Bengaluru Property: ಹೊಸೂರು ಏರ್​ಪೋರ್ಟ್​: ಬೆಂಗಳೂರಿನ ಈ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ!

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ತಮಿಳುನಾಡು ಸರ್ಕಾರವು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿದೆ. ಈ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ.

ಆದರೆ, ಇದೇ ಸಂದರ್ಭದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಭಾಗದ ಬೆಂಗಳೂರು ದಕ್ಷಿಣ ಭಾಗ ಸೇರಿದಂತೆ ವಿವಿಧ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಶುರುವಾಗಿದೆ. ಈಗಾಗಲೇ ಬೆಂಗಳೂರಿನ ದಕ್ಷಿಣ ಭಾಗ ಸೇರಿದಂತೆ ವಿವಿಧ ಭಾಗದಲ್ಲಿ ಐಟಿ - ಬಿಟಿ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇವೆ. ಇದೀಗ ತಮಿಳುನಾಡಿನ ಗಡಿ ಭಾಗದಲ್ಲಿ ಇರುವ ಕರ್ನಾಟಕದ ಭೂಮಿಗೆ ಚಿನ್ನದ ಬೆಲೆ ಬಂದಿದೆ. ಎಲ್ಲೆಲ್ಲಿ ರಿಯಲ್‌ ಎಸ್ಟೇಟ್‌ ಬೂಸ್ಟ್‌ ಆಗುತ್ತಿದೆ ಎನ್ನುವ ವಿವರ ಇಲ್ಲಿದೆ.

Hosur International Airport Land Prices Have Increased in This Part of Bengaluru

ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಪ್ರಾರಂಭ ಮಾಡುವುದಕ್ಕಿಂತ ಮುಂಚಿತವಾಗಿಯೇ ತಮಿಳುನಾಡು ಸರ್ಕಾರವು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಹೊಸೂರು ವಿಮಾನ ನಿಲ್ದಾಣ ಪ್ರಸ್ತಾವನೆ ಬಂದ ಬೆನ್ನಲ್ಲೇ ಬೆಂಗಳೂರಿನ ವಿವಿಧ ಭಾಗದಲ್ಲಿ ರಿಯಲ್‌ ಎಸ್ಟೇಟ್‌ ಗರಿಗೆದರಿದೆ. ಹೊಸೂರಿನ ಹೊಸ ಗ್ರೀನ್‌ಫೀಲ್ಡ್‌ ಇಂಟರ್ ನ್ಯಾಷನಲ್‌ ಏರ್‌ಪೋರ್ಟ್‌ನಲ್ಲಿ ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಬಹುದಾದ ಸಾಮರ್ಥ್ಯ ಇರಲಿದೆ. ಈ ವಿಮಾನ ನಿಲ್ದಾಣದ ವ್ಯಾಪ್ತಿಯು 2,000 ಎಕರೆಗೂ ಹೆಚ್ಚು ಇರಲಿದೆ.

Hosur International Airport Land Prices Have Increased in This Part of Bengaluru

ಬೆಂಗಳೂರಿನ ರಿಯಲ್‌ ಎಸ್ಟೇಟ್‌ಗೆ ಧಮಾಕ: ಇನ್ನು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುತ್ತಿರುವುದು ಬೆಂಗಳೂರಿನ ಜನರಿಗೆ ಹಾಗೂ ರಿಯಲ್‌ ಎಸ್ಟೇಟ್‌ಗೂ ಧಮಾಕ ತರುತ್ತಿದೆ. ಹೌದು ಬೆಂಗಳೂರಿನಿಂದ ಹೊಸೂರು ಕೆಲವೇ ಕಿ. ಮೀ ದೂರದಲ್ಲಿ ಇದೆ. ಅಲ್ಲದೆ ಈಗಾಗಲೇ ಎಲೆಕ್ಟ್ರಾನಿಕ್ಸ್ ಸಿಟಿ ಸಾಕಷ್ಟು ಅಭಿವೃದ್ಧಿ ಸಹ ಆಗಿದೆ. ಅಲ್ಲದೆ ಈ ಭಾಗದಲ್ಲಿ ಈಗಾಗಲೇ ಇನ್ಫೋಸಿಸ್ ಹಾಗೂ ಬಯೋಕಾನ್‌ನಂತಹ ಪ್ರತಿಷ್ಠಿತ ಕಂಪನಿಗಳು ಸಹ ಇವೆ. ಇದರೊಂದಿಗೆ ಇಲ್ಲಿನ ಚಂದಾಪುರ ಹಾಗೂ ಅತ್ತಿಬೆಲೆ ಸೇರಿದಂತೆ ಸುತ್ತಮುತ್ತಲಿನ ಜನರಿಗೆ ಅದೃಷ್ಟ ಬಂದಿದೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಿಂತಲೂ ಬೆಂಗಳೂರಿನ ಆಗ್ನೇಯ ಭಾಗದ ಜನರಿಗೆ ಹೊಸೂರು ವಿಮಾನ ನಿಲ್ದಾಣವು ಸಮೀಪವಾಗಲಿದೆ. ಅಲ್ಲದೆ ಹೊಸೂರು ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಕಾರಣಗಳಿಗೆ ಬೆಂಗಳೂರಿನ ಜನರಿಗೆ ಈ ವಿಮಾನ ನಿಲ್ದಾಣವೂ ವರದಾನವೇ ಅಂತ ಹೇಳಲಾಗುತ್ತಿದೆ.

ಈ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ: ಹೊಸೂರು ವಿಮಾನ ನಿಲ್ದಾಣ ಪ್ರಸ್ತಾವನೆ ಬಂದ ಬೆನ್ನಲ್ಲೇ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ, ಅತ್ತಿಬೆಲೆ, ಚಂದಾಪುರ ಹಾಗೂ ಬೆಂಗಳೂರಿನ ಆಗ್ನೇಯ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ ಬರ್ತಿದೆ. ಅಲ್ಲದೆ ಮಾಲೂರು, ಹಾರೋಹಳ್ಳಿ ಹಾಗೂ ಆನೇಕಲ್ ಭಾಗದಲ್ಲೂ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ.

ಉಭಯ ರಾಜ್ಯಗಳ ಅಭಿವೃದ್ಧಿ: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳ ಅಭಿವೃದ್ಧಿ ಆಗಲಿದೆ ಎಂದು ಹೇಳಲಾಗುತ್ತಿದೆ. ಇತ್ತ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಹಾಗೂ ಅತ್ತಿಬೆಲೆ ಭಾಗದಲ್ಲಿ ಲಾಭವಾದರೆ. ತಮಿಳುನಾಡಿನ ನೆರೆಯ ಜಿಲ್ಲೆಗಳಾದ ಧರ್ಮಪುರಿ ಹಾಗೂ ಸೇಲಂಗೂ ಕನೆಕ್ಟಿವಿಟಿ ಸಿಗಲಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಗಮನಾರ್ಹ ಬದಲಾವಣೆ ಆಗಲಿದೆ ಎಂದು ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಹಾಗೂ ಹೊಸೂರು ಅವಳಿ ನಗರಗಳಾಗಿ ಇನ್ನಷ್ಟು ಬೆಳೆಯಲಿವೆ. ತಮಿಳುನಾಡು ಮತ್ತು ಕರ್ನಾಟಕ ಎರಡೂ ಕಡೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+