• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆತ್ಮಹತ್ಯೆಗೆ ಯತ್ನಿಸಿದ್ದ ದಂಪತಿ ಸಾವಿನಿಂದ ಪಾರಾಗಿದ್ದು ಹೇಗೆ?

|

ಬೆಂಗಳೂರು, ಡಿಸೆಂಬರ್ 4: ಆತ್ಮಹತ್ಯೆಗೆ ಯತ್ನಿಸಿದ್ದ ದಂಪತಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ದಂಪತಿ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗಿರಿನಗರದಲ್ಲಿ ಮಂಗಳವಾರ ಸಂಜೆ ನಡೆದಿತ್ತು. ಆದರೆ ಅದೃಷ್ಟ ವಶಾತ್ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಅಲ್ಲಿಗೆ ಬಂದ ಗಿರಿನಗರ ಸಬ್‌ಇನ್ಸ್‌ಪೆಕ್ಟರ್ ವಿನಯ್ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕೊಂಡೊಯ್ದಿದ್ದರು.

ತಂದೆಗೆ ಆಡಳಿತ ಮಂಡಳಿ ಅವಮಾನ, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ತಂದೆಗೆ ಆಡಳಿತ ಮಂಡಳಿ ಅವಮಾನ, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಾಜಿ ಮತ್ತು ಸೌಮ್ಯಾ ಸಾವಿನಿಂದ ಮಾರಾದ ದಂಪತಿ, ಗಿರಿನಗರದ ತಮ್ಮ ಮನೆಯಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಇಬ್ಬರೂ ಚಾಕುವಿನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಬಾಲಾಜಿ, ಸೌಮ್ಯಾ ಕೌಟುಂಬಿಕ ಕಲಹ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಇಬ್ಬರಿಗೂ ಶಸ್ತ್ರ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A couple who attempted suicide have escaped the jaws of death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X