Breaking; ಹೊಸಕೋಟೆ ಅಪಘಾತ; ಆಂಧ್ರಮೂಲದ ದಂಪತಿ ಸಾವು, 18 ಮಂದಿಗೆ ಗಾಯ
ಬೆಂಗಳೂರು, ಅ.03: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮಕ್ಕಳೂ ಸೇರಿದಂತೆ 18 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮೃತ ದಂಪತಿ ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ. ಕಲ್ಲು ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಹಿಂದಿನಿಂಧ ಬಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.












Click it and Unblock the Notifications