Property: ಈ ಭಾಗದಲ್ಲಿ ಭೂಮಿ ಇದ್ದವರು ಸದ್ಯದಲ್ಲೇ ಕೋಟ್ಯಾಧಿಪತಿಗಳು; ಡಿಕೆ ಶಿವಕುಮಾರ್ ಕೊಟ್ರು ಗುಡ್‌ನ್ಯೂಸ್
ಬೆಂಗಳೂರು ಹಾಗೂ ಸುತ್ತಮುತ್ತಲಿನ ಆಸ್ತಿದಾರರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಆಸ್ತಿ ಖರೀದಿದಾರರು ಭೂಮಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಂತವರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರಿಗೆ ಸಮೀಪದಲ್ಲೇ ಇರುವ ಈ ಪ್ರದೇಶದಲ್ಲಿ ಭೂಮಿ ಬೆಲೆ ಗಗನಕ್ಕೇರಲಿದ್ದು, ಸದ್ಯದಲ್ಲೇ ಇದು ಬೆಂಗಳೂರಿನ ಆಸ್ತಿಯಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.
ಹೌದು ಇಂದು ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ಶರತ್ ಬಚ್ಚೇಗೌಡರು, ಮುನಿಯಪ್ಪನವರು, ಶ್ರೀನಿವಾಸ್ ಅವರನ್ನು ಬೆಂಗಳೂರು ಗ್ರಾಮಾಂತರದ ಜನರು ಗೆಲ್ಲಿಸಿ ನಮಗೆ ಶಕ್ತಿ ತುಂಬಿದ್ದಾರೆ. ಉಪಚುನಾವಣೆಯಲ್ಲಿ ಮೂರು ಜನರನ್ನು ಗೆಲ್ಲಿಸಿ 140 ಶಾಸಕರ ಬಲವನ್ನು ನಮಗೆ ನೀಡಿರುವ ನಿಮ್ಮ ಸೇವೆಗೆ ನಾವು ಸನ್ನದ್ದ.ಉಪಚುನಾವಣೆಯಲ್ಲಿ ಹಳೇ ಗಿರಾಕಿಗಳು ಬೇಡ ಎಂದು ಬದಲಾವಣೆಗೆ ನಾಂದಿ ಹಾಡಿದವರು ಕರ್ನಾಟಕದ ಜನರು ಎಂದು ಹೇಳಿದ್ದಾರೆ.

ಹೊಸಕೋಟೆ ತಾಲ್ಲೂಕಿನ ಜನರನ್ನುದ್ದೇಶಿಸಿ ಮಾತನಾಡಿದ ಅವರು ಈ ಭಾಗದ ಆಸ್ತಿಗಳೆಲ್ಲ ಮುಂದಿನ ದಿನಗಳಲ್ಲಿ ಬೆಂಗಳೂರಿನ ಆಸ್ತಿಗಳಾಗುವುದರಲ್ಲಿ ಅನುಮಾನವಿಲ್ಲ. ಈಗಾಗಲೇ ಈ ಭಾಗದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದೇವೆ. ನಿಮ್ಮ ಊರಿನ ಅಳಿಯನನ್ನೇ ಎಂಡಿಯನ್ನಾಗಿ ನೇಮಕ ಮಾಡಿದ್ದೇವೆ. ಅವರ ಬಳಿ ಪೇಪರ್ ಇದೆ, ನನ್ನ ಬಳಿ ಪೆನ್ನಿದೆ ಎಂದಿದ್ದಾರೆ.
ಹೊಸಕೋಟೆಗೆ ಶೀಘ್ರವೇ ಮೆಟ್ರೋ
ಹೊಸಕೋಟೆ ಭಾಗಕ್ಕೆ ಮೆಟ್ರೋ ಮಾರ್ಗ ತರಲು ಈಗಾಗಲೇ ಡಿಪಿಆರ್ ಮಾಡಲು ತೀರ್ಮಾನ ಮಾಡಿದ್ದೇವೆ. ನಮ್ಮ ಅವಧಿಯೊಳಗೆ ಮೆಟ್ರೋ ಮಂಜೂರು ಕೆಲಸ ಮಾಡುತ್ತೇನೆ ಎಂದೂ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಈ ಭಾಗಕ್ಕೆ 2027ರೊಳಗೆ ಎತ್ತಿನಹೊಳೆ ನೀರು ನೀಡಬೇಕು ಎಂದು ನಾವು ಶಪಥ ಮಾಡಿದ್ದೇವೆ. ಬೆಂಗಳೂರು ಉತ್ತರ ಭಾಗಕ್ಕೆ ನೀರು ಹರಿಸುವ ಕೆಲಸ ನಾವು ಮಾಡಲು ಸಿದ್ಧ. ಇಲ್ಲಿನ ಅಂತರ್ಜಲ ಹೆಚ್ಚಳ ಮಾಡಿ ಜನರಿಗೆ ಕುಡಿಯುವ ನೀರು ಒದಗಿಸಬೇಕು ಎಂಬುದು ನಮ್ಮ ಕನಸು. ಈ ಕೆಲಸವನ್ನು ಬಿಜೆಪಿಯವರು, ಬೊಮ್ಮಾಯಿ, ಯಡಿಯೂರಪ್ಪ ಅವರು ಮಾಡಿದ್ದರೇ? ಇದೆಲ್ಲವೂ ಮೋದಿ ಅವರ ಕಾಲದಲ್ಲಿ ಆಗಿತ್ತೇ? ಇದೆಲ್ಲವೂ ಕಾಂಗ್ರೆಸ್ ಕೊಡುಗೆ ಎಂದಿದ್ದಾರೆ.
ಉಪಕಾರ ಎನ್ನುವುದು ಪುಸ್ತಕದಲ್ಲಿ ಇರುವುದಿಲ್ಲ, ಮಾಡುವ ಮನಸ್ಸಿನಲ್ಲಿರುತ್ತದೆ. ಈ ಭಾಗದ ಒಬ್ಬ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಹೋದ. ಹೋದವನನ್ನು ಎಂಎಲ್‌ಸಿ ಮಾಡಿದರು. ಆದರೆ ಒಂದೇ ಒಂದು ದಿನ ಜನರ ಕಷ್ಟ ಸುಖ ಕೇಳುತ್ತಿಲ್ಲ. ಇವತ್ತು ವೇದಿಕೆಗೆ ಬಂದು ನಮ್ಮ ತಪ್ಪು ಒಪ್ಪುಗಳನ್ನು ಹೇಳಬೇಕಿತ್ತು. ಆದರೆ ಆತನಿಗೆ ಧಮ್ ಇಲ್ಲ, ಶಕ್ತಿ, ಧೈರ್ಯವಿಲ್ಲ ಎಂದು ಸ್ಥಳೀಯ ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.
ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ಸಾಧನೆಗಳು ನಮ್ಮ ಮೇಲಿರುತ್ತವೆ. ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ಸಿದ್ದರಾಮಯ್ಯ ಅವರನ್ನು ಅವರ ಕೆಲಸಗಳಿಗಾಗಿ ನೆನಪಿಸಿಕೊಳ್ಳುತ್ತೇವೆ. 19 ಸಾವಿರ ಕೋಟಿಯಷ್ಟು ಸಬ್ಸಿಡಿಯನ್ನು ರೈತರ ಪಂಪ್‌ಸೆಟ್ ವಿದ್ಯುತ್‌ಗೆ ನೀಡುತ್ತಿದ್ದೇವೆ. ಸಮಾಜ ಹಾಗೂ ಜನರ ಕಲ್ಯಾಣಕ್ಕೆಂದೇ 1 ಲಕ್ಷ ಕೋಟಿ ಹಣವನ್ನು ನೀಡುತ್ತಿದ್ದೇವೆ. ಕೃಷ್ಣ ಬೈರೇಗೌಡರು, ಪ್ರಿಯಾಂಕ್ ಖರ್ಗೆ ಅವರು ಹಟ್ಟಿ, ತಾಂಡದಲ್ಲಿನ ಜನರ ಕಷ್ಟಗಳನ್ನು ಅರ್ಥ ಮಾಡಿಕೊಂಡು, ಒಂದು ಕೋಟಿಗೂ ಹೆಚ್ಚು ಜನರಿಗೆ ಪಟ್ಟಾ ಖಾತೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಬಿ ಖಾತೆಗಳನ್ನು ಎ ಖಾತೆಗಳನ್ನಾಗಿ ಬದಲಾವಣೆ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.
ದಾನ ಧರ್ಮ ಮಾಡುವ ಈ ಕೈ ಅಧಿಕಾರದಲ್ಲಿ ಇರುವ ಕಾರಣಕ್ಕೆ ನಾವು ಅನೇಕ ಯೋಜನೆಗಳ ಮೂಲಕ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ. ಹೊಸಕೋಟೆ ಭಾಗದಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತದೆ. ನಮ್ಮ ಸರ್ಕಾರ ಕ್ಷೀರಧಾರೆ ಯೋಜನೆ ಮೂಲಕ ರೈತರ ಬೆಂಬಲಕ್ಕೆ ನಿಂತಿತ್ತು. 5 ರೂಪಾಯಿ ಸಹಾಯಧನ ನೀಡುವ ಮೂಲಕ ನಿಮಗೆ ನೆರವಾಗಿದ್ದು ನಾವು ಎಂದಿದ್ದಾರೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications