ಮಹದೇವ ಪ್ರಸಾದ್ ನಿಧನ: ಕಣ್ಣೀರಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಜನವರಿ 3: ಸಕ್ಕರೆ, ಸಹಕಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ನಿಧನ ಹೊಂದಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದು, ಮಂಗಳವಾರ ಸರಕಾರಿ ರಜೆ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ವೈಯಕ್ತಿಕವಾಗಿ ನಮಗೆ ನಷ್ಟವಾಗಿದೆ, ಪಕ್ಷಕ್ಕೆ ನಷ್ಟವಾಗಿದೆ ಅವರೊಬ್ಬ ಸಜ್ಜನ ರಾಜಕಾರಣಿ ಎಂದು ಹನಿಗಣ್ಣಾದರು. ನಂತರ ಮೂರು ದಿನಗಳ ಕಾಲ ಶೋಕಾಚರಣೆ ಮತ್ತು ಮಂಗಳವಾರ ಸಾರ್ವತ್ರಿಕ ರಜಾ ಘೋಷಣೆ ಮಾಡಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

ಸಚಿವ ಮಹದೇವ ಪ್ರಸಾದ್ ಮಿತ ಬಾಷಿಯಾಗಿದ್ದು, ಸೌಮ್ಯ, ಸಜನ ರಾಜಕಾರಣಿಯಾಗಿದ್ದರು. ಅವರು ಡಿಸೆಂಬರ್ 31 ರೊಂದು ನನ್ನೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅವರದ್ದು ಮಾದರಿ ಕುಟುಂಬ ಒಬ್ಬನೇ ಮಗ, ಇತ್ತಿಚೆಗೆ ಮೊಮ್ಮೊಗ ಜನಿಸಿದ್ದ. ಪ್ರಸಾದ್ ಅವರು ಯಾರೋಂದಿಗೂ ಜಗಳವಾಡಿದ್ದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]
ರಾಜ್ಯದ ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರ ಅಕಾಲಿಕ ಸಾವು ನನಗೆ ಆಘಾತವನ್ನುಂಟುಮಾಡಿದೆ. ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
— CM of Karnataka (@CMofKarnataka) January 3, 2017
ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ, ಮಹದೇವ ಪ್ರಸಾದ್ ಅವರಿಗೆ ದೇವರು ಚಿರಶಾಂತಿ ನೀಡಲಿ ಎಂದು ಹೇಳಿದರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications