Bengaluru Second Airport: ಹೊಸೂರು ವೇಗ: ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಳಂಬ ಯಾಕೆ, ಇಲ್ಲಿದೆ ಟ್ವಿಸ್ಟ್!
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ವಿಳಂಬವಾಗುತ್ತಲ್ಲೇ ಇದೆ. ಆದರೆ, ಇದೇ ಸಂದರ್ಭದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರವೂ ಸಹ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ತಮಿಳುನಾಡಿಗೆ ಭರ್ಜರಿ ಸಹಕಾರವನ್ನು ಕೇಂದ್ರ ಸರ್ಕಾರವು ಕೊಡುತ್ತಿದೆ. ಆದರೆ, ಇದೇ ಸಂದರ್ಭದಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ. ಅದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ವಿಳಂಬವಾಗುತ್ತಲ್ಲೇ ಇದೆ. ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕ್ರಿಯೆಯು ಪ್ರಾಥಮಿಕ ಹಂತವನ್ನೂ ದಾಟಿಲ್ಲ. ಕರ್ನಾಟಕ ಸರ್ಕಾರವು ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ. ಈ ರೀತಿ ಶಾರ್ಟ್ ಲಿಸ್ಟ್ ಮಾಡಲಾಗಿರುವ ಪ್ರದೇಶಗಳಲ್ಲಿ ಭೂಮಿಯ ಬೆಲೆ ಸಹ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಆದರೆ ರಿಯಲ್ ಎಸ್ಟೇಟ್ ಅಭಿವೃದ್ಧಿಯಾದರೂ ಅದಕ್ಕೆ ಪೂರಕವಾಗಿ ಕೆಲಸಗಳು ನಡೆದಿಲ್ಲ. ಇನ್ನು ಬೆಂಗಳೂರು 2ನೇ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದಿಂದ ಸಾಕಷ್ಟು ವಿಳಂಬವಾಗುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡಿನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವರದಿ ನೀಡಲಾಗಿದೆ.

ತಮಿಳುನಾಡಿನ ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಆ ಎರಡೂ ಪ್ರದೇಶಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿದೆ ಎಂದು ಕೇಂದ್ರ ಸರ್ಕಾರದ ಅಧ್ಯಯನ ತಂಡ / ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ನೀಡಿದೆ. ಅದೇ ಪ್ರಾಧಿಕಾರ ಕರ್ನಾಟಕದಲ್ಲೂ ಎರಡು ತಿಂಗಳು ಮುಂಚೆಯೇ ಅಧ್ಯಯನ ಮಾಡಿದ್ದರೂ ಇಲ್ಲಿಯ ವರೆಗೆ ವರದಿ ನೀಡಿಲ್ಲ. ಇನ್ನು ತಮಿಳುನಾಡಿನಲ್ಲಿ ಮುಂದಿನ ವರ್ಷ ಅಂದರೆ 2026ರಲ್ಲಿ ವಿಧಾನಸಭೆ ಚುನಾವಣೆ ಇದೆ. ಈ ಕಾರಣಕ್ಕೆ ಅಲ್ಲಿಗೆ ಕೇಂದ್ರ ಸರ್ಕಾರ ಹೆಚ್ಚು ಮುತುವರ್ಜಿ ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಮೊದಲಿನಿಂದಲೂ ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ತಮಿಳುನಾಡಿಗೆ ಬೇಕಾಗುವ ಯೋಜನೆಗಳನ್ನು ಸರಾಗವಾಗಿ ಪಾಸ್ ಮಾಡಿಸಿಕೊಳ್ಳುತ್ತಾರೆ. ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಅದೇ ಆಗಿದೆ. ಹೊಸೂರು ವಿಮಾನ ನಿಲ್ದಾಣವು ಬೆಂಗಳೂರಿನಿಂದ ಅಂದಾಜು 40 ರಿಂದ 45 ಕಿ.ಮೀ ದೂರದಲ್ಲಿಯೇ ಇದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಬೆಂಗಳೂರಿಗೆ ಟಕ್ಕರ್ ಆಗಲಿದೆ. ಬೆಂಗಳೂರಿನ ಎರಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ಒಂದು ಈಗಾಗಲೇ ನಿರ್ಮಾಣವಾಗಿರುವುದು ಮತ್ತೊಂದು ಹೊಸದಾಗಿ ನಿರ್ಮಾಣವಾಗಲಿರುವುದು ಎಂದು ಹೇಳಲಾಗಿದೆ.
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕ್ರಿಯೆಯನ್ನು ವೇಗವಾಗಿ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದೆ. ಈ ನಿಟ್ಟಿನಲ್ಲಿ ಶೀಘ್ರ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲಿ ಚುನಾವಣೆ: ಇನ್ನು ತಮಿಳುನಾಡಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಪೂರಕವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಲಾಗಿದೆ. ತಮಿಳುನಾಡಿಗಿಂತಲೂ ಮುಂಚೆಯೇ ಕರ್ನಾಟಕ ಸರ್ಕಾರವು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎಂದು ಹೇಳಿತ್ತು. ಆದರೆ, ತಮಿಳುನಾಡು ಸರ್ಕಾರವು ಮೊದಲು ಪ್ರಸ್ತಾವನೆ ಸಲ್ಲಿಸಿತ್ತು.












Click it and Unblock the Notifications