ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನನ್ನ ಎದುರೇ ಶರತ್ ಒಪ್ಪಿಕೊಂಡಿದ್ದರು: ಕಟ್ಟಾ ಸುಬ್ರಮಣ್ಯ ನಾಯ್ಡು

|
Google Oneindia Kannada News

ಬೆಂಗಳೂರು, ನವೆಂಬರ್ 18: ಶರತ್ ಬಚ್ಚೇಗೌಡ ಅವರು ಹೊಸಕೋಟೆ ಉಪ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಅವರನ್ನು ಕಣಕ್ಕಿಳಿಸಲು ಒಪ್ಪಿಕೊಂಡಿದ್ದಕ್ಕೆ ತಾವೇ ಸಾಕ್ಷಿಯಾಗಿದ್ದಾಗಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಟ್ಟಾ ಸುಬ್ರಮಣ್ಯ ನಾಯ್ಡು, ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸುವುದರ ಬಗ್ಗೆ ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಸಮ್ಮುಖದಲ್ಲಿಯೇ ಮಾತುಕತೆ ನಡೆದಿತ್ತು. ಆಗ ಶರತ್ ಬಚ್ಚೇಗೌಡ ಅವರು ಯಡಿಯೂರಪ್ಪ ಅವರ ಮನವಿಯನ್ನು ಒಪ್ಪಿಕೊಂಡಿದ್ದರು. ಎಂಟಿಬಿ ನಾಗರಾಜ್ ಪರ ಪ್ರಚಾರ ಮಾಡುವುದಾಗಿ ಹೇಳಿದ್ದರು ಎಂದು ಹೇಳಿದರು.

ಬಂಡಾಯವೆದ್ದ ಶರತ್ ಬಚ್ಚೇಗೌಡ ಉಚ್ಚಾಟನೆಗೆ ಬಿಜೆಪಿ ಸಜ್ಜುಬಂಡಾಯವೆದ್ದ ಶರತ್ ಬಚ್ಚೇಗೌಡ ಉಚ್ಚಾಟನೆಗೆ ಬಿಜೆಪಿ ಸಜ್ಜು

ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಶರತ್ ಬಚ್ಚೇಗೌಡ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಒಪ್ಪಿಗೆ ಸೂಚಿಸಿದ್ದರು. ಅದಕ್ಕೆ ನಾನೇ ಸಾಕ್ಷಿ. ಆ ವೇಳೆ ನಾನು ಯಡಿಯೂರಪ್ಪ ಅವರ ಮನೆಯಲ್ಲಿದ್ದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸೋಮವಾರ ಹೇಳಿದರು.

ನನ್ನ ಮುಂದೆ ಹೇಳಲಿ

ನನ್ನ ಮುಂದೆ ಹೇಳಲಿ

ಎಂಟಿಬಿ ನಾಗರಾಜ್ ಅವರ ಸ್ಪರ್ಧೆಗೆ ಮುಖ್ಯಮಂತ್ರಿ ಎದುರು ತಾವು ಒಪ್ಪಿಗೆ ಸೂಚಿಸಿರಲಿಲ್ಲ ಎಂದು ನನ್ನ ಮುಂದೆ ಹೇಳಲಿ ನೋಡೋಣ. ನನ್ನ ಎದುರೇ ಈ ಚರ್ಚೆ ನಡೆದಿತ್ತು. ಶರತ್ ಬಚ್ಚೇಗೌಡ ಅವರಿಗೆ ಇನ್ನೂ ವಯಸ್ಸಿದೆ. ನಾಮಪತ್ರ ವಾಪಸ್ ಪಡೆದುಕೊಂಡು ಎಂಟಿಬಿ ಪರ ಪ್ರಚಾರ ಮಾಡಲಿ ಎಂದು ಕಟ್ಟಾ ಸುಬ್ರಮಣ್ಯ ನಾಯ್ಡು ಸಲಹೆ ನೀಡಿದರು.

