ಗೃಹ ನಿರ್ಮಾಣ ಸಂಘದಲ್ಲಿ ಅಕ್ರಮ: ಅಧ್ಯಕ್ಷ ಸೇರಿ ಏಳು ಮಂದಿಗೆ ಜೈಲು
ಬೆಂಗಳೂರು, ಮೇ 25; ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿ ಸದಸ್ಯರಲ್ಲದ ವ್ಯಕ್ತಿಗಳಿಗೂ ಸೈಟು ಹಂಚಿಕೆ ಮಾಡಿದ್ದ ಆರೋಪ ಸಂಬಂಧ ನಗರದ ಏರ್‌ಕ್ರಾಫ್ಟ್ ಎಂಪ್ಲಾಯೀಸ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಆರು ಮಂದಿ ನಿರ್ದೇಶಕರಿಗೆ ತಲಾ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಇದು ಇತರೆ ಗೃಹ ನಿರ್ಮಾಣ ಸಹಕಾರ ಸಂಘಗಳಿಗೆ ಎಚ್ಚರಿಕೆ ಗಂಟೆಯಾಗಿದೆ.
ಸೊಸೈಟಿಯ ಅಧ್ಯಕ್ಷ ಕೆ. ಭೂಪಾಲ, ನಿರ್ದೇಶಕರಾದ ಎಸ್. ಎನ್. ಶಿವಮೂರ್ತಿ, ಸೋಮಣ್ಣ, ಎಸ್. ಸದಾಶಿವಪ್ಪ, ಕೆ. ಸಿ. ಸರಳ, ಡಿ. ಶ್ರೀನಿವಾಸ್ ಹಾಗೂ ಸಿ. ಎಚ್. ಶಂಕರ್ ಶಿಕ್ಷೆಗೆ ಗುರಿಯಾಗಿರುವವರು. ಸೊಸೈಟಿಯ ಸದಸ್ಯರಾದ ಎಂ. ಶಶಿಧರನ್ ಹಾಗೂ ವಿ. ಮುನಿಯಪ್ಪ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಹಾಗೂ ಎಂ. ಜಿ. ಉಮಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ನ್ಯಾಯಾಲಯ ಏನು ಹೇಳಿದೆ?; ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ ಬಳಿಕ ಈ ಏಳು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಿ ಎಲ್ಲರಿಗೂ ಮೂರು ತಿಂಗಳು ಸಾಧಾರಣ ಜೈಲು ಶಿಕ್ಷೆ ಹಾಗೂ ತಲಾ ಎರಡು ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 15 ದಿನಗಳ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠವು 2017ರಲ್ಲಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿಯೇ ಉಲ್ಲಂಘಿಸಿ, ಎರಡು ನಿವೇಶನಗಳನ್ನು ಸೊಸೈಟಿಯ ಸದಸ್ಯರಲ್ಲದ ಮೂರನೇ ವ್ಯಕ್ತಿಗಳಿಗೆ ಪರಭಾರೆ ಮಾಡಲಾಗಿದೆ. ಪ್ರಕರಣದ ಏಳೂ ಆರೋಪಿಗಳ ವಿರುದ್ಧದ ಆರೋಪಗಳು ಸಂಶಯಾತೀತವಾಗಿ ಸಾಬೀತಾಗಿದೆ. ಹಾಗಾಗಿ ಅವರಿಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಕರಣವೇನು?; ಸೊಸೈಟಿಯ ಸದಸ್ಯರು ಮನೆ ನಿರ್ಮಿಸಲು ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ ಜಮೀನು ವಶಪಡಿಸಿಕೊಂಡು ಅಲ್ಲಿ ಬಡಾವಣೆ ನಿರ್ಮಿಸಲಾಗಿದೆ. ಆದರೆ, ಸೊಸೈಟಿ ಮತ್ತು ಸದಸ್ಯರ ನಡುವೆ ಕೆಲವೊಂದು ವಿವಾದ ಉಂಟಾಗಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಏಕ ಸದಸ್ಯಪೀಠವು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸಹಕಾರ ಇಲಾಖೆ ಜಂಟಿ ನಿರ್ದೇಶಕರಿಗೆ ನಿರ್ದೇಶಿಸಿತ್ತು. ಅದರಂತೆ ತನಿಖೆ ನಡೆಸಿದ್ದ ಜಂಟಿ ನಿರ್ದೇಶಕರು, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ 11 ಆರೋಪ ಹೊರಿಸಿ 2012ರಲ್ಲಿ ವರದಿ ಸಲ್ಲಿಸಿದ್ದರು.

ನಂತರ ಹಿರಿಯ ಸದಸ್ಯರ ಪಟ್ಟಿ (ಜೇಷ್ಠತಾ) ಸಿದ್ಧಪಡಿಸಬೇಕು. ಆ ಪಟ್ಟಿಯು ಸರ್ಕಾರದಿಂದ ಅನುಮೋದನೆ ಪಡೆಯುವವರೆಗೂ ನಿವೇಶನ ಹಂಚಿಕೆಗಾಗಿ ಸದಸ್ಯರು ಸಲ್ಲಿಸಿದ ಯಾವುದೇ ಮನವಿ ಪರಿಗಣಿಸಬಾರದು ಎಂದು ಸೊಸೈಟಿಯ ಕಾರ್ಯಕಾರಿ ಸಮಿತಿಗೆ ಜಂಟಿ ನಿರ್ದೇಶಕರು 2013ರ ಏಪ್ರಿಲ್‌ನಲ್ಲಿ ನಿರ್ದೇಶಿಸಿದ್ದರು. ಜಂಟಿ ನಿರ್ದೇಶಕರ ನಿರ್ದೇಶನಗಳನ್ನು ಸೊಸೈಟಿ ಜಾರಿಗೊಳಿಸಿಲ್ಲ ಎಂದು ಆರೋಪಿಸಿ ಸೊಸೈಟಿಯ ಸದಸ್ಯರು ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸಹಕಾರ ಸಂಘಗಳ ರಿಜಿಸ್ಟ್ರಾರ್ ಅನುಮೋದಿಸಿದ ಸದ್ಯಸರ ಜೇಷ್ಠತಾ ಪಟ್ಟಿ ಅನುಸರಿಸದೆಯೇ ಯಾವುದೇ ನಿವೇಶನ ಹಂಚಿಕೆ ಮಾಡಬಾರದು ಮತ್ತು ಮಾರಾಟ ಕ್ರಯ ಮಾಡಿಕೊಡಬಾರದು ಎಂದು 2017ರ ಆ.7ರಂದು ಮಧ್ಯಂತರ ಆದೇಶ ಮಾಡಿತ್ತು.
ಈ ಮಧ್ಯೆ 2020ರಲ್ಲಿ ಸೊಸೈಟಿಯ ಸದಸ್ಯರಾದ ಎಂ. ಶಶಿಧರನ್ ಮತ್ತು ವಿ. ಮುನಿಯಪ್ಪ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ, ಸಹಕಾರ ಸಂಘಗಳ ರಿಜಿಸ್ಟ್ರಾರ್ ಅವರಿಂದ ಸದಸ್ಯರ ಜೇಷ್ಠತಾ ಪಟ್ಟಿಗೆ ಅನುಮೋದನೆ ಪಡೆಯದೆ ಸೊಸೈಟಿಯು ಸದಸ್ಯರಲ್ಲದ ಮೂರನೇ ವ್ಯಕ್ತಿಗಳಿಗೆ 2020ರ ಮಾ.3ರಂದು ಎರಡು ನಿವೇಶನ ಮಾರಾಟ ಮಾಡಿ ಕ್ರಯ ಮಾಡಿಕೊಟ್ಟಿದ್ದೆ. ತನ್ಮೂಲಕ ಉದ್ದೇಶಪೂರ್ವಕವಾಗಿ ಏಕ ಸದಸ್ಯ ಪೀಠದ ಆದೇಶ ಉಲ್ಲಂಘಿಸಿದ್ದು, ಸಂಬಂಧಪಟ್ಟ ಅರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು












Click it and Unblock the Notifications