ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಮಂದಿ 3ನೇ ಡೋಸ್ ಲಸಿಕೆ ಪಡೆದುಕೊಳ್ಳಲು ಏನು ಮಾಡಬೇಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಓಮಿಕ್ರಾನ್ ರೂಪಾಂತರದ ಎಕ್ಸ್ಇ ತಳಿಯು ಸೋಂಕು ಹರಡುವಿಕೆ ಭೀತಿ ಹೆಚ್ಚಿಸಿದೆ. ಇದರ ಮಧ್ಯೆ ಕೋವಿಡ್-19 ಲಸಿಕೆಯ ಮೂರನೇ ಡೋಸ್ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಅನುಮೋದನೆ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಮೂರನೇ ಡೋಸ್ ಪಡೆದುಕೊಳ್ಳುವುದಕ್ಕೆ ಸಾಂಕ್ರಾಮಿಕ ರೋಗಶಾಸ್ತ್ರರು ಸಲಹೆ ನೀಡುತ್ತಿದ್ದಾರೆ. ಈ ಮೂರನೇ ಡೋಸ್ ಅನ್ನು ಬೂಸ್ಟರ್ ಡೋಸ್ ಅಥವಾ ಮುನ್ನೆಚ್ಚರಿಕೆ ಡೋಸ್ ಎಂದು ಕರೆಯಲಾಗುತ್ತದೆ. ಎರಡು ಡೋಸ್ ಲಸಿಕೆಯ ಪ್ರಭಾವ ತಗ್ಗಿದವರು ಈ ಮೂರನೇ ಡೋಸ್ ಅನ್ನು ಪಡೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಲಾಗುತ್ತಿದೆ.

ಕೊರೊನಾವೈರಸ್ ಸೋಂಕಿನಿಂದ ಪಾರಾಗಲು ಮೂರನೇ ಡೋಸ್ ಬೇಕಾ!?ಕೊರೊನಾವೈರಸ್ ಸೋಂಕಿನಿಂದ ಪಾರಾಗಲು ಮೂರನೇ ಡೋಸ್ ಬೇಕಾ!?

ದೇಶದ ಸರ್ಕಾರಿ ಕೋವಿಡ್-19 ಲಸಿಕೆ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿ, ಮೊದಲ ಶ್ರೇಣಿ ಕಾರ್ಮಿಕರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಆದರೆ 18 ವರ್ಷ ಮೇಲ್ಪಟ್ಟವರು ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಮೂರನೇ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ. ಹೀಗೆ ಪಡೆಯುವ ಮುನ್ನೆಚ್ಚರಿಕೆ ಲಸಿಕೆಗೆ ಹಣವನ್ನು ಪಾವತಿ ಮಾಡಬೇಕಾಗಿದೆ. ಹಾಗಿದ್ದರೆ ಬೆಂಗಳೂರಿನಲ್ಲಿ ಕೋವಿಡ್-19 ಮೂರನೇ ಡೋಸ್ ಲಸಿಕೆಯನ್ನು ಪಡೆದುಕೊಳ್ಳುವ ವಿಧಾನ ಹೇಗಿರುತ್ತದೆ?, ಸಿಲಿಕಾನ್ ಸಿಟಿ ಜನರು ಮುನ್ನೆಚ್ಚರಿಕೆ ಡೋಸ್ ಪಡೆಯಲು ಏನು ಮಾಡಬೇಕು ಎನ್ನುವುದನ್ನು ತಿಳಿಯಲು ಈ ವರದಿಯನ್ನು ಓದಿ.

ಏನಿದು ಕೋವಿಡ್-19 ಬೂಸ್ಟರ್ ಡೋಸ್?

ಏನಿದು ಕೋವಿಡ್-19 ಬೂಸ್ಟರ್ ಡೋಸ್?

