ಸ್ವಾತಂತ್ರ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿಗೆ ಪತ್ನಿ ವಿಯೋಗ
ಬೆಂಗಳೂರು, ಡಿಸೆಂಬರ್ 17 : ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಪತ್ನಿ ಲಲಿತಮ್ಮ ವಿಧಿವಶರಾದರು. ಮೃತದೇಹವನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾನ ಮಾಡಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಮಂಗಳವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಧ್ಯಾಹ್ನ 2 ಗಂಟೆಯ ತನಕ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಬಳಿಕ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ದಾನ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಲಲಿತಮ್ಮ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ದೊರೆಸ್ವಾಮಿ ಅವರ ಬೆನ್ನೆಲುಬಾಗಿದ್ದ ಲಲಿತಮ್ಮನವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುವುದಾಗಿ" ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, "ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಪತ್ನಿ ಲಲಿತಮ್ಮ ಅವರ ನಿಧನದ ಸುದ್ದಿ ತಿಳಿದು ದು:ಖವಾಯಿತು. ದೊರೆಸ್ವಾಮಿಯವರು ಮತ್ತು ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಹೇಳಿದ್ದಾರೆ.
ಡಾ. ಜಿ. ಪರಮೇಶ್ವರ ಟ್ವೀಟ್
ಹಿರಿಯ ಚೇತನ ಶ್ರೀ ಎಚ್.ಎಸ್. ದೊರೆಸ್ವಾಮಿಯವರ ಪತ್ನಿ ಲಲಿತಮ್ಮನವರು ಇನ್ನಿಲ್ಲ ಎಂದು ತಿಳಿದು ಬಂದಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ. ದೊರೆಸ್ವಾಮಿಯವರಿಗೆ ಮತ್ತು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
— Dr. G Parameshwara (@DrParameshwara) December 17, 2019












Click it and Unblock the Notifications