Get Updates
Get notified of breaking news, exclusive insights, and must-see stories!

BBMP: ವಾಣಿಜ್ಯ ಮಳಿಗೆಗಳ ಬೋರ್ಡ್‌ಗಳಲ್ಲಿ 'ಕನ್ನಡ' ಅಳವಡಿಕೆ ಆಗಿದ್ದೆಷ್ಟು?: ಅಂಕಿ ಸಂಖ್ಯೆ ಮಾಹಿತಿ

ಬೆಂಗಳೂರು, ಜನವರಿ 30: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಭಾಂಗಣ ಕೊಠಡಿಯಲ್ಲಿ ನಡೆದ ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

How many Commercial Shops have implemented mandatory Kannada in name plate in bbmp under

ಜಾರಿಯಾದ ನೋಟಿಸ್, ಕನ್ನಡ ಅಳವಡಿಕೆ ಮಳಿಗೆಗಳ ವಿವರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಆ ಪೈಕಿ 16,813 ಮಳಿಗೆಗಳು ಶೇಕಡಾ 60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲಾಗಿದೆ. ಇನ್ನೂ 32,428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸವುದು ಬಾಕಿ ಇದೆ.

ಮುಂದಿನ ತಿಂಗಳ ಪೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು.

ಶಿಸ್ತು ಕ್ರಮ ಜರುಗಿಸಲು ಸೂಚನೆ

ಬೆಂಗಳೂರಿನ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳುವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೇ ನಾಮಫಲಕ ಅಳವಡಿಸುವಂತೆ ಕ್ರಮವಹಿಸಿ ಎಂದರು.

How many Commercial Shops have implemented mandatory Kannada in name plate in bbmp under

ದೂರುಗಳ ತ್ವರಿತವಾಗಿ ಇತ್ಯರ್ಥಕ್ಕೆ ಸೂಚನೆ

ಬಿಬಿಎಂಪಿಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕಿದೆ.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕೆಂದು ತುಷಾರ್ ಗಿರಿನಾಥ್ ಹೇಳಿದರು.

ಈ ಬಿಬಿಎಂಪಿ ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+