ಬೂಸ್ಟರ್ ಡೋಸ್ ಎನ್ನುವುದು ಕೋವಿಡ್-19 ಲಸಿಕೆಯ ಮೂರನೇ ಡೋಸ್ ಆಗಿದೆ. ಕೊರೊನಾವೈರಸ್ ಸೋಂಕಿನ ವಿರುದ್ಧ ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಡೋಸ್ ಕೆಲಸ ಮಾಡುತ್ತದೆ. ಕರ್ನಾಟಕದಲ್ಲಿ 18 ವರ್ಷ ಮೇಲ್ಪಟ್ಟವರು ಏಪ್ರಿಲ್ 10ರಿಂದ ಖಾಸಗಿ ಲಸಿಕೆ ವಿತರಣೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವೆ ಡಾ ಕೆ ಸುಧಾಕರ್ ಘೋಷಿಸಿದರು. ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಬೂಸ್ಟರ್ ಡೋಸ್ ಮತ್ತೊಂದು ಹೆಜ್ಜೆ ಮುಂದೆ ಕರೆದುಕೊಂಡು ಹೋಗುತ್ತದೆ ಎಂದು ಅವರು ಹೇಳಿದ್ದರು.

ಯಾರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು?

ಯಾರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು?

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಲಸಿಕೆಯ ಎರಡನೇ ಡೋಸ್ ಅನ್ನು ಪಡೆದು 9 ತಿಂಗಳು ಅಥವಾ 39 ವಾರಗಳು ಆಗಿರಬೇಕು. ಅಂಥವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತಾರೆ. ಕರ್ನಾಟಕದಲ್ಲಿ ಪ್ರಸ್ತುತ ಅಂಕಿ-ಅಂಶಗಳ ಪ್ರಕಾರ, 1.42 ಕೋಟಿ ಜನರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯುವುದು ಎಲ್ಲಿ?

ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯುವುದು ಎಲ್ಲಿ?

ಬೆಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ವಿತರಿಸುವುದಕ್ಕೆ ಪ್ರಾರಂಭಿಸಿವೆ. ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ನೀವು ತೆರಿಗೆಯೂ ಸೇರಿದಂತೆ 386 ರೂಪಾಯಿ ಪಾವತಿ ಮಾಡಬೇಕಾಗುತ್ತದೆ. ಭಾನುವಾರ ಬೂಸ್ಟರ್ ಡೋಸ್ ಲಸಿಕೆ ವಿತರಣೆಯನ್ನು ಅಧಿಕೃತವಾಗಿ ಆರಂಭಿಸಲಾಗಿದ್ದು, ಈವರೆಗೂ 18 ರಿಂದ 59 ವಯೋಮಾನದ 2218 ಮಂದಿ ಮುನ್ನೆಚ್ಚರಿಕೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಮುಂಬೈನಲ್ಲಿ ಕೊರೊನಾವೈರಸ್ ರೂಪಾಂತರಿ ಎಕ್ಸ್ಇ ತಳಿಯು ಪತ್ತೆಯಾಗಿರುವ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ನಾಲ್ಕನೇ ಅಲೆಯನ್ನು ತಡೆಯುವುದಕ್ಕೆ ಹಾಗೂ ನಿಯಂತ್ರಿಸುವುದಕ್ಕೆ ಲಸಿಕೆಯೊಂದೇ ಉತ್ತಮ ಮಾರ್ಗವಾಗಿದೆ. ಜೂನ್-ಜುಲೈ ವೇಳೆಗೆ ನಾಲ್ಕನೇ ಅಲೆಯು ಆರಂಭವಾಗಲಿದ್ದು, ರಾಜ್ಯವು ಅದನ್ನು ಎದುರಿಸಲು ಸಿದ್ಧವಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಮುನ್ನೆಚ್ಚರಿಕೆ ಡೋಸ್ ಪಡೆಯಲು ನೋಂದಣಿ ಹೇಗೆ?

ಮುನ್ನೆಚ್ಚರಿಕೆ ಡೋಸ್ ಪಡೆಯಲು ನೋಂದಣಿ ಹೇಗೆ?

ಕೋವಿಡ್-19 ಲಸಿಕೆಯ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಅನ್ನು ಪಡೆದುಕೊಳ್ಳುವುದಕ್ಕಾಗಿ ಕೋವಿನ್ ಅಪ್ಲಿಕೇಶನ್ ಮೂಲಕ ಮತ್ತೊಮ್ಮೆ ಹೆಸರು ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಖಾಸಗಿ ಕೊರೊನಾವೈರಸ್ ಲಸಿಕೆ ಕೇಂದ್ರಗಳಲ್ಲಿ ಗರಿಷ್ಠ 150 ರೂಪಾಯಿ ಸೇವಾ ತೆರಿಗೆಯನ್ನು ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

English summary
How Can You Get Covid-19 Booster Dose in Bengaluru?: All you need to know.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X