ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸಕೋಟೆಯಲ್ಲಿ ಶರತ್ ಮ್ಯಾಜಿಕ್; ಬಿಜೆಪಿಗೆ ಮುಖಭಂಗ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 19: ಹೊಸಕೋಟೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್‌ಗೆ ಹಿನ್ನಡೆಯಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಈ ಚುನಾವಣೆ ಸಹಕಾರಿಯಾಗಿದೆ.

ಶಾಸಕ ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆಗೆ ಕೊನೆಗೂ ಮುಹೂರ್ತ ಫಿಕ್ಸ್! ಶಾಸಕ ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆಗೆ ಕೊನೆಗೂ ಮುಹೂರ್ತ ಫಿಕ್ಸ್!

ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, "ಈ ಚುನಾವಣೆ ಫಲಿತಾಂಶ ತಾಲೂಕಿನ ಮುಂದಿನ ಚುನಾವಣೆ ದಿಕ್ಸೂಚಿಯಾಗಿದೆ" ಎಂದು ಹೇಳಿದ್ದಾರೆ.

ಶರತ್ ಬಚ್ಚೇಗೌಡರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ ಹಿರಿಯ ನಾಯಕ! ಶರತ್ ಬಚ್ಚೇಗೌಡರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ ಹಿರಿಯ ನಾಯಕ!

Hoskote TAPCMS Election Sharath Bachegowda Supporters Wins All Seat

ಭಾನುವಾರ ನಡೆದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಚುನಾವಣೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ. ಕೃಷ್ಣಮೂರ್ತಿ ಮತ್ತು ಭತ್ಯಪ್ಪ ಎಂ. ಅವಿರೋಧವಾಗಿ ಆಯ್ಕೆಯಾದರು.

ಹೊಸಕೋಟೆ; ಎಂಟಿಬಿ ಮ್ಯಾಜಿಕ್, ಶಾಸಕ ಶರತ್ ಕಂಗಾಲು! ಹೊಸಕೋಟೆ; ಎಂಟಿಬಿ ಮ್ಯಾಜಿಕ್, ಶಾಸಕ ಶರತ್ ಕಂಗಾಲು!

ಉಳಿದಂತೆ ಎಲ್ಲಾ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಗೆಲವು ಸಾಧಿಸಿದ್ದಾರೆ. ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಿಜೆಪಿ ಚುನಾವಣೆಯನ್ನು ಬಹಿಷ್ಕಾರ ಮಾಡಿತ್ತು. ಆದ್ದರಿಂದ, ಒಂದು ಸ್ಥಾನದಲ್ಲಿಯೂ ಗೆಲ್ಲಲು ಸಾಧ್ಯವಾಗಲಿಲ್ಲ.

ಶರತ್ ಬಚ್ಚೇಗೌಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಸಂಘದ ಚುನಾವಣೆ ಪಾರದರ್ಶಕವಾಗಿಯೇ ನಡೆದಿದೆ. ಚುನಾವಣೆ ಎದುರಿಸದೇ ಕೆಲವರು ಅಕ್ರಮ ಎಂದು ಬಹಿಷ್ಕಾರ ಮಾಡಿದ್ದಾರೆ" ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

"ವಿಜಯದಶಮಿ ಸಂದರ್ಭದಲ್ಲಿ ಬಂದಿರುವ ಈ ಗೆಲುವು ಸಂತಸ ತಂದಿದೆ. ನಮ್ಮ ಬೆಂಬಲಿಗರಿಗೂ ಮತ ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ" ಎಂದು ಶರತ್ ಬಚ್ಚೇಗೌಡ ಹೇಳಿದ್ದಾರೆ.

ಹೊಸಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆ ಗೆದ್ದಿದ್ದಾರೆ. ಹೊಸಕೋಟೆ ರಾಜಕಾರಣ ಶರತ್ ಮತ್ತು ಎಂಟಿಬಿ ನಾಗರಾಜ್ ನಡುವಿನ ಪ್ರತಿಷ್ಠೆಯಾಗಿದೆ.

Recommended Video

KL Rahul ಸತತ 3 ವರ್ಷಗಳಿಂದ 500 ರನ್ ಹೊಡೆಯುತ್ತಿದ್ದಾರೆ | Oneindia Kannada

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ವಿಜಯದಶಮಿ ಬಳಿಕ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

English summary
Hoskote independent MLA Sharath Bachegowda and Congress support candidates bagged all 11 seats in Hoskote TAPCMS election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X