ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಸಹಾಯಕನಿಗೆ ಸೋಂಕು, ಎಡಿಜಿಪಿಗೆ ಹೋಂ ಕ್ವಾರಂಟೈನ್

|
Google Oneindia Kannada News

ಬೆಂಗಳೂರು, ಜೂನ್ 23 : ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲುತ್ತಿದ್ದು ಪೊಲೀಸ್ ಠಾಣೆಗಳು ಸೀಲ್ ಡೌನ್ ಆಗುತ್ತಿವೆ. ಎಡಿಜಿಪಿಯೊಬ್ಬರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Recommended Video

ಮೋದಿಯನ್ನು ಹೊಗಳಿದ ಚೀನಾ | China Praising Narendra Modi | Oneindia Kannada

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಧಿಕಾರಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಕರ್ನಾಟಕ; ಹೋಂ ಕ್ವಾರಂಟೈನ್‌ ಉಲ್ಲಂಘನೆ ಮಾಡಿದವರ ಲೆಕ್ಕ! ಕರ್ನಾಟಕ; ಹೋಂ ಕ್ವಾರಂಟೈನ್‌ ಉಲ್ಲಂಘನೆ ಮಾಡಿದವರ ಲೆಕ್ಕ!

"ನನ್ನ ಆಪ್ತ ಸಹಾಯಕರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ನಾನು ಹೋಂ ಕ್ವಾರಂಟೈನ್‌ನಲ್ಲಿದ್ದೇನೆ" ಎಂದು ಅಮರ್ ಕುಮಾರ್ ಪಾಂಡೆ ಹೇಳಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿಯನ್ನು ಸೆನೆಗಲ್‌ನಿಂದ ಬೆಂಗಳೂರಿಗೆ ಕರೆತರುವಲ್ಲಿ ಪಾಂಡೆ ವಿಶೇಷ ಶ್ರಮ ವಹಿಸಿದ್ದರು.

36 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ 36 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ

 Home Quarantine For ADGP Amar Kumar Pandey

ಕರ್ನಾಟಕದಲ್ಲಿ ಇದುವರೆಗೂ 56 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಕಳೆದ ಒಂದು ವಾರದಿಂದ ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹಬ್ಬುತ್ತಿದ್ದು, 10ಕ್ಕೂ ಹೆಚ್ಚು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ವೈರಸ್‌ಗೆ ಹೆದರಿ ಪೊಲೀಸ್ ಕಾನ್ಸ್ ಸ್ಟೇಬಲ್ ಆತ್ಮಹತ್ಯೆಕೊರೊನಾ ವೈರಸ್‌ಗೆ ಹೆದರಿ ಪೊಲೀಸ್ ಕಾನ್ಸ್ ಸ್ಟೇಬಲ್ ಆತ್ಮಹತ್ಯೆ

ಕಾನ್ಸ್‌ಟೇಬಲ್ ಆತ್ಮಹತ್ಯೆ : ಕೆಎಸ್ಆರ್‌ಪಿ 4ನೇ ಬೆಟಾಲಿಯನ್‌ನ 50ವರ್ಷದ ಪೊಲೀಸ್ ಕಾನ್ಸ್‌ಟೇಬಲ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೂ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದರು.

English summary
ADGP (Law and order) Amar Kumar Pandey under home quarantine after his personal assistant tested positive for COVID - 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X