• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ; ನಗರದ ಮುಂದಿದೆ ಎರಡು ಬಹುಮುಖ್ಯ ಸವಾಲು

|

ಬೆಂಗಳೂರು, ಏಪ್ರಿಲ್ 14: ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಸೋಂಕಿನ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ದಿನನಿತ್ಯದ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.

ಮಾರ್ಚ್‌ ತಿಂಗಳಿನಿಂದಲೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ ಮಟ್ಟವನ್ನು ಮೀರುತ್ತಿದೆ. ಹೀಗೆ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಆಸ್ಪತ್ರೆಗಳಲ್ಲಿನ ಹಾಸಿಗೆ ಕೊರತೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ನಗರವೊಂದರಿಂದಲೇ ಶೇ 70ರಷ್ಟು ಪ್ರಕರಣಗಳು ದಾಖಲಾಗುತ್ತಿದ್ದು, ಆಡಳಿತಕ್ಕೆ ಸವಾಲು ಒಡ್ಡಿದೆ. ಸದ್ಯಕ್ಕೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಹಾಗೂ ಹೆಚ್ಚುತ್ತಿರುವ ಮರಣ ಸಂಖ್ಯೆ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಮುಂದೆ ಓದಿ...

ಕರ್ನಾಟಕದಲ್ಲಿ ಹೊಸದಾಗಿ 8778 ಮಂದಿಗೆ ಕೊರೊನಾ ಸೋಂಕುಕರ್ನಾಟಕದಲ್ಲಿ ಹೊಸದಾಗಿ 8778 ಮಂದಿಗೆ ಕೊರೊನಾ ಸೋಂಕು

   ಬೆಂಗಳೂರಲ್ಲಿ 11 ದಿನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದವರಿಂದ 83.49 ಲಕ್ಷ ಫೈನ್ ಕಲೆಕ್ಟ್! | Oneindia Kannada
    ವೇಗಗತಿಯಲ್ಲಿ ಸಾಗುತ್ತಿರುವ ಸೋಂಕಿನ ಪ್ರಮಾಣ

   ವೇಗಗತಿಯಲ್ಲಿ ಸಾಗುತ್ತಿರುವ ಸೋಂಕಿನ ಪ್ರಮಾಣ

   ಬೆಂಗಳೂರಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ 6,813 ಇದ್ದ ಸೋಂಕಿನ ಪ್ರಮಾಣ ಮಾರ್ಚ್ ವೇಳೆಗೆ 31,886ರಷ್ಟು ಏರಿಕೆಯಾಗಿರುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. ಏಪ್ರಿಲ್‌ನ ಮೊದಲ 12 ದಿನಗಳಲ್ಲಿ ಬೆಂಗಳೂರಿನಲ್ಲಿ 50,636 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ದಿನನಿತ್ಯದ ಪ್ರಕರಣಗಳು ವೇಗಗತಿಯಲ್ಲಿ ಏರಿಕೆಯಾಗುತ್ತಿವೆ. ಆದರೆ ಈ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಕರ್ನಾಟಕ ಆರೋಗ್ಯ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಹೇಳಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಎದುರಾಗಲಿದೆ ಹಾಸಿಗೆ ಕೊರತೆ

   ಬೆಂಗಳೂರಿನಲ್ಲಿ ಎದುರಾಗಲಿದೆ ಹಾಸಿಗೆ ಕೊರತೆ

   ಮಂಗಳವಾರ ಬೆಂಗಳೂರಿನಲ್ಲಿ 5,500 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 55 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ನಗರದಲ್ಲಿ 3,750 ಹಾಸಿಗೆಗಳಿದ್ದು, ಅದರಲ್ಲಿ ಈಗಾಗಲೇ ಶೇ 70ರಷ್ಟು ಹಾಸಿಗೆಗಳು ಪೂರ್ಣಗೊಂಡಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಹೆಚ್ಚುವರಿ 600 ಹಾಸಿಗೆಗಳ ವ್ಯವಸ್ಥೆ ಮಾಡಿರುವುದಾಗಿ ಬಿಬಿಎಂಪಿ ತಿಳಿಸಿದೆ.

   ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ

    ಹೆಚ್ಚುತ್ತಿದೆ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆ

   ಹೆಚ್ಚುತ್ತಿದೆ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆ

   ಕಳೆದ ವರ್ಷ ಇಂಥದ್ದೇ ಪರಿಸ್ಥಿತಿ ಉಂಟಾಗಿದ್ದು, ಆಗ ಸುಮಾರು 11 ಸಾವಿರ ಹಾಸಿಗೆಗಳನ್ನು ಹೊಂದಿದ್ದೆವು. ಈ ಬಾರಿಯೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿನ ಪಾಸಿಟಿವಿಟಿ ದರ 7% ಇದ್ದು, ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆಯೂ ಏರುತ್ತಿರುವುದಾಗಿ ಬಿಬಿಎಂಪಿ ಮಾಹಿತಿ ಬಿಡುಗಡೆ ಮಾಡಿದೆ.

    ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆಗಳು ಭರ್ತಿ

   ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆಗಳು ಭರ್ತಿ

   ಸದ್ಯಕ್ಕೆ ಬೆಂಗಳೂರು ನಗರದಲ್ಲಿ 4000 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಮೀಸಲಿರಿಸಲು ತಿಳಿಸಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಬಹುಪಾಲು ಹಾಸಿಗೆಗಳು ಭರ್ತಿಯಾಗಿವೆ ಎಂದು ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂ ಅಸೋಸಿಯೇಷನ್ ಅಧಯಕ್ಷ ಡಾ. ಪ್ರಸನ್ನ ಅವರು ತಿಳಿಸಿದ್ದಾರೆ. ಸದ್ಯಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ 6ರಿಂದ 7 ಸಾವಿರ ಹಾಸಿಗೆಗಳಿದ್ದು, ಇದರಲ್ಲಿ ಅರ್ಧದಷ್ಟನ್ನು ಮೀಸಲಿರಿಸಬೇಕಿದೆ ಎಂದು ಹೇಳಿದ್ದಾರೆ.

   English summary
   Few hospital beds and increasing mortality rate in bengaluru became challenge for city,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X