ಚಿಕಿತ್ಸೆ ಸಿಗದೆ ಮಗು ನಾಲ್ಕು ಗಂಟೆ ಆಂಬ್ಯುಲೆನ್ಸ್‌ನಲ್ಲಿತ್ತು
ಬೆಂಗಳೂರು, ಡಿ. 10 : ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸೌಲಭ್ಯವಿಲ್ಲ ಎಂದು ತುರ್ತು ಚಿಕಿತ್ಸೆ ಅಗತ್ಯವಿದ್ದ ಮಗುವನ್ನು ಗಂಟೆಗಟ್ಟಲೇ ಆಂಬ್ಯುಲೆನ್ಸ್‌ನಲ್ಲಿ ಅಲೆದಾಡಿಸಿರುವ ವೈದ್ಯರು, ಮಾಧ್ಯಮಗಳ ಮಧ್ಯಪ್ರವೇಶದ ನಂತರ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ನಿಮ್ಹಾನ್ಸ್, ಇಂದಿರಾ ಗಾಂಧಿ, ವಾಣಿ ವಿಲಾಸ ಆಸ್ಪತ್ರೆಯ ವೈದ್ಯರು ಮಂಗಳವಾರ ರಾತ್ರಿ ಮಗುವನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಆಂಬ್ಯುಲೆನ್ಸ್‌ನಲ್ಲಿ ಅಲೆದಾಡಿಸಿದ್ದಾರೆ. ಮಾಧ್ಯಮಗಳು ಮಧ್ಯ ಪ್ರವೇಶಿಸಿದ ನಂತರ ವಾಣಿ ವಿಲಾಸ ಆಸ್ಪತ್ರೆಯವರು ಮಗುವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ.

ಘಟನೆ ವಿವರ : ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಆನಂದ್ (8) ಎಂಬ ಮಗು ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದಾಗ ಕೆಳಗೆ ಬಿದ್ದಿದ್ದಾನೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಆತನನ್ನು ಮೊದಲು ನಿಮ್ಹಾನ್ಸ್‌ಗೆ ಕರೆದುಕೊಂಡು ಹೋಗಲಾಗಿದೆ. ವೆಂಟಿಲೇಟರ್ ಇಲ್ಲ ಬೇರೆ ಆಸ್ಪತ್ರೆಗೆ ದಾಖಲಿಸಿ ಎಂದು ವೈದ್ಯರು ಹೇಳಿದ್ದಾರೆ.
ನಂತರ ಇಂದಿರಾ ಗಾಂಧಿ ಆಸ್ಪತ್ರೆಯ ವೈದ್ಯರು ತುರ್ತು ಚಿಕಿತ್ಸೆ ಅಗತ್ಯವಿದ್ದ ಮಗುವನ್ನು ದಾಖಲಿಸಿಕೊಳ್ಳದೆ, ಇಲ್ಲಿಯೂ ವೆಂಟಿಲೇಟರ್ ಸೌಲಭ್ಯವಿಲ್ಲ. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಎಂದು ಪೋಷಕರಿಗೆ ಸೂಚಿಸಿದ್ದಾರೆ.
ನಂತರ ವಾಣಿ ವಿಲಾಸ ಆಸ್ಪತ್ರೆಯಲ್ಲಿಯೂ ಪೋಷಕರಿಗೆ ಇದೇ ಉತ್ತರ ದೊರಕಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲು ಶಕ್ತಿ ಇಲ್ಲದ ಪೋಷಕರು ಸುಮಾರು ನಾಲ್ಕು ಗಂಟೆ ಮಗುವನ್ನು ಆಂಬ್ಯುಲೆನ್ಸ್‌ನಲ್ಲಿ ಇಟ್ಟುಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಆಲೆದಾಡಿದ್ದಾರೆ.
ಸಂಜೆ 7 ಗಂಟೆಗೆ ಘಟನೆ ನಡೆದರೂ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಲು ಸಾಧ್ಯವಾಗಲಿಲ್ಲ. ವಾಣಿ ವಿಲಾಸ ಆಸ್ಪತ್ರೆ ಬಳಿ ಮಾಧ್ಯಮಗಳು ಮಧ್ಯಪ್ರವೇಶಿಸಿದಾಗ ವೈದ್ಯರು ಮಗುವನ್ನು ರಾತ್ರಿ 11 ಗಂಟೆ ಸುಮಾರಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ.
ಖಾದರ್ ಪ್ರತಿಕ್ರಿಯೆ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ತಾಯಿ ಮಂಗನ ಮೌನ ರೋದನೆ: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕರುಣಾಜನಕ ದೃಶ್ಯ..Video Viral -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications