವಾದ ಸ್ವಾತಂತ್ರ್ಯವನ್ನು ಕೊಟ್ಟಿದ್ದೇವೆ. ಹೀಗಾಗಿ ನಾನು ಏನನ್ನೂ ಹೇಳುವುದಿಲ್ಲ. ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿದೆ ಎಂದಿದ್ದಾರೆ.

Home Minister Basavaraj Bommai Reaction on SIT Probe in Ramesh Jarkiholi CD Row

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಾಸ್ಟರ್ ಮೈಂಡ್ ಗಳಿಗಾಗಿ ಶೋಧ! ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಾಸ್ಟರ್ ಮೈಂಡ್ ಗಳಿಗಾಗಿ ಶೋಧ!

ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಜತೆ ಈಗಾಗಲೇ ಮಾತನಾಡಿದ್ದೇವೆ. ಆಯೋಗ ರಚನೆ ಮಾಡಿದ್ದೇವೆ. ಹೀಗಾಗಿ ವಿಧಾನಸಭೆಯಲ್ಲಿ ಪ್ರತಿಭಟನೆ ಬೇಡ ಅಂತಾ ಮನವಿ ಮಾಡಿದ್ದೇನೆ. ಆಯೋಗ ನೊಟೀಸ್ ನೀಡಿದೆ. ಅವರು ಆಯೋಗದ ಮುಂದೆ ಹಾಜರಾಗುತ್ತಾರೋ ಇಲ್ಲವೋ ಎಂಬುದನ್ನು ಈಗಲೇ ಊಹೆ ಮಾಡಿ ಹೇಳುವದಕ್ಕೆ ಆಗುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ. ಏನಾಗುತ್ತೋ ನೋಡೋಣ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Recommended Video

CBI / SIT ಇನ್ನು ಗೊಂದಲದಲ್ಲೇ ಇದೆ ರಾಜ್ಯ ಸರ್ಕಾರ! | Basavaraj Bommai | Oneindia Kannada

English summary
Home Minister Basavaraj Bommai Reaction on SIT Probe in Ramesh Jarkiholi CD Row. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X