ಎಂಟಿಯಂತಹ ಪ್ರಾಮಾಣಿಕ ಇಲ್ಲ

ಎಂಟಿಯಂತಹ ಪ್ರಾಮಾಣಿಕ ಇಲ್ಲ

'ಎಂಟಿಬಿ ನಾಗರಾಜ್ ವಿರುದ್ಧ ಕಾಂಗ್ರೆಸ್‌ನವರು ಏನೇನೋ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಎಂಟಿಬಿ ಹೊಸಕೋಟೆ ಉಪಚುನಾವಣೆಯಲ್ಲಿ ಗೆಲ್ಲುವುದು ಶೇ 100ರಷ್ಟು ನಿಶ್ಚಿತ. ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿದ 17 ಶಾಸಕರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರಂತಹ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರಿಲ್ಲ' ಎಂದು ಯಡಿಯೂರಪ್ಪ ಭಾನುವಾರ ಹೇಳಿದ್ದರು.

ಬಿಜೆಪಿ ವಿರುದ್ಧ ಸಿಡಿದೆದ್ದು ನಿಂತ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆಸ್ತಿ 138 ಕೋಟಿ ರೂ.ಬಿಜೆಪಿ ವಿರುದ್ಧ ಸಿಡಿದೆದ್ದು ನಿಂತ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆಸ್ತಿ 138 ಕೋಟಿ ರೂ.

ಸಿಎಂ ಆಗಿರಬೇಕೆಂದು ಜನರ ಅಪೇಕ್ಷೆ

ಸಿಎಂ ಆಗಿರಬೇಕೆಂದು ಜನರ ಅಪೇಕ್ಷೆ

'ಸೋಮವಾರ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಅದರಲ್ಲಿ ನಾನೂ ಭಾಗವಹಿಸುತ್ತಿದ್ದೇನೆ. ಎಲ್ಲ 15 ಕ್ಷೇತ್ರಗಳಲ್ಲಿಯೂ ನಾವೇ ಜಯಗಳಿಸುತ್ತೇವೆ. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎನ್ನುವುದು ರಾಜ್ಯದ ಜನರ ಅಪೇಕ್ಷೆ. ಹಾಗಾಗಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

ನೂರಕ್ಕೆ ನೂರರಷ್ಟು ಸಚಿವ ಸ್ಥಾನ

ನೂರಕ್ಕೆ ನೂರರಷ್ಟು ಸಚಿವ ಸ್ಥಾನ

ಉಪ ಚುನಾವಣೆಯಲ್ಲಿ ಗೆಲ್ಲುವ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂಬ ಮಾತನ್ನು ಯಡಿಯೂರಪ್ಪ ಪುನರುಚ್ಚರಿಸಿದರು. ಗೆದ್ದ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂಬ ಮಾತನ್ನು ಈಗಲೂ ಹೇಳುತ್ತೇನೆ. ಎಲ್ಲ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿಯೂ ಇದನ್ನು ಹೇಳುತ್ತೇನೆ. ನೂರಕ್ಕೆ ನೂರರಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ನೂರಕ್ಕೆ ನೂರರಷ್ಟು ಅವರನ್ನು ಸಚಿವರನ್ನಾಗಿ ಮಾಡುತ್ತೇನೆ. ಇದಕ್ಕೆ ಚುನಾವಣಾ ಆಯೋಗದಿಂದ ಅಡ್ಡಿಯಾಗುವುದಿಲ್ಲ ಎಂದರು.

ಉಪಚುನಾವಣೆಗೆ ಮುನ್ನ ಬಚ್ಚೇಗೌಡ್ರ ವಿರುದ್ದ ಎಂಟಿಬಿ ನಾಗರಾಜ್ ಸ್ಪೋಟಕ ಆರೋಪಉಪಚುನಾವಣೆಗೆ ಮುನ್ನ ಬಚ್ಚೇಗೌಡ್ರ ವಿರುದ್ದ ಎಂಟಿಬಿ ನಾಗರಾಜ್ ಸ್ಪೋಟಕ ಆರೋಪ

English summary
Former minister Katta Subramanya Naydu said that, he was the witness when Sharath Bachegowda agreed not to contest from Hoskote in CM Yediyurappa's house
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X