Darshan: ರೇಣುಕಾಸ್ವಾಮಿಯನ್ನು ನಟ ದರ್ಶನ ಕರೆಸಿಕೊಂಡಿದ್ದು ಹೇಗೆ?

ಕನ್ನಡ ಚಿತ್ರ ರಂಗದ ಚ್ಯಾಲೆಂಜಿಂಗ್ ಸ್ಟಾರ್‌ ದರ್ಶನ ಅವರನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಸದ್ಯ ಬೆಂಗಳೂರಿನ ಅನ್ನಪೂರ್ಣೆಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ ವಿಚಾರಣೆ ನಡೆಯುತ್ತಿದೆ.

ನಟ ದರ್ಶನ, ಪ್ರೇಯಸಿ ಪವಿತ್ರಾಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೆಟ್ಟದಾಗಿ ಸಾಮಾಜಿಕ ತಾಣದಲ್ಲಿ ಕಮೆಂಟ್ ಮಾಡಿದ್ದರು ಎನ್ನಲಾಗುತ್ತಿದೆ. ಇದೇ ವಿಚಾರಕ್ಕೆ ರೇಣಕುಸ್ವಾಮಿ ಹತ್ಯೆ ನಡೆದಿದೆ ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ಬಹಿರಂಗವಾಗಿದೆ.

How did actor Darshan call Renuka Swami to Bengaluru from Chitradurga

ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿಯನ್ನು ದರ್ಶನ ತನ್ನ ಅಭಿಮಾನಿಗಳ ಮೂಲಕ ಬೆಂಗಳೂರಿಗೆ ಕರೆಸಿಕೊಂಡಿದ್ದರು ಎಂದು ಸ್ಥಳೀಯರು ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ರೇಣುಕಾಸ್ವಾಮಿ ವರ್ತನೆಯಿಂದ ಕಂಗೆಟ್ಟ ನಟ ದರ್ಶನ ತಮ್ಮ ಅಭಿಮಾನಿಗಳ ಮೂಲಕ ರಾಜ್ಯಧಾನಿಗೆ ಕರೆಸಿಕೊಂಡಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ಯ ಪಡಿಸಿದ್ದಾರೆ.

ಮನೆಯವರಿಗೆ ರೇಣುಕಾಸ್ವಾಮಿ ಕೊಲೆ ಆದ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರಿಂದ ಮಾಹಿತಿ ಲಭಿಸಿದೆ. ಕೊಲೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ರೇಣುಕಾಸ್ವಾಮಿ ಕುಟುಂಬ ಬೆಂಗಳೂರಿನತ್ತ ಧಾವಿಸಿದೆ. ಈ ಪ್ರಕರಣ ಭಾನುವಾರ(ಜೂನ್‌ 9) ಬೆಳಕಿಗೆ ಬಂದಿದೆ.

ಸ್ವಾಮಿಯ ಶವ ಪತ್ತೆಯಾದ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಶವಪರೀಕ್ಷೆ ನಡೆಸಲಾಗಿದ್ದು, ವಿಧಿವಿಜ್ಞಾನ ವರದಿಯು ಸಾವನ್ನು ಕೊಲೆ ಎಂದು ದೃಢಪಡಿಸಿದೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 47 ವರ್ಷದ ನಟ ದರ್ಶನರನ್ನು ಮೈಸೂರಿನ ಹೋಟೆಲ್‌ನಲ್ಲಿ ಬಂಧಿಸಲಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ, ಪವಿತ್ರಾ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ ಮಗನನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+