ಬೆಂಗಳೂರು; ಸಹಾಯಕನಿಗೆ ಸೋಂಕು, ಎಡಿಜಿಪಿಗೆ ಹೋಂ ಕ್ವಾರಂಟೈನ್

ಬೆಂಗಳೂರು, ಜೂನ್ 23 : ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲುತ್ತಿದ್ದು ಪೊಲೀಸ್ ಠಾಣೆಗಳು ಸೀಲ್ ಡೌನ್ ಆಗುತ್ತಿವೆ. ಎಡಿಜಿಪಿಯೊಬ್ಬರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Recommended Video

      ಮೋದಿಯನ್ನು ಹೊಗಳಿದ ಚೀನಾ | China Praising Narendra Modi | Oneindia Kannada

      ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಧಿಕಾರಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

      "ನನ್ನ ಆಪ್ತ ಸಹಾಯಕರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ನಾನು ಹೋಂ ಕ್ವಾರಂಟೈನ್‌ನಲ್ಲಿದ್ದೇನೆ" ಎಂದು ಅಮರ್ ಕುಮಾರ್ ಪಾಂಡೆ ಹೇಳಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿಯನ್ನು ಸೆನೆಗಲ್‌ನಿಂದ ಬೆಂಗಳೂರಿಗೆ ಕರೆತರುವಲ್ಲಿ ಪಾಂಡೆ ವಿಶೇಷ ಶ್ರಮ ವಹಿಸಿದ್ದರು.

       Home Quarantine For ADGP Amar Kumar Pandey

      ಕರ್ನಾಟಕದಲ್ಲಿ ಇದುವರೆಗೂ 56 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಕಳೆದ ಒಂದು ವಾರದಿಂದ ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹಬ್ಬುತ್ತಿದ್ದು, 10ಕ್ಕೂ ಹೆಚ್ಚು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

      ಕಾನ್ಸ್‌ಟೇಬಲ್ ಆತ್ಮಹತ್ಯೆ : ಕೆಎಸ್ಆರ್‌ಪಿ 4ನೇ ಬೆಟಾಲಿಯನ್‌ನ 50ವರ್ಷದ ಪೊಲೀಸ್ ಕಾನ್ಸ್‌ಟೇಬಲ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೂ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+