ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಷ್ಟಕ್ಕೂ ಜಯಲಲಿತಾ ಅವರಿಗೆ ಶಿಕ್ಷೆ ಆಗಿದ್ದೇಕೆ?

By ತುರುವೇಕೆರೆ ಪ್ರಸಾದ್
|
Google Oneindia Kannada News

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 18 ವರ್ಷಗಳ ನಂತರ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು ಇದೀಗ ಶಿಕ್ಷೆಯಾಗಿದೆ. ಅಧಿಕಾರ ಹಾಗೂ ಕೀರ್ತಿಯ ಉತ್ತುಂಗದಲ್ಲಿದ್ದಾಗಲೇ ಅವರು ಜೈಲು ಸೇರುವಂತಾಗಿದೆ. ಹಾಲಿ ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರ ಹಾಗೂ ಅಕ್ರಮ ಸಂಪತ್ತು ಗಳಿಕೆ ಆರೋಪದ ಮೇಲೆ ಜೈಲು ಸೇರುತ್ತಿರುವುದೂ ಇದೇ ಮೊದಲ ಬಾರಿಯಾದ್ದರಿಂದ ಈ ಪ್ರಕರಣ ಭಾರೀ ಮಹತ್ವ ಹಾಗೂ ಪ್ರಚಾರ ಪಡೆದಿದೆ.

ಎಲ್ಲಾ ತತ್ವ, ಸಿದ್ಧಾಂತ,ಕಾನೂನಿನ ನಿಯಂತ್ರಣ ಮೀರಿ ಅಪರಾಧೀಕರಣಗೊಳ್ಳುತ್ತಿರುವ ರಾಜಕೀಯ ಕ್ಷೇತ್ರಕ್ಕೆ ನ್ಯಾಯಾಲಯದ ತೀರ್ಪು ಒಂದು ಎಚ್ಚರಿಕೆಯ ಗಂಟೆ ಎಂದರೆ ತಪ್ಪಾಗಲಾರದು. ಇದು ಜಯಲಲಿತಾ ವಿರೋಧಿಗಳಿಗೆ ಸಿಕ್ಕ ಜಯವೂ ಹೌದು, ಹಾಗೆಯೇ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸತ್ಯ, ನ್ಯಾಯಕ್ಕೆ ಸಿಕ್ಕ ಜಯವೂ ಹೌದು.[ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]

ಆದರೆ ಈ ಪ್ರಕರಣದ ಹಿನ್ನಲೆಯಲ್ಲಿ ಕೆಲವೊಂದು ಅಂಶಗಳನ್ನು ಯೋಚಿಸಬೇಕಿದೆ. ಜಯಲಲಿತಾ ಅವರಿಗೆ ಅಕ್ರಮ ಸಂಪತ್ತು ಗಳಿಕೆ ಆರೋಪದ ಹಿನ್ನಲೆಯಲ್ಲಿ ಶಿಕ್ಷೆಯಾಗಿರುವುದರಿಂದ ಇನ್ನು ಮುಂದಾದರೂ ನಮ್ಮ ರಾಜಕೀಯ ಕ್ಷೇತ್ರ ಶುದ್ಧೀಕರಣಗೊಳ್ಳುತ್ತದೆ ಎಂದು ನಂಬುವ ಹಾಗಿಲ್ಲ.

ಯಾಕೆಂದರೆ ಜಯಲಲಿತಾ ಅವರ ಅಕ್ರಮ ಅಸ್ತಿ ಪ್ರಮಾಣ ಕೇವಲ 66 ಕೋಟಿ. ಆದರೆ ಸಾವಿರಾರು ಕೋಟಿ ಅಕ್ರಮ ಆಸ್ತಿ ಮಾಡಿ, ಸ್ವಿಸ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಇಟ್ಟಿರುವ ನೂರಾರು ರಾಜಕಾರಣಿಗಳು, ಉದ್ಯಮಿಗಳು ಹಾಗೂ ಅಧಿಕಾರಿಗಳು ಇದ್ದಾರೆ. ಅವರೆಲ್ಲರ ವಿರುದ್ಧ ನಮ್ಮ ಕಾನೂನು ಏನೂ ಮಾಡಲಾಗಿಲ್ಲ. [ಸುಪ್ರೀಂಗೆ ಮೊರೆ, ಸೋಲೊಪ್ಪಿಕೊಂಡ ರಾಮ್?]

ಸ್ವಾತಂತ್ಯ್ರ ಬಂದ ನಂತರ ದೇಶದಲ್ಲಿ ನಡೆದಿರುವ ಒಟ್ಟಾರೆ ಹಗರಣಗಳಲ್ಲಿ ರೂ.91063323430000 ರಷ್ಟು ದೊಡ್ಡ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ಈ ಅಕ್ರಮ ಹಣದ ಫಲಾನುಭವಿಗಳಲ್ಲಿ ಎಷ್ಟು ಮಂದಿಗೆ ಶಿಕ್ಷೆ ಆಗಿದೆ? ಯಾಕೆ ಆಗಿಲ್ಲ? ಎಂದು ಯೋಚಿಸಬೇಕಿದೆ.

ಹಾಗಾದರೆ ಜಯಲಲಿತಾ ಅವರಿಗೆ ಶಿಕ್ಷೆ ಆಗಿದ್ದೇಕೆ?: ಜಯಲಲಿತಾ ಅನುಭವದ ಕೊರತೆ ಹಾಗೂ ಮಿತಿ ಮೀರಿದ ಉದ್ಧಟತನದಿಂದ ಎಲ್ಲಾ ತೊಂದರೆಗಳನ್ನು ತಾವೇ ಆಹ್ವಾನಿಸಿಕೊಂಡರು. 1991-96 ರ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ತಪ್ಪು ನಿರ್ಧಾರಗಳಿಗೆ ಅವರು ಈಗ ಭಾರೀ ಬೆಲೆ ತೆರುವಂತಾಗಿದೆ. ಆ ಅವಧಿಯಲ್ಲಿ ಅವರಿಗೆ ರಾಜಕೀಯ ಪ್ರಬುದ್ಧತೆ ಇರಲಿಲ್ಲ, ರಾಜಕೀಯಕ್ಕೆ ಬೇಕಾದ ಸೂಕ್ಷ್ಮತೆ, ದೂರಾಲೋಚನೆ , ಅನುಭವ ಯಾವುದೂ ಅವರಿಗಿರಲಿಲ್ಲ. ಹೋಗಲೆಂದರೆ ಅವರಿಗೆ ಆ ಸಮಯದಲ್ಲಿ ಸೂಕ್ತ ಮಾರ್ಗದರ್ಶನವೂ ಸಿಗಲಿಲ್ಲ.

ಅವರ ಬಂಧುಗಳು ಅಧಿಕಾರದಲ್ಲಿ ಭಾರೀ ಹಸ್ತಕ್ಷೇಪ ನಡೆಸಿದರು.ನೂರಾರು ಕೋಟಿ ರೂಗಳ ಅಕ್ರಮ ನಡೆಯಿತು. ಜೊತೆಗೆ ಜಯಲಲಿತಾ ತಮ್ಮ ರಾಜಕೀಯ ಜೀವನದುದ್ದಕ್ಕೂ ವಿರೋಧಿಗಳನ್ನೇ ಸೃಷ್ಟಿಸಿಕೊಳ್ಳುತ್ತಾ ಹೋದರು. [ಕಾವೇರಿ ನೀವೇ ಇಟ್ಕೊಳ್ಳಿ, ಜಯಾ ನಮಗೆ ಕೊಡಿ]

ಸುಬ್ರಹ್ಮಣ್ಯಸ್ವಾಮಿ, ಟಿ.ಎನ್.ಶೇಷನ್, ಚಿದಂಬರಂ ಎಲ್ಲರನ್ನೂ ಎದುರು ಹಾಕಿಕೊಂಡರು. ಪ್ರಜಾಪ್ರಭುತ್ವದಿಂದ ಬಂದ ಅಧಿಕಾರವನ್ನು ಸರ್ವಾಧಿಕಾರಿಯ ಧೋರಣೆಯಿಂದ ನಡೆಸಿದರು.ಅವರಲ್ಲಿ ಅಹಂ ತುಂಬಿ ತುಳುಕುತ್ತಿತ್ತು. ವಿರೋಧಿಗಳೊಂದಿಗೆ ರಾಜಕೀಯ ದ್ವೇಷಕ್ಕೆ ಮೀರಿದ ವೈಯಕ್ತಿಕ ಸೇಡಿನ ಮನೋಭಾವ ಬೆಳೆಸಿಕೊಂಡರು. ಯಾರನ್ನೂ ಬೇಕಾದರೂ ದುಡ್ಡು ಚೆಲ್ಲಿ ಕೊಂಡುಕೊಳ್ಳಬಲ್ಲೆ ಎಂಬ ದರ್ಪ ಮೆರೆದರು.

Jayalithaa Fans

ಇಷ್ಟೇ ಆಗಿದ್ದರೆ ಪರವಾಗಿರಲಿಲ್ಲ, ಆದರೆ ಜಯಲಲಿತಾ ವೈಯಕ್ತಿಕವಾಗಿಯೂ ಆಡಂಬರದ ‘ಶೋ ಆಫ್' ಬದುಕನ್ನು ತೆರೆದಿಟ್ಟರು. ಬಾಯಲ್ಲಿ ತಿಂಗಳಿಗೆ ಕೇವಲ ಒಂದು ರೂ ಸಂಬಳ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ ಜಯಲಲಿತಾ ಅತ್ಯಂತ ವೈಭವಯುತ ಜೀವನಕ್ಕೆ ಸಾಕ್ಷಿಯಾದರು.[ಎಐಎಡಿಎಂಕೆಯಿಂದ ಜಯಲಲಿತಾಗೆ ಕೊಕ್ ಏಕೆ?]

ಪೋಲಿಸರು ದಾಳಿ ಮಾಡಿದಾಗ 10 ಸಾವಿರಕ್ಕೂ ಹೆಚ್ಚು ಸೀರೆ, 500 ಜೊತೆ ಚಪ್ಪಲಿ ಸಿಕ್ಕವು. ಅವರ ದತ್ತು ಮಗನ ಮದುವೆ ‘ನ ಭೂತೋ ನ ಭವಿಷ್ಯತ್' ಎನ್ನುವಂತೆ ಏರ್ಪಾಡಾಗಿತ್ತು. ಕೇವಲ ಅಲಂಕಾರಕ್ಕೇ 750 ಮಿಲಿಯನ್ ರೂಪಾಯಿ ಹಾಗೂ ಊಟೋಪಚಾರಕ್ಕೆ 15 ಮಿಲಿಯನ್ ರೂಪಾಯಿಗಳನ್ನು ವ್ಯಯಿಸಲಾಗಿತ್ತು. ಇಂತಹ ಆಢಂಬರದ ಬದುಕು ತಮಗೆ ಮುಳುವಾಗುತ್ತದೆ ಎಂದು ಯೋಚಿಸುವ ತಾಳ್ಮೆಯೂ ಅವರಿಗಿರಲಿಲ್ಲ. ಹಾಗಾಗಿ ಜಯಲಿಲಿತಾ ಅವರು ಕಾನೂನಿನ ಕಪಿಮುಷ್ಠಿಯಿಂದ ತಪ್ಪಿಸಕೊಳ್ಳಲಾಗದೆ ತಮ್ಮ ವಿರುದ್ಧ ತಾವೇ ಸಾಕ್ಷಿಗಳನ್ನು ಸೃಷ್ಟಿಸಿಕೊಳ್ಳುತ್ತಾ ಹೋದರು.

ಸುಮಾರು 18 ವರ್ಷಗಳ ನಂತರ ಜಯಲಲಿತಾ ವಿರುದ್ಧ ತೀರ್ಪು ಬಂದಿದೆ. 2001ಕ್ಕೆ ಮುಂಚೆಯೇ ಈ ತೀರ್ಪು ಬರಬೇಕಿತ್ತು. ಯಾಕೆಂದರೆ ಜಯಲಲಿತಾ ತಮ್ಮ ಅಧಿಕಾರವಾಧಿಯಲ್ಲಿ ಕ್ರಮೇಣ ಮಾಗುತ್ತಾ ನಡೆದಿದ್ದರು. ದರ್ಪ ಮರೆತು ನಿಜವಾದ 'ಅಮ್ಮ' ನಾಗುವ ಹೊತ್ತಿನಲ್ಲಿ....ಮುಂದೆ ಓದಿ

English summary
India has seen many politicians convited in bribe India has seen many politicians convicted in bribe case but many have escaped from the clutches of law. Then how come J Jayalalithaa convicted and jailed in Disproportionate assets case, Is Jayalalithaa is not clever enough to defend her case and what will be the impact on popular schemes she launched.Here is an article by Turuvekere Prasